ಜಗನ್ನಾಥ ಪೂಜಾರಿ
ಬೆಳ್ಳಾರೆ : ಪೆರುವಾಜೆ ಗ್ರಾಮದ ಮುಕ್ಕೂರು-ಕುಂಡಡ್ಕ ನೇಸರ ಯುವಕ ಮಂಡಲ ಇದರ 2020-21 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಸಮಿತಿ ಗೌರವಾಧ್ಯಕ್ಷ ಜಗನ್ನಾಥ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ಫೆ.2 ರಂದು ಮುಕ್ಕೂರಿನಲ್ಲಿ ನಡೆಯಿತು.
ಸಮಿತಿಯ ಗೌರವಾಧ್ಯಕ್ಷರಾಗಿ ಜಗನ್ನಾಥ ಪೂಜಾರಿ ಮುಕ್ಕೂರು, ಅಧ್ಯಕ್ಷರಾಗಿ ರಮೇಶ್ ಕಾನಾವು, ಕಾರ್ಯದರ್ಶಿಯಾಗಿ ಶಶಿ ಕುಮಾರ್ ಬಿ.ಎನ್., ಉಪಾಧ್ಯಕ್ಷರಾಗಿ ವಸಂತ ಕೆ.ಸಿ., ಜತೆ ಕಾರ್ಯದರ್ಶಿಯಾಗಿ ತಾರನಾಥ ಕೆ, ಕೋಶಾಧಿಕಾರಿಯಾಗಿ ರಾಮಚಂದ್ರ ಚೆನ್ನಾವರ ಅವಿರೋಧವಾಗಿ ಆಯ್ಕೆಯಾದರು. ನೇಸರ ಯುವಕ ಮಂಡಲದ ನಿಕಟಪೂರ್ವಾಧ್ಯಕ್ಷ ಕಿರಣ್ ಪ್ರಸಾದ್ ಕೆ, ಕಾರ್ಯದರ್ಶಿ ಶೀನಪ್ಪ ಎ ಅವರು ನೂತನ ಪದಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷ ಪೂವಪ್ಪ ನಾಯ್ಕ ಕೊಂಡೆಪ್ಪಾಡಿ, ಕಾರ್ಯದರ್ಶಿ ರಕ್ಷಿತ್ ಗೌಡ ಒರುಂಕು, ಮಾಜಿ ಅಧ್ಯಕ್ಷ ಪ್ರಸಾದ್ ಎನ್.ಕುಂಡಡ್ಕ, ರವೀಂದ್ರ ಎ, ವೆಂಕಟರಮಣ ಕುಂಡಡ್ಕ ಉಪಸ್ಥಿತರಿದ್ದರು.
ರೈತರ ಜಾನುವಾರುಗಳನ್ನು ಅರಣ್ಯದಲ್ಲಿ ಮೇಯಿಸುವ ವಿಚಾರವಾಗಿ ಹೊರಡಿಸಿದ ಆದೇಶವನ್ನು ಹಿಂಪಡೆಯುವಂತೆ ಒತ್ತಾಯಿಸಿ ಶಿವಮೊಗ್ಗ…
ಪ್ರಕೃತಿ ಮತ್ತು ಪರಿಸರ ಉಳಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ಒಟ್ಟು 11 ಕೋಟಿ 50…
ರಾಮ ಎಂದರೆ ಧರ್ಮ; ಸಮಾಜದ ಪ್ರತಿಯೊಬ್ಬರು ರಾಮನ ಅನುಶಾಸನಕ್ಕೆ ಒಳಪಡಬೇಕು ಎಂಬ ಭಾವದಿಂದ…
ಕ್ಯಾನ್ಸರ್ ರೋಗಿಗಳ ಅನುಕೂಲ ಹಾಗೂ ಆರೈಕೆ ಮೂಲಸೌಕರ್ಯವನ್ನು ಬಲಪಡಿಸುವ ಉದ್ದೇಶದಿಂದ ಪ್ರಧಾನಮಂತ್ರಿ ನರೇಂದ್ರ…
ಕೇಂದ್ರ ಸರ್ಕಾರದಿಂದ ಕಳೆದ ಮೂರು ವರ್ಷಗಳಲ್ಲಿ ಆರಂಭಿಕ ಶುಲ್ಕನ್ನು ಪರಿಗಣಿಸದೇ ಯೂರಿಯಾ ಸೇರಿದಂತೆ…
ನಾಗರಪಂಚಮಿ, ಶ್ರಾವಣ ಮಾಸದ ಶುಕ್ಲ ಪಕ್ಷದ ಪಂಚಮಿ ತಿಥಿಯಂದು ಆಚರಿಸಲಾಗುವ ಪವಿತ್ರ ಹಬ್ಬವಾಗಿದೆ.…