ಮುಖ್ಯಮಂತ್ರಿಗಳ ಪರಿಹಾರ ನಿಧಿ ಖಾತೆಯಲ್ಲಿ 137.32 ಕೋಟಿ ರೂ. ಸಂಗ್ರಹ

September 19, 2019
9:47 PM

ಬೆಂಗಳೂರು: ರಾಜ್ಯದ ಪ್ರವಾಹ ಪರಿಸ್ಥಿತಿಗೆ ಸ್ಪಂದಿಸಿರುವ ನಾಡಿನ ಜನತೆ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಸಾಕಷ್ಟು ಮಂದಿ ಸ್ವಯಂ ಸ್ಫೂರ್ತಿಯಿಂದ ದೇಣಿಗೆ ನೀಡುತ್ತಿದ್ದಾರೆ.
ಮುಖ್ಯಮಂತ್ರಿಗಳ ಪ್ರಕೃತಿ ವಿಕೋಪ ಪರಿಹಾರ ನಿಧಿ ಖಾತೆಗೆ ಆ. 9 ರಿಂದ ಸೆ. 18 ರ ವರೆಗೆ 137.32 ಕೋಟಿ ರೂ. ದೇಣಿಗೆ ಸಂಗ್ರಹವಾಗಿದೆ.

ವಿವಿಧ ಸಂಘ, ಸಂಸ್ಥೆಗಳು, ಶಿಕ್ಷಣ ಸಂಸ್ಥೆಗಳು, ಸರಕಾರಿ ನೌಕರರು, ವಿವಿಧ ನಿಗಮ-ಮಂಡಳಿಗಳ ನೌಕರರು  ದೇಣಿಗೆ ನೀಡಿದ್ದು, ಧರ್ಮಸ್ಥಳದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ 25 ಕೋಟಿ ರೂ., ಇನ್ಫೋಸಿಸ್ ಪ್ರತಿಷ್ಠಾನದ ವತಿಯಿಂದ ಅಧ್ಯಕ್ಷೆ ಸುಧಾ ಮೂರ್ತಿ ಅವರು 10 ಕೋಟಿ ರೂ. ದೇಣಿಗೆ ನೀಡಿ ಇತರರಿಗೆ ಸ್ಫೂರ್ತಿಯಾಗಿದ್ದಾರೆ. ಅಂತೆಯೇ ಎನ್ಎಂಡಿಸಿ 10 ಕೋಟಿ ರೂ. , ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ 5 ಕೋಟಿ ರೂ. ದೇಣಿಗೆ ನೀಡಿದ್ದಾರೆ. ರಾಜ್ಯ ಸರಕಾರೆಇ ನೌಕರರ ಸಂಘ, ನಿವೃತ್ತ ನೌಕರರ ಸಂಘಗಳು ಮುಖ್ಯಮಂತ್ರಿಯವರನ್ನು ಭೇಟಿಯಾಗಿ ಒಂದು ದಿನದ ವೇತನ ನೀಡುವುದಾಗಿ ವಾಗ್ದಾನ ಮಾಡಿವೆ. ನಿಗಮ, ಮಂಡಳಿಗಳು ಸಹ  ದೇಣಿಗೆ ನೀಡಿದ್ದಾರೆ.

ಉದ್ಯಮಿಗಳು, ಸೇವಾ ಸಂಸ್ಥೆಗಳು, ಸಾರ್ವಜನಿಕರು ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಸಂತ್ರಸ್ತರ ನೆರವಿಗೆ ದೇಣಿಗೆ ನೀಡುವಂತೆ ಮುಖ್ಯಮಂತ್ರಿಗಳು ಮನವಿ ಮಾಡಿದ್ದಾರೆ.
ದೇಣಿಗ ನೀಡಲು ಬಯಸುವವರು, ಮುಖ್ಯಮಂತ್ರಿಗಳ ಪರಿಹಾರ ನಿಧಿಯ ಈ ಕೆಳಕಂಡ ಬ್ಯಾಂಕ್ ಖಾತೆಗಳಿಗೆ ಆನ್ಲೈನ್ ನಲ್ಲಿ ದೇಣಿಗೆ ಜಮಾ ಮಾಡಬಹುದು. ಅಥವಾ ಚೆಕ್ ಅಥವಾ ಡಿಡಿ ಮೂಲಕವೂ ದೇಣಿಗೆ ನೀಡಬಹುದು.

Chief Minister’s Relief Fund (Natural Calamity)
Bank: State Bank of India,
Branch: Vidhanasoudha
A/C No. 37887098605
IFSC Code: SBIN0040277
MICR No: 56002419

Bank Name: HDFC Bank Ltd.
Branch: Seshadripuram, Bangalore
A/C No.: 50100309178784
IFSC Code: HDFC0000367
MICR Code: 560240018

ಇದಲ್ಲದೆ, https://cmrf.karnataka.gov.in ವೆಬ್ ಸೈಟ್ ಮೂಲಕ ಹಾಗೂ ಭೀಮ್, ಪೇಟಿಎಂ, ಫೋನ್ ಪೇ, ಗೂಗಲ್ ಪೇ ಮೊದಲಾದ ಯುಪಿಐ ಆಪ್ ಗಳ ಮೂಲಕವೂ ಹಣ ವರ್ಗಾಯಿಸಬಹುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ
July 14, 2026
7:12 AM
by: ದ ರೂರಲ್ ಮಿರರ್.ಕಾಂ
ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ
July 14, 2026
6:47 AM
by: ದ ರೂರಲ್ ಮಿರರ್.ಕಾಂ
ಬ್ರಿಟನ್‌ನಲ್ಲಿ ಉರಿ ಬಿಸಿಲು – ಎರಡು ತಿಂಗಳಲ್ಲಿ 2,700ಕ್ಕೂ ಹೆಚ್ಚು ಸಾವು..! ಹವಾಮಾನ ಬದಲಾವಣೆಯಿಂದ ಶೇ.40ಕ್ಕೂ ಹೆಚ್ಚು ಜೀವಹಾನಿ ಎಂದ ಅಧ್ಯಯನ
July 14, 2026
6:41 AM
by: ದ ರೂರಲ್ ಮಿರರ್.ಕಾಂ
ಅಮರನಾಥದ ಹಿಮ ಶಿವಲಿಂಗ 90% ಕರಗಿತು…! ಹವಾಮಾನ ಬದಲಾವಣೆಯೇ ಕಾರಣವೇ?
July 13, 2026
7:17 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror