ಮುಳಿಯ ಸೀಡ್‍ಬಾಲ್ : 1 ಲಕ್ಷ ಸಸಿ ಬೀಜದ ಉಂಡೆಗಳನ್ನು ತಯಾರಿಸಿ ಎಸೆಯುವ ಅಭಿಯಾನ

September 14, 2019
7:22 PM

ಪುತ್ತೂರು: ಮುಳಿಯ ಸೀಡ್‍ಬಾಲ್ 1 ಲಕ್ಷ ಸಸಿ ಬೀಜ ಉಂಡೆಗಳನ್ನು ತಯಾರಿಸಿ ಎಸೆಯುವ ಅಭಿಯಾನಕ್ಕೆ ಪುತ್ತೂರಿನ ಶಾಸಕ ಸಂಜಿವ ಮಠಂದೂರುರವರು ಕೊಯಿಲ ಜಾನುವಾರು ಸಂವರ್ಧನ ಮತ್ತು ತರಬೇತಿ ಕೇಂದ್ರದಲ್ಲಿ ಚಾಲನೆಯನ್ನು ನೀಡಿದರು. ಈ ಸಂದರ್ಭ ಸುಮಾರು 5 ಸಾವಿರಕ್ಕೂ ಹೆಚ್ಚಿನ ಸಸಿ ಬೀಜದ ಉಂಡೆಗಳನ್ನು ಎಸೆಯಲಾಯಿತು.

Advertisement
Advertisement
Advertisement

ಮುಳಿಯ ಫೌಂಡೇಶನ್ ಆಶ್ರಯದಲ್ಲಿ ರೋಟರಿ ಕ್ಲಬ್ ಪುತ್ತೂರು, ರೋಟರಿ ಕ್ಲಬ್ ಪುತ್ತೂರು ಈಸ್ಟ್, ರೋಟರಿ ಕ್ಲಬ್ ಪುತ್ತೂರು ಸಿಟಿ, ಜೆಸಿಐ ಪುತ್ತೂರು, ಇನ್ನರ್ ವೀಲ್ ಕ್ಲಬ್ ಪುತ್ತೂರು, ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್, ರೋಟರಿ ಕ್ಲಬ್ ಪುತ್ತೂರು ಯುವ, ಲಯನ್ಸ್ ಕ್ಲಬ್ ಪುತ್ತೂರು, ಸುವಿಚಾರ ಬಳಗ ಮತ್ತು ರೋಟ್ರಾಕ್ಟ್ ಕ್ಲಬ್ ಪುತ್ತೂರು ಇವರ ಸಹಕಾರದೊಂದಿಗೆ ಅಭಿಯಾನ ನಡೆಯಲಿದೆ.

Advertisement

ಕಾರ್ಯಕ್ರಮದ ಉದ್ಘಾಟನೆಯನ್ನು ಕೊಯಿಲ ಗ್ರಾಮ ಪಂಚಾಯತ್ ಅಧ್ಯಕ್ಷರಾದ  ಹೇಮಾ ಶೆಟ್ಟಿ ದೀಪ ಬೆಳಗಿಸಿ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕೆನರಾ ಬ್ಯಾಂಕ್ ನ ಮುಖ್ಯ ಪ್ರಬಂಧಕರಾದ ಸಿ.ಕೆ.ಹೆಚ್ ಕಲ್ಕೂರ, ಕೊಯಿಲ ಜಾನುವಾರು ಸಂವರ್ಧನ ಮತ್ತು ತರಬೇತಿ ಕೇಂದ್ರದ ಉಪನಿರ್ದೇಶಕರಾದ ಡಾ.ಹರೀಶ್ ತಮಣ್ಕರ್, ರೋಟರಿ ಕ್ಲಬ್ ಪುತ್ತೂರು ಅಧ್ಯಕ್ಷರಾದ ಶ್ರೀ ಬುಜಂಗಾಚಾರ್ಯ ಭಾಗವಹಿಸಿದ್ದರು.

Advertisement

ಕಾರ್ಯಕ್ರಮದಲ್ಲಿ ವಾಣಿ ಪದವಿ ಪೂರ್ವ ಕಾಲೇಜು ಬೆಳ್ತಂಗಡಿ, ಎಸ್.ಡಿ.ಎಮ್ ಕಾಲೇಜು ಉಜಿರೆ ಇಲ್ಲಿನ ಸುಮಾರು ನೂರಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಿ ಸಸಿ ಬೀಜದ ಉಂಡೆಗಳನ್ನು ಬಿತ್ತಿದರು.

ಶಾಸಕ ಸಂಜೀವ ಮಠಂದೂರು ಮಾತನಾಡಿ ಈಗಿನ ಪೀಳಿಗೆಯ ವಿದ್ಯಾರ್ಥಿಗಳು, ಸ್ವಚ್ಛತೆ, ಪರಿಸರ ಸಂರಕ್ಷಣೆಯಲ್ಲಿ ತಮ್ಮನ್ನು ತಾವು ತೊಡಗಿಸಿ, ಮುಂದಿನ ಪೀಳಿಗೆಗೆ ಮಾದರಿಯಾಗಬೇಕಿದೆ ಮತ್ತು ಗಿಡಗಳ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯವಾಗಿದೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

Advertisement

ಹೇಮಾ ಶೆಟ್ಟಿಯವರು ಅಧ್ಯಕ್ಷೀಯ ಭಾಷಣ ಮಾಡಿದರು. ಮುಳಿಯ ಸಂಸ್ಥೆಯ ಚೇರ್ ಮ್ಯಾನ್ ಮತ್ತು ಮ್ಯಾನೇಜಿಂಗ್ ಡೈರೆಕ್ಟರಾದ ಕೇಶವ ಪ್ರಸಾದ್ ಮುಳಿಯ ಮುಳಿಯ ಸೀಡ್ ಬಾಲ್ ಯೋಜನೆಯ ಮಹತ್ವ ಮತ್ತು ಕಾರ್ಯಕ್ರಮದ ರೂಪುರೇಶೆಯನ್ನು ಹೇಳಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ಸಿ.ಕೆ.ಹೆಚ್ ಕಲ್ಕುರ ಮಾತನಾಡಿ ಇದೊಂದು ಅರ್ಥಪೂರ್ಣ ಕಾರ್ಯಕ್ರಮವಾಗಿದ್ದು, ಮುಳಿಯ ಸಂಸ್ಥೆಯು ಸಾಮಾಜಿಕ ಕಳಕಳಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

Advertisement

ಮುಳಿಯ ಫೌಂಡೇಶನ್ ಸಂಸ್ಥೆಯು ಈ ವರ್ಷ ಸುಮಾರು 1 ಲಕ್ಷಕ್ಕೂ ಅಧಿಕ ಸಸಿ ಬೀಜದ ಉಂಡೆಗಳನ್ನು ವಿಶೇಷವಾಗಿ ಶಾಲಾ ಮಕ್ಕಳ ಮೂಲಕ ತಯಾರಿಸಿ ಬಿತ್ತನೆ ಮಾಡಿ ಮಕ್ಕಳಿಗೆ ಪರಿಸರದ ಬಗ್ಗೆ ಕಾಳಜಿಯನ್ನು ವಹಿಸುವ ಅಭಿಯಾನ ಆರಂಭಿಸಿದ್ದು, ಇದನ್ನು ಪುತ್ತೂರು, ಬೆಳ್ತಂಗಡಿ, ಮಡಿಕೇರಿ, ಗೋಣಿಕೊಪ್ಪಲು ವ್ಯಾಪ್ತಿಯಲ್ಲಿ ಆಯೋಜಿಸಲಾಗಿದೆ. ಹೊನ್ನೆ, ಕಾಡು ಜೋಳ, ಸಿರಿ ಹೊಣ್ಣೆ, ಕಾಡು ಗೇರು, ಕಾಡು ಬಾದಾಮಿ ಮುಂತಾದ ಮರಗಳ ಬೀಜಗಳನ್ನು ಸಾವಯವ ಗೊಬ್ಬರ ಮಿಶ್ರಿತ ಮಣ್ಣಿನಲ್ಲಿ ಹುದುಗಿಸಿ ಬೀಜದ ಉಂಡೆಗಳನ್ನು ತಯಾರಿಸಲಾಗಿದೆ.

ಕಾರ್ಯಕ್ರಮದಲ್ಲಿ ಮುಳಿಯ ಸಂಸ್ಥೆಯ ಆಡಳಿತ ನಿರ್ದೇಶಕರಾದ ಕೃಷ್ಣ ನಾರಾಯಣ ಮುಳಿಯ, ಬೆಳ್ತಂಗಡಿ ಶಾಖಾ ಪ್ರಬಂಧಕ ಪ್ರವೀಣ್, ಫ್ಲೋರ್ ಮ್ಯಾನೇಜರ್ ಯತೀಶ್, ಸಿಬ್ಬಂದಿಗಳಾದ ಪ್ರಶಾಂತ್, ರಮೇಶ್ ಗೌಡ ಉಪಸ್ಥಿತರಿದ್ದರು.

Advertisement

ಡಾ.ಹರೀಶ್ ತಮಣ್ಕರ್ ಸ್ವಾಗತಿಸಿದರು. ಸಿಬ್ಬಂದಿ ಡಾ.ಕೃಷ್ಣ ಧನ್ಯವಾದ ಹೇಳಿದರು. ಮುಳಿಯ ಸಂಸ್ಥೆಯ ಅಸಿಸ್ಟೆಂಟ್ ಮಾರ್ಕೆಟಿಂಗ್ ಮ್ಯಾನೇಜರಾದ ಸಂಜೀವ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಪ್ರಯಾಗ್ ರಾಜ್ ನಲ್ಲಿ  ಮಹಾ ಕುಂಭಮೇಳ | 150ಕ್ಕೂ ಹೆಚ್ಚು ವಿಶೇಷ ರೈಲು
January 23, 2025
10:59 AM
by: The Rural Mirror ಸುದ್ದಿಜಾಲ
ಆಧುನಿಕತೆಯಿಂದಾಗಿ ಕೃಷಿ ವ್ಯವಸ್ಥೆ ಸಂಪೂರ್ಣ ಹಾಳಾಗಿದೆ
January 23, 2025
10:50 AM
by: The Rural Mirror ಸುದ್ದಿಜಾಲ
ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ವಿಶೇಷ ಫಿಲ್ಟರ್ ಕಾಫಿ ಕೆಫೆ – ಸರ್ಕಾರ ಒಪ್ಪಂದ | ಕಾಫಿ ಉದ್ಯಮ ಉತ್ತೇಜಿಸಲು ಮಹತ್ವದ ಹೆಜ್ಜೆ |
January 23, 2025
10:46 AM
by: The Rural Mirror ಸುದ್ದಿಜಾಲ
ಕೃಷಿ ಸದೃಢವಾಗಿದ್ದರೆ ದೇಶ ಸದೃಢವಾಗಿರುತ್ತದೆ |  ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್
January 23, 2025
10:41 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror