ಸುಳ್ಯ: ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಅಡ್ಡಮತದಾನದ ಬಳಿಕ ಸಂಘಪರಿವಾರ, ಸಹಕಾರ ಭಾರತಿ ಹಾಗೂ ಬಿಜೆಪಿ ಸೂಚನೆಯಂತೆ ಮತದಾನದಲ್ಲಿ ಭಾಗವಹಿಸಿದ ಎಲ್ಲರೂ ರಾಜೀನಾಮೆ ನೀಡಲು ತಿಳಿಸಲಾಗಿತ್ತು. ಇದೀಗ ರಾಜಿನಾಮೆ ಪರ್ವ ಆರಂಭವಾಗಿದ್ದು ನೆಲ್ಲೂರು ಕೆಮ್ರಾಜೆ ಸಹಕಾರಿ ಸಂಘದ ಅಧ್ಯಕ್ಷ , ತಾಲೂಕು ಸಹಕಾರ ಭಾರತಿ ಅಧ್ಯಕ್ಷ ವಿಷ್ಣು ಭಟ್ ರಾಜಿನಾಮೆ ನೀಡಿದ್ದಾರೆ.
ಸಂಘದ ಸಭೆ ಕರೆದ ಬಳಿಕ ರಾಜಿನಾಮೆ ನಿರ್ಧಾರ ಘೋಷಿಸಿದ್ದಾರೆ. ಇದಕ್ಕೆ ಸಂಘದ ನಿರ್ದೇಶಕರು ಕೆಲವರು ಆಕ್ಷೇಪ ವ್ಯಕ್ತಪಡಿಸಿದ ಬಗ್ಗೆ ತಿಳಿದುಬಂದಿದೆ. ಸಂಘದ ಸದಸ್ಯರ ಹಿತದೃಷ್ಠಿಯಿಂದ ಸಹಕಾರಿ ಸಂಘದ ಅಧ್ಯಕ್ಷರು ಸಾಲ ಮರುಪಾವತಿ ಹಾಗೂ ಸಾಲ ಮಂಜೂರಾತಿ ಸಂದರ್ಭ ಅಗತ್ಯವಾಗಿದೆ. ಆದರೆ ಈ ಸಂದರ್ಭ ಅಧ್ಯಕ್ಷರು ರಾಜಿನಾಮೆ ನೀಡಿದರೆ ಸದಸ್ಯರಿಗೆ ಸಮಸ್ಯೆಯಾಗಲಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು ಎಂದು ತಿಳಿದುಬಂದಿದೆ.
ಈ ನಡುವೆ ಕಾಣಿಯೂರು ಸೇರಿದಂತೆ ಸುಳ್ಯ ಬಿಜೆಪಿ ಮಂಡಲ ವ್ಯಾಪ್ತಿಯ ಸಹಕಾರಿ ಸಂಘದಿಂದಲೂ ಚುನಾವಣೆಯಲ್ಲಿ ಭಾಗವಹಿಸಿದವರು ರಾಜೀನಾಮೆ ನೀಡುತ್ತಿದ್ದಾರೆ.
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…
ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…