Advertisement
ನಮ್ಮೂರ ಸುದ್ದಿ

ಮುಕ್ಕೂರು : ದಿ.ಪುರುಷೋತ್ತಮ ಗೌಡ ಅಡ್ಯತಕಂಡರವರಿಗೆ ಸಾರ್ವಜನಿಕ ಶ್ರದ್ಧಾಂಜಲಿ

Share

ಮುಕ್ಕೂರು: ವಿವಿಧ ಸಂಘ-ಸಂಸ್ಥೆಗಳ ಆಶ್ರಯದಲ್ಲಿ ಇತ್ತೀಚೆಗೆ ಅಗಲಿದ ಮುಕ್ಕೂರು- ಪೆರುವಾಜೆ  ಶ್ರೀ ಶಾರದೋತ್ಸವ ಸಮಿತಿ ಸ್ಥಾಪಕ ಅಧ್ಯಕ್ಷ ಪುರುಷೋತ್ತಮ ಗೌಡ ಅಡ್ಯತಕಂಡ ಅವರಿಗೆ ಸಾರ್ವಜನಿಕ ಶ್ರದ್ಧಾಂಜಲಿ ಸಭೆ ಮುಕ್ಕೂರು ಶಾಲಾ ವಠಾರದಲ್ಲಿ  ನಡೆಯಿತು.

Advertisement
Advertisement

ನುಡಿನಮನ‌ ಸಲ್ಲಿಸಿದ‌ ಮುಕ್ಕೂರು ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸುಧಾಕರ ರೈ ಕುಂಜಾಡಿ,  ಪ್ರಗತಿಪರ ಕೃಷಿಕನಾಗಿ ಹಂತ-ಹಂತವಾಗಿ ಜೀವನದಲ್ಲಿ ಯಶಸ್ಸು ಕಂಡಿದ್ದ
ಪುರುಷೋತ್ತಮ ಗೌಡ ಅವರು ಹಲವು ಸಂಘ ಸಂಸ್ಥೆಗಳ ಮೂಲಕ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದರು. ಶಾರದೋತ್ಸವ ಸಮಿತಿ ಹುಟ್ಟು ಹಾಕಿದಲ್ಲದೆ ನಿರಂತರ ಕಾರ್ಯಚಟುವಟಿಕೆ ಮೂಲಕ ಸಮಿತಿಯ ಯಶಸ್ಸಿಗೆ ಶ್ರಮಿಸಿದ್ದರು. ಅವರ ಅಗಲಿಕೆ ಊರಿಗೆ ತುಂಬಲಾರದ ನಷ್ಟ ಎಂದರು.

Advertisement

ಪ್ರಗತಿಪರ ಕೃಷಿಕ ಗೋಪಾಲಕೃಷ್ಣ ಭಟ್ ಕಾನಾವು, ಅನಿರೀಕ್ಷಿತವಾಗಿ ಅಗಲಿದ ಪುರುಷೋತ್ತಮ ಗೌಡ ಅವರ ಅಗಲಿಕೆ ನಮಗೆಲ್ಲರಿಗೂ ದುಃಖ ತಂದಿದೆ‌‌ ಎಂದರು.

ಮುಕ್ಕೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಕುಂಬ್ರ ದಯಾಕರ ಆಳ್ವ ಮಾತನಾಡಿ, ಬಾಳಿ‌ ಬದುಕಬೇಕಿದ್ದ ವಯಸ್ಸಿನಲ್ಲಿ ಪುರುಷೋತ್ತಮ ಅವರನ್ನು ವಿಧಿ ತನ್ನತ್ತ ಸೆಳೆದುಕೊಂಡಿದೆ. ಅವರ ಸಾಮಾಜಿಕ‌ ಕಾರ್ಯವನ್ನು ಮುನ್ನಡೆಸುವ ಮೂಲಕ ಅವರ ನೆನೆಪು ಶಾಶ್ವತವನ್ನಾಗಿಸುವ ಪ್ರಯತ್ನ ನಾವು ಮಾಡೋಣ ಎಂದರು.

Advertisement

ಗ್ರಾ.ಪಂ.ಸದಸ್ಯ ಉಮೇಶ್ ಕೆ.ಎಂ.ಬಿ ಮಾತನಾಡಿ, ಎಲ್ಲ‌ ಸಂಘ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿ ಎಲ್ಲರೊಂದಿಗೆ ಒಡನಾಡಿಯಾಗಿ ಬೆರೆತವರು‌ ಎಂದು‌‌ ಅವರನ್ನು ಸ್ಮರಿಸಿದರು.

ಶಾರದೋತ್ಸವ ಸಮಿತಿ ಅಧ್ಯಕ್ಷ ಸಂಜೀವ ಗೌಡ ಬೈಲಂಗಡಿ ಅಧ್ಯಕ್ಷತೆ ವಹಿಸಿದ್ದರು. ಪ್ರಗತಿಪರ ಕೃಷಿಕ ಗೋಪಾಲಕೃಷ್ಣ ಭಟ್ ಕಾನಾವು, ಎಸ್ .ಡಿ.ಎಂ.ಸಿ ಅಧ್ಯಕ್ಷ ಕುಂಞಣ್ಣ ನಾಯ್ಕ ಅಡ್ಯತಕಂಡ, ಚೆನ್ನಾವರ ಅಭ್ಯುದಯ ಯುವಕ ಮಂಡಲ ಅಧ್ಯಕ್ಷ ದೀಕ್ಷಿತ್ ಜೈನ್, ಜ್ಯೋತಿ ಯುವಕ ಮಂಡಲ ಕಾರ್ಯದರ್ಶಿ ಸತ್ಯಪ್ರಸಾದ್ ಕಂಡಿಪ್ಪಾಡಿ, ಸುಬ್ರಾಯ ಭಟ್ ನೀರ್ಕಜೆ,  ಕುಶಾಲಪ್ಪ ಗೌಡ ಪೆರುವಾಜೆ, ತಿರುಮಲೇಶ್ವರ ಭಟ್ ಕಾನಾವು ಮೊದಲಾದವರು ಉಪಸ್ಥಿತರಿದ್ದರು.

Advertisement

ಶ್ರೀ ಶಾರದೋತ್ಸವ ಸಮಿತಿ ಕಾರ್ಯದರ್ಶಿ ಕಿರಣ್ ಚಾಮುಂಡಿಮೂಲೆ‌ ಸ್ವಾಗತಿಸಿ, ಕುಂಡಡ್ಕ-ಮುಕ್ಕೂರು

ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷ ಪ್ರಸಾದ್ ಎನ್.ಕೆ.ವಂದಿಸಿದರು. ಜ್ಯೋತಿ ಯುವಕ ಮಂಡಲ ಕಾರ್ಯದರ್ಶಿ ನಾರಾಯಣ ಕೊಂಡೆಪ್ಪಾಡಿ ನಿರೂಪಿಸಿದರು. ದಿವಾಕರ ಬೀರುಸಾಗು, ರೂಪಾನಂದ ಸಹಕರಿಸಿದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವೆದರ್‌ ಮಿರರ್‌ | 03.05.2024 |ಮೇ. 4ರಿಂದ ಮೋಡ| ಮೇ.6 ರಿಂದ ಅಲ್ಲಲ್ಲಿ ಮಳೆ ನಿರೀಕ್ಷೆ

04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…

9 hours ago

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |

03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

1 day ago

ಬಿದಿರು ಕೃಷಿ | ತರಕಾರಿ ಕೃಷಿಯಾಗಿ ಬಿದಿರು

ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…

2 days ago

ಅಡಿಕೆ ಹಳದಿ ಎಲೆರೋಗ – ಚುನಾವಣೆ

ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…

2 days ago

ವಾರದ ಅತಿಥಿ | ಸುಬ್ರಾಯ ಚೊಕ್ಕಾಡಿ ಮಾತು

https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್‌ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…

2 days ago

ಮಕ್ಕಳ ಹಬ್ಬ…

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪಂಜದಲ್ಲಿ ಮಕ್ಕಳ ಬೇಸಿಗೆ ಶಿಬಿರ ಮಕ್ಕಳ…

2 days ago