ಮುಳಿಯ ಜ್ಯುವೆಲ್ಸ್ ವತಿಯಿಂದ ಪೆರ್ಲ ಶ್ರೀ ಸತ್ಯನಾರಾಯಣ ವಿದ್ಯಾಸಂಸ್ಥೆಯಲ್ಲಿ ಚಿಣ್ಣರ ಚಿತ್ರ ಕಲರವ

July 25, 2019
1:00 PM

ಪುತ್ತೂರು :  ಪ್ರತಿಷ್ಠಿತ ಚಿನ್ನದ ಮಳಿಗೆ ಮುಳಿಯ ಜ್ಯುವೆಲ್ಲರ್ಸ್ ಮತ್ತು ಶ್ರೀ ಸತ್ಯನಾರಾಯಣ ವಿದ್ಯಾ ಸಂಸ್ಥೆ ಪೆರ್ಲ ಇದರ ಸಹಯೋಗದೊಂದಿಗೆ ಪೆರ್ಲ ಶ್ರೀ ಸತ್ಯನಾರಾಯಣ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳಿಗೆ ಪರಿಸರದ ಬಗ್ಗೆ ಅರಿವು ಮೂಡಿಸಲು  ಪರಿಸರ ಸಂರಕ್ಷಣೆಯ ಬಗ್ಗೆ ಚಿತ್ರಕಲಾ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಸುಮಾರು 275 ವಿದ್ಯಾರ್ಥಿ ವಿದ್ಯಾರ್ಥಿನಿಯರು ಭಾಗವಹಿಸಿ ಬಹುಮಾನಗಳನ್ನು ಪಡೆದರು.

Advertisement

ಕಾರ್ಯಕ್ರಮದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ  ಭಾಷಣದಲ್ಲಿ ಸಂಸ್ಥೆಯ ಮುಖ್ಯೋಪಾಧ್ಯಾಯರಾದ  ರಾಜೇಂದ್ರ.ಬಿ  ಮಾತನಾಡಿ ಮುಳಿಯ ಸಂಸ್ಥೆಯು ವ್ಯವಹಾರದ ಜೊತೆಗೆ ಹಲವಾರು ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸುತ್ತಿರುವುದು ಶ್ಲಾಘನೀಯ ವಿಷಯವಾಗಿದೆ. ನಮ್ಮ ಸಂಸ್ಥೆಯಲ್ಲಿ ಈ ಕಾರ್ಯಕ್ರಮ ಹಮ್ಮಿಕೊಂಡಿರುವುದು ನಮಗೆ ಹೆಮ್ಮೆ ತಂದಿದೆ. ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ ಎಂದರು. ಅದಲ್ಲದೆ ಪರಿಸರದ ರಕ್ಷಣೆ ಮತ್ತು ಚಿತ್ರಕಲೆಯ ಬಗ್ಗೆ ತಮಗಿರುವ ಆಸಕ್ತಿಯನ್ನು ವಿದ್ಯಾರ್ಥಿಗಳ ಮುಂದೆ ವಿವರಿಸಿ ಪ್ರೋತ್ಸಾಹಿಸಿದರು.

ಮುಖ್ಯ ಅತಿಥಿಯಾಗಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಮಹಾಲಿಂಗೇಶ್ವರ ಭಟ್ ಮಾತನಾಡಿ ಮುಳಿಯ ಸಂಸ್ಥೆಯೊಂದಿಗಿನ ತಮ್ಮ ಒಡನಾಟದೊಂದಿಗೆ ಎಳೆಯ ವಯಸ್ಸಿನಲ್ಲಿ ಮಕ್ಕಳಿಗೆ ಪರಿಸರದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಪ್ರಶಂಸಿಸಿದರು.

ಮುಳಿಯ ಸಂಸ್ಥೆಯ ಸೀನಿಯರ್ ಸೇಲ್ಸ್ ಆಫೀಸರ್  ಸುಬ್ರಹ್ಮಣ್ಯ ಭಟ್ ಪ್ರ್ರಾಸ್ತಾವಿಕವಾಗಿ ಮಾತನಾಡಿ ಸಂಸ್ಥೆಯ ಧ್ಯೇಯೋದ್ಧೇಶ ಹಾಗೂ ಶ್ರೀ ಸತ್ಯನಾರಾಯಣ ವಿದ್ಯಾಸಂಸ್ಥೆಯು ಚಿತ್ರಕಲಾ ಸ್ಪರ್ಧೆಯನ್ನು ಅಯೋಜಿಸಲು ಅವಕಾಶ ಮಾಡಿಕೊಟ್ಟದ್ದಕ್ಕೆ ಸಂಸ್ಥೆಯನ್ನು ಅಭಿನಂದಿಸಿದರು.

ವೇದಿಕೆಯಲ್ಲಿ ಮುಳಿಯ ಸಂಸ್ಥೆಯ ಶಾಖ ಪ್ರಬಂಧಕರಾದ ನಾಮದೇವ ಮಲ್ಯ ಹಾಗೂ ಫ್ಲೋರ್ ಮ್ಯಾನೇಜರಾದ ಆನಂದ ಕುಲಾಲ್ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ವಿದ್ಯಾ ಸಂಸ್ಥೆಯ ಅಧ್ಯಾಪಕರಾದ ಕೃಷ್ಣ ಪ್ರಸಾದ್ ನಿರೂಪಿಸಿದರು. ಮುಳಿಯ ಸಂಸ್ಥೆಯ ಮಾರ್ಕೆಟಿಂಗ್ ಮ್ಯಾನೇಜರ್ ಸಂಜೀವ ಹಾಗೂ ಸಂಸ್ಥೆಯ ಉದ್ಯೋಗಿಗಳಾದ ಸ್ವಾತಿ, ಮಮಿತಾ ಹಾಗೂ ವಿದ್ಯಾಸಂಸ್ಥೆಯ ಶಿಕ್ಷಕ ವೃಂದದವರು ಸಹಕರಿಸಿದರು.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಾಶಿಗಳಿಗೆ ಲಕ್ಷ್ಮಿದೇವಿ ಆಶೀರ್ವಾದದಿಂದ ಅಪಾರ ಸಂಪತ್ತು ಪ್ರಾಪ್ತಿ | ಏನು ಮಾಡ್ಬೇಕು? |
May 12, 2025
7:32 AM
by: ದ ರೂರಲ್ ಮಿರರ್.ಕಾಂ
ಕದನ ವಿರಾಮ ಬಳಿಕ ಪರಿಸ್ಧಿತಿ ಸಾಮಾನ್ಯ ಸ್ಧಿತಿಗೆ | ಶಾಂತಿ ಸ್ಧಾಪನೆಯ ಉದ್ದೇಶಕ್ಕೆ ಪೂರಕ ವಾತಾವರಣ
May 11, 2025
10:11 PM
by: The Rural Mirror ಸುದ್ದಿಜಾಲ
ಮುಳಿಯ ಕೃಷಿಗೋಷ್ಟಿ | ಕೃಷಿಕರೇ ಕೃಷಿ ಮಾರುಕಟ್ಟೆ ಸೃಷ್ಟಿಸಿಕೊಳ್ಳುವುದು ಹೇಗೆ..?
May 11, 2025
9:54 PM
by: The Rural Mirror ಸುದ್ದಿಜಾಲ
ಈ ರಾಶಿಯವರಿಗೆ ಒಂಟಿಯಾಗಿರುವುದೇ ಇಷ್ಟ, ಫ್ರೆಂಡ್ಸೂ ಬೇಡ, ಫ್ಯಾಮಿಲಿಯವ್ರೂ ಬೇಡ…!
May 11, 2025
7:21 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group