ಪುತ್ತೂರು : ಪ್ರತಿಷ್ಠಿತ ಚಿನ್ನದ ಮಳಿಗೆ ಮುಳಿಯ ಜ್ಯುವೆಲ್ಲರ್ಸ್ ಮತ್ತು ಶ್ರೀ ಸತ್ಯನಾರಾಯಣ ವಿದ್ಯಾ ಸಂಸ್ಥೆ ಪೆರ್ಲ ಇದರ ಸಹಯೋಗದೊಂದಿಗೆ ಪೆರ್ಲ ಶ್ರೀ ಸತ್ಯನಾರಾಯಣ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳಿಗೆ ಪರಿಸರದ ಬಗ್ಗೆ ಅರಿವು ಮೂಡಿಸಲು ಪರಿಸರ ಸಂರಕ್ಷಣೆಯ ಬಗ್ಗೆ ಚಿತ್ರಕಲಾ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಸುಮಾರು 275 ವಿದ್ಯಾರ್ಥಿ ವಿದ್ಯಾರ್ಥಿನಿಯರು ಭಾಗವಹಿಸಿ ಬಹುಮಾನಗಳನ್ನು ಪಡೆದರು.
ಕಾರ್ಯಕ್ರಮದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಭಾಷಣದಲ್ಲಿ ಸಂಸ್ಥೆಯ ಮುಖ್ಯೋಪಾಧ್ಯಾಯರಾದ ರಾಜೇಂದ್ರ.ಬಿ ಮಾತನಾಡಿ ಮುಳಿಯ ಸಂಸ್ಥೆಯು ವ್ಯವಹಾರದ ಜೊತೆಗೆ ಹಲವಾರು ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸುತ್ತಿರುವುದು ಶ್ಲಾಘನೀಯ ವಿಷಯವಾಗಿದೆ. ನಮ್ಮ ಸಂಸ್ಥೆಯಲ್ಲಿ ಈ ಕಾರ್ಯಕ್ರಮ ಹಮ್ಮಿಕೊಂಡಿರುವುದು ನಮಗೆ ಹೆಮ್ಮೆ ತಂದಿದೆ. ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ ಎಂದರು. ಅದಲ್ಲದೆ ಪರಿಸರದ ರಕ್ಷಣೆ ಮತ್ತು ಚಿತ್ರಕಲೆಯ ಬಗ್ಗೆ ತಮಗಿರುವ ಆಸಕ್ತಿಯನ್ನು ವಿದ್ಯಾರ್ಥಿಗಳ ಮುಂದೆ ವಿವರಿಸಿ ಪ್ರೋತ್ಸಾಹಿಸಿದರು.
ಮುಖ್ಯ ಅತಿಥಿಯಾಗಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಮಹಾಲಿಂಗೇಶ್ವರ ಭಟ್ ಮಾತನಾಡಿ ಮುಳಿಯ ಸಂಸ್ಥೆಯೊಂದಿಗಿನ ತಮ್ಮ ಒಡನಾಟದೊಂದಿಗೆ ಎಳೆಯ ವಯಸ್ಸಿನಲ್ಲಿ ಮಕ್ಕಳಿಗೆ ಪರಿಸರದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಪ್ರಶಂಸಿಸಿದರು.
ಮುಳಿಯ ಸಂಸ್ಥೆಯ ಸೀನಿಯರ್ ಸೇಲ್ಸ್ ಆಫೀಸರ್ ಸುಬ್ರಹ್ಮಣ್ಯ ಭಟ್ ಪ್ರ್ರಾಸ್ತಾವಿಕವಾಗಿ ಮಾತನಾಡಿ ಸಂಸ್ಥೆಯ ಧ್ಯೇಯೋದ್ಧೇಶ ಹಾಗೂ ಶ್ರೀ ಸತ್ಯನಾರಾಯಣ ವಿದ್ಯಾಸಂಸ್ಥೆಯು ಚಿತ್ರಕಲಾ ಸ್ಪರ್ಧೆಯನ್ನು ಅಯೋಜಿಸಲು ಅವಕಾಶ ಮಾಡಿಕೊಟ್ಟದ್ದಕ್ಕೆ ಸಂಸ್ಥೆಯನ್ನು ಅಭಿನಂದಿಸಿದರು.
ವೇದಿಕೆಯಲ್ಲಿ ಮುಳಿಯ ಸಂಸ್ಥೆಯ ಶಾಖ ಪ್ರಬಂಧಕರಾದ ನಾಮದೇವ ಮಲ್ಯ ಹಾಗೂ ಫ್ಲೋರ್ ಮ್ಯಾನೇಜರಾದ ಆನಂದ ಕುಲಾಲ್ ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ವಿದ್ಯಾ ಸಂಸ್ಥೆಯ ಅಧ್ಯಾಪಕರಾದ ಕೃಷ್ಣ ಪ್ರಸಾದ್ ನಿರೂಪಿಸಿದರು. ಮುಳಿಯ ಸಂಸ್ಥೆಯ ಮಾರ್ಕೆಟಿಂಗ್ ಮ್ಯಾನೇಜರ್ ಸಂಜೀವ ಹಾಗೂ ಸಂಸ್ಥೆಯ ಉದ್ಯೋಗಿಗಳಾದ ಸ್ವಾತಿ, ಮಮಿತಾ ಹಾಗೂ ವಿದ್ಯಾಸಂಸ್ಥೆಯ ಶಿಕ್ಷಕ ವೃಂದದವರು ಸಹಕರಿಸಿದರು.
ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವದ ಅಂಗವಾಗಿ ಮೂರು ದಿನಗಳ…
ಈಗಿನಂತೆ ಎಪ್ರಿಲ್ 29 ಹಾಗೂ 30 ರಂದು ಮಳೆ ಸ್ವಲ್ಪ ಕಡಿಮೆ ಇರುವ…
ಬೆಟ್ಟಗುಡ್ಡಗಳಲ್ಲಿ ಬೆಳೆಯಲಾಗುವ ಸೇಬನ್ನು ಕರ್ನಾಟಕದಲ್ಲಿಯೂ ಬೆಳೆಯಲಾಗುತ್ತಿದೆ ಎಂದು ಮನ್ ಕಿ ಬಾತ್‌ನಲ್ಲಿ ಪ್ರಧಾನಿ…
ಅಹಿಂಸೆಯೇ ಭಾರತದ ನೈಜ ಧರ್ಮವಾಗಿದೆ. ಆದರೆ, ಹಿಂಸಾಮಾರ್ಗದಲ್ಲಿ ಸಾಗುವವರ ದಮನ ಮಾಡುವುದೂ ಸಹ…
ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಪಾಕ್ ಪ್ರೇರಿತ ಭಯೋತ್ಪಾದಕರು ದಾಳಿ ನಡೆಸಿರುವ…
ರಾಜ್ಯದ ವಿವಿಧೆಡೆ ಮುಂದಿನ ಒಂದು ವಾರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು…