ಮುಕ್ತ ವ್ಯಾಪಾರ ಒಪ್ಪಂದಗಳಿಂದ ಕೃಷಿಕರಿಗೆ ನಷ್ಟ : ರೈತ ಸಂಘ, ಹಸಿರು ಸೇನೆಯಿಂದ ಪ್ರತಿಭಟನೆ

October 25, 2019
10:00 AM

ಮಡಿಕೇರಿ :  ಎಲ್ಲಾ ಮುಕ್ತ ವ್ಯಾಪಾರ ಒಪ್ಪಂದಗಳಿಂದ ಕೃಷಿ ಸಂಬಂಧಿತ ವಲಯಗಳನ್ನು ಹೊರಗಿಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಕೊಡಗು ಜಿಲ್ಲಾ ಘಟಕಗಳು ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿದವು.

Advertisement
Advertisement

ನಗರದ ಕಾವೇರಿ ಕಲಾಕ್ಷೇತ್ರದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಮೆರವಣಿಗೆ ಮೂಲಕ ಸಾಗಿದ ಪ್ರತಿಭಟನಾಕಾರರು ಮುಕ್ತ ವ್ಯಾಪಾರ ಒಪ್ಪಂದಗಳ ವಿರುದ್ಧ ಘೋಷಣೆಗಳನ್ನು ಕೂಗಿದರು. ಕೇಂದ್ರ ಸರಕಾರ ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ ಆರ್.ಸಿ.ಇ.ಪಿ. ಒಪ್ಪಂದದ ಮೂಲಕ ದೇಶದ ಕೃಷಿಯನ್ನು ತೆರಿಗೆ ಮುಕ್ತ ವ್ಯಾಪಾರ ವಲಯಕ್ಕೆ ತೆರೆದಿಡಲು ಒಪ್ಪಂದ ಮಾಡಿಕೊಳ್ಳಲು ಸಿದ್ಧತೆ ಮಾಡಿಕೊಂಡಿದೆ. ಒಂದು ವೇಳೆ ಇದು ಜಾರಿಯಾದರೆ ಕೃಷಿ, ತೋಟಗಾರಿಕೆ, ಹೈನುಗಾರಿಕೆ ಕ್ಷೇತ್ರಕ್ಕೆ ನಷ್ಟವಾಗುವುದಲ್ಲದೆ ಉದ್ಯೋಗವೂ ಕಡಿತವಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದ ಪ್ರಮುಖರು, ಕೇಂದ್ರ ಮತ್ತು ರಾಜ್ಯ ಸರ್ಕಾರ ಈ ಒಪ್ಪಂದವನ್ನು ಕೈ ಬಿಡಬೇಕೆಂದು ಒತ್ತಾಯಿಸಿದರು.

ಕರಿಮೆಣಸು ದರ ಕುಸಿತಕ್ಕೆ ಇಂತಹ ಒಪ್ಪಂದಗಳೇ ಕಾರಣವಾಗಿದೆ ಎಂದು ಆರೋಪಿಸಿದ ರೈತ ಸಂಘದ ಜಿಲ್ಲಾಧ್ಯಕ್ಷ ಮನುಸೋಮಯ್ಯ, ಆಮದು ನೀತಿ ಬದಲಾಗಬೇಕೆಂದು ತಿಳಿಸಿದರು. ಮುಕ್ತ ವ್ಯಾಪಾರ ಒಪ್ಪಂದದಿಂದ ಬಹುತೇಕ ಕೃಷಿ ಸರಕುಗಳ ಮೇಲಿನ ಆಮದು ಸುಂಕ ಶಾಶ್ವತವಾಗಿ ಶೂನ್ಯವಾಗುತ್ತದೆ, ಅನೇಕ ದೇಶಗಳು ತಮ್ಮ ಹೆಚ್ಚುವರಿ ಕೃಷಿ ಉತ್ಪನ್ನಗಳನ್ನು ಭಾರತದಲ್ಲಿ ಮಾರಲು ಸಾಧ್ಯವಾಗುತ್ತದೆ. ಇದರಿಂದಾಗಿ ಭಾರತದ ಲಕ್ಷಾಂತರ ಸಣ್ಣ ರೈತರ ಮತ್ತು ವಿಶೇಷವಾಗಿ ಮಹಿಳೆಯರ ಜೀವನೋಪಾಯವನ್ನು ಬೆಂಬಲಿಸುವ ಹೈನುಗಾರಿಕಾ ಕ್ಷೇತ್ರ ಅಪಾಯಕ್ಕೆ ಸಿಲುಕಲಿದೆ ಎಂದರು.

ಜಿಲ್ಲಾ ಸಂಚಾಲಕ ಪುಚ್ಚಿಮಾಡ ಸುಭಾಷ್ ಸುಬ್ಬಯ್ಯ, ಪ್ರಧಾನ ಕಾರ್ಯದರ್ಶಿ ಚಟ್ರುಮಾಡ ಸುಜೈ ಬೋಪಯ್ಯ, ಕಾರ್ಯದರ್ಶಿ ಅಜ್ಜಮಾಡ ಚಂಗಪ್ಪ, ಖಜಾಂಚಿ ಸಬಿತ್ ಭೀಮಯ್ಯ, ರೈತ ಮುಖಂಡರಾದ ಚಕ್ಕೇರ ಕಾಳಯ್ಯ, ಚಂಗುಲಂಡ ಸೂರಜ್, ಆಲೆಮಾಡ ಮಂಜುನಾಥ್, ಮೋಟಯ್ಯ, ಉತ್ತಯ್ಯ, ಸೋಮಣ್ಣ, ಅಶೋಕ್, ಗಿರಿ, ಶೆಟ್ಟಿಗೇರಿ ಹೋಬಳಿ ಸಂಚಾಲಕ ಚಟ್ಟಂಗಡ ಕಾರ್ಯಪ್ಪ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Advertisement

Advertisement
Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಆಪ್‌ನಲ್ಲಿ ವಿವರ ದಾಖಲಿಸಲು ರೈತರಿಗೆ ಮನವಿ
June 28, 2025
9:16 PM
by: The Rural Mirror ಸುದ್ದಿಜಾಲ
ನಾರಾಯಣಪುರ ಅಣೆಕಟ್ಟೆಯ ನೀರಿನ ಮಟ್ಟ ಹೆಚ್ಚಳ | ನದಿ ಪಾತ್ರದ ಜನರಿಗೆ ಜಾಗ್ರತೆಯಿಂದ ಇರಲು ಎಚ್ಚರಿಕೆ
June 28, 2025
8:36 PM
by: The Rural Mirror ಸುದ್ದಿಜಾಲ
ಹಳ್ಳಿಗಳು ಅಭಿವೃದ್ಧಿ ಹೊಂದಿದರೆ ಮಾತ್ರ ದೇಶದ ಅಭಿವೃದ್ಧಿ
June 28, 2025
8:29 PM
by: The Rural Mirror ಸುದ್ದಿಜಾಲ
ಕೃಷಿ ಕೂಡಾ ಅತಿ ಹೆಚ್ಚು ಉದ್ಯೋಗ ಒದಗಿಸುವ ಕ್ಷೇತ್ರ
June 28, 2025
8:14 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group