ಸುಳ್ಯ: ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರು ಸೇನೆಯ ಸುಳ್ಯ ತಾಲೂಕು ಘಟಕದ ವತಿಯಿಂದ ಕೆಂದ್ರ ಸರ್ಕಾರದ ಮುಕ್ತ ಮಾರುಕಟ್ಟೆ ಒಪ್ಪಂದಗಳು ಮತ್ತು ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ( ಆರ್.ಸಿ.ಇ.ಪಿ) ವಿರುದ್ಧ ಖಂಡನಾ ಸಭೆ ನಡೆಯಿತು.
ಸುಳ್ಯದ ಎಪಿಎಂಸಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮುಕ್ತ ಮಾರುಕಟ್ಟೆ ಒಪ್ಪಂದ ಮತ್ತು ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವವನ್ನು ವಿರೋದಿಸುವ ನಿರ್ಣಯ ಸರ್ವಾನುಮತದಿಂದ ಕೈಗೊಳ್ಳಲಾಯಿತು.
ರೈತ ಸಂಘ ರಾಜ್ಯ ಕಾರ್ಯದರ್ಶಿ ರವಿಕಿರಣ ಪುಣಚ ವಿಚಾರ ಮಂಡಿಸಿ ರೈತ ವಿರೋಧಿ ನೀತಿಯನ್ನು ಖಂಡಿಸುವುದಾಗಿ ಹೇಳಿದರು. ಈ ನಿರ್ಣಯದ ಪ್ರತಿಯನ್ನು ಸುಳ್ಯದ ತಹಸೀಲ್ದಾರ್ ಮೂಲಕ ಜಿಲ್ಲಾಧಿಖಾರಿಗಳಿಗೆ ಹಾಗು ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಮುಖ್ಯ ಮಂತ್ರಿ ಹಾಗು ಪ್ರಧಾನಮಂತ್ರಿಗೂ ತಲುಪಿಸಲಾಗುವುದು ಎಂದು ತಿಳಿಸಿದರು. ಯಾವುದೇ ಕಾರಣಕ್ಕೂ ಈ ಒಪ್ಪಂದಕ್ಕೆ ಸಹಿ ಹಾಕಬಾರದೆಂದು ತಿಳಿಸಲಾಗುವುದು. ದೇಶದಾದ್ಯಂತ 224 ರೈತ ಸಂಘಟನೆಗಳು ಈ ಒಪ್ಪಂದ ವಿರೋಧಿಸಿ ಹೋರಾಟ ನಡೆಸುತ್ತಿವೆ ಎಂದು ರವಿಕಿರಣ ಪುಣಚ ತಿಳಿಸಿದರು .
ಸಭೆಯಲ್ಲಿ ರೈತ ಸಂಘ ಸುಳ್ಯ ತಾಲೂಕು ಅಧ್ಯಕ್ಷ ಲೋಲಜಾಕ್ಷ ಭೂತಕಲ್ಲು ,ಪ್ರಧಾನ ಕಾರ್ಯದರ್ಶಿ ತೀರ್ಥರಾಮ ನೆಡ್ಚಿಲು ,ಜಿಲ್ಲಾ ಕಾರ್ಯದರ್ಶಿ ದಿವಾಕರ ಪೈ ಮಜಿಗುಂಡಿ ,ಉಪಾಧ್ಯಕ್ಷರಾದ ಮುರಳೀಧರ ಅಡ್ಕಾರು ,ಖಜಾಂಜಿ ದೇವಪ್ಪ ಕುಂದಲ್ಪಾಡಿ ,ವಲಯ ಅದ್ಯಕ್ಷರಾದ ಲೋಕಯ್ಯ ಅತ್ಯಾಡಿ ,ತೀರ್ಥರಮ ಉಳುವಾರು ಹಾಗು ಗ್ರಾಮಗಳ ರೈತರು ಉಪಸ್ಥಿತರಿದ್ದರು .
ರಾಜ್ಯದಲ್ಲಿ ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ತೋಟಗಾರಿಕಾ ಬೆಳೆಗಳಿಗೆ…
ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗಿದೆ. ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಉತ್ತರ…
ತುಳುನಾಡಿನಲ್ಲಿ ಆಟಿ ಬಹಳ ಮಹತ್ವದ ತಿಂಗಳು. ಈ ಸಮಯದಲ್ಲಿ ವಿವಿಧ ಆಚರಣೆಗಳು ಇರುತ್ತವೆ.…
ಎತ್ತಿನಹೊಳೆ ಯೋಜನೆಯಡಿ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಮೊದಲ…
ಅರಣ್ಯ ಭೂಮಿ ಒತ್ತುವರಿ ಮಾಡಿದರೆ ತೆರವು ಮಾಡಬೇಕಾಗುತ್ತದೆ. ಬೇಲಿ ಹಾಕುವುದರಿಂದ ಅರಣ್ಯ ಭೂಮಿ…
ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ರಾಜಸ್ಥಾನದಲ್ಲಿ ಸುಮಾರು 30…