ಮಡಿಕೇರಿ : ಎಲ್ಲಾ ಮುಕ್ತ ವ್ಯಾಪಾರ ಒಪ್ಪಂದಗಳಿಂದ ಕೃಷಿ ಸಂಬಂಧಿತ ವಲಯಗಳನ್ನು ಹೊರಗಿಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಕೊಡಗು ಜಿಲ್ಲಾ ಘಟಕಗಳು ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿದವು.
ನಗರದ ಕಾವೇರಿ ಕಲಾಕ್ಷೇತ್ರದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಮೆರವಣಿಗೆ ಮೂಲಕ ಸಾಗಿದ ಪ್ರತಿಭಟನಾಕಾರರು ಮುಕ್ತ ವ್ಯಾಪಾರ ಒಪ್ಪಂದಗಳ ವಿರುದ್ಧ ಘೋಷಣೆಗಳನ್ನು ಕೂಗಿದರು. ಕೇಂದ್ರ ಸರಕಾರ ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ ಆರ್.ಸಿ.ಇ.ಪಿ. ಒಪ್ಪಂದದ ಮೂಲಕ ದೇಶದ ಕೃಷಿಯನ್ನು ತೆರಿಗೆ ಮುಕ್ತ ವ್ಯಾಪಾರ ವಲಯಕ್ಕೆ ತೆರೆದಿಡಲು ಒಪ್ಪಂದ ಮಾಡಿಕೊಳ್ಳಲು ಸಿದ್ಧತೆ ಮಾಡಿಕೊಂಡಿದೆ. ಒಂದು ವೇಳೆ ಇದು ಜಾರಿಯಾದರೆ ಕೃಷಿ, ತೋಟಗಾರಿಕೆ, ಹೈನುಗಾರಿಕೆ ಕ್ಷೇತ್ರಕ್ಕೆ ನಷ್ಟವಾಗುವುದಲ್ಲದೆ ಉದ್ಯೋಗವೂ ಕಡಿತವಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದ ಪ್ರಮುಖರು, ಕೇಂದ್ರ ಮತ್ತು ರಾಜ್ಯ ಸರ್ಕಾರ ಈ ಒಪ್ಪಂದವನ್ನು ಕೈ ಬಿಡಬೇಕೆಂದು ಒತ್ತಾಯಿಸಿದರು.
ಕರಿಮೆಣಸು ದರ ಕುಸಿತಕ್ಕೆ ಇಂತಹ ಒಪ್ಪಂದಗಳೇ ಕಾರಣವಾಗಿದೆ ಎಂದು ಆರೋಪಿಸಿದ ರೈತ ಸಂಘದ ಜಿಲ್ಲಾಧ್ಯಕ್ಷ ಮನುಸೋಮಯ್ಯ, ಆಮದು ನೀತಿ ಬದಲಾಗಬೇಕೆಂದು ತಿಳಿಸಿದರು. ಮುಕ್ತ ವ್ಯಾಪಾರ ಒಪ್ಪಂದದಿಂದ ಬಹುತೇಕ ಕೃಷಿ ಸರಕುಗಳ ಮೇಲಿನ ಆಮದು ಸುಂಕ ಶಾಶ್ವತವಾಗಿ ಶೂನ್ಯವಾಗುತ್ತದೆ, ಅನೇಕ ದೇಶಗಳು ತಮ್ಮ ಹೆಚ್ಚುವರಿ ಕೃಷಿ ಉತ್ಪನ್ನಗಳನ್ನು ಭಾರತದಲ್ಲಿ ಮಾರಲು ಸಾಧ್ಯವಾಗುತ್ತದೆ. ಇದರಿಂದಾಗಿ ಭಾರತದ ಲಕ್ಷಾಂತರ ಸಣ್ಣ ರೈತರ ಮತ್ತು ವಿಶೇಷವಾಗಿ ಮಹಿಳೆಯರ ಜೀವನೋಪಾಯವನ್ನು ಬೆಂಬಲಿಸುವ ಹೈನುಗಾರಿಕಾ ಕ್ಷೇತ್ರ ಅಪಾಯಕ್ಕೆ ಸಿಲುಕಲಿದೆ ಎಂದರು.
ಜಿಲ್ಲಾ ಸಂಚಾಲಕ ಪುಚ್ಚಿಮಾಡ ಸುಭಾಷ್ ಸುಬ್ಬಯ್ಯ, ಪ್ರಧಾನ ಕಾರ್ಯದರ್ಶಿ ಚಟ್ರುಮಾಡ ಸುಜೈ ಬೋಪಯ್ಯ, ಕಾರ್ಯದರ್ಶಿ ಅಜ್ಜಮಾಡ ಚಂಗಪ್ಪ, ಖಜಾಂಚಿ ಸಬಿತ್ ಭೀಮಯ್ಯ, ರೈತ ಮುಖಂಡರಾದ ಚಕ್ಕೇರ ಕಾಳಯ್ಯ, ಚಂಗುಲಂಡ ಸೂರಜ್, ಆಲೆಮಾಡ ಮಂಜುನಾಥ್, ಮೋಟಯ್ಯ, ಉತ್ತಯ್ಯ, ಸೋಮಣ್ಣ, ಅಶೋಕ್, ಗಿರಿ, ಶೆಟ್ಟಿಗೇರಿ ಹೋಬಳಿ ಸಂಚಾಲಕ ಚಟ್ಟಂಗಡ ಕಾರ್ಯಪ್ಪ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ವಿಶ್ವ ಆರೋಗ್ಯ ಸಂಸ್ಥೆಯು(WHO) ಅಡಿಕೆ ಕ್ಯಾನ್ಸರ್ ಕಾರಕವೆಂದು ಸಾಬೀತುಪಡಿಸಲು ಸಂಶೋಧನಾ ವರದಿಗಳನ್ನೇ ತಿರುಚಿ…
ಅಡಿಕೆಯ ಔಷಧೀಯ ಗುಣಗಳು ಹಲವಾರು ಇವೆ. ಅಡಿಕೆಯ ಚೊಗರಿನಿಂದ ತಯಾರು ಮಾಡುವ ಸೋಪು…
ಮಂಗಳೂರಿನಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ 2025ನೇ ಸಾಲಿನ ಇಂಡಿಯನ್ ಅಕಾಡೆಮಿ ಆಫ್ ಓರಲ್…
ಕೃಷಿಗಾಗಿ, ಕೃಷಿ ಉಳಿಸುವುದಕ್ಕಾಗಿ ಸುರಂಗ ಕೊರೆದು ನೀರು ಹರಿಸಿದ ವಿಶೇಷ ಸಾಧನೆಯನ್ನು ಮಾಡಿದ್ದಾರೆ…
ದೇಶಾದ್ಯಂತ ಅಳಿವಿನಂಚಿಗೆ ತಲುಪಿರುವ ಗುಬ್ಬಚ್ಚಿ ಸಂಕುಲದ ರಕ್ಷಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು…
ಸ್ವಾವಲಂಬನೆಯ ಜೀವನ ಕಟ್ಟಿಕೊಳ್ಳುತ್ತಿರುವ ಅನೇಕ ಮಹಿಳಾ ಉದ್ಯಮಿದಾರರಿಗೆ ಎನ್ಆರ್ ಎಲ್ಎಮ್ ಯೋಜನೆಯು ಸ್ಪೂರ್ತಿಯ…