ಪುತ್ತೂರು: ಮುಳಿಯ ಸೀಡ್‍ಬಾಲ್ 1 ಲಕ್ಷ ಸಸಿ ಬೀಜ ಉಂಡೆಗಳನ್ನು ತಯಾರಿಸಿ ಎಸೆಯುವ ಅಭಿಯಾನಕ್ಕೆ ಪುತ್ತೂರಿನ ಶಾಸಕ ಸಂಜಿವ ಮಠಂದೂರುರವರು ಕೊಯಿಲ ಜಾನುವಾರು ಸಂವರ್ಧನ ಮತ್ತು ತರಬೇತಿ ಕೇಂದ್ರದಲ್ಲಿ ಚಾಲನೆಯನ್ನು ನೀಡಿದರು. ಈ ಸಂದರ್ಭ ಸುಮಾರು 5 ಸಾವಿರಕ್ಕೂ ಹೆಚ್ಚಿನ ಸಸಿ ಬೀಜದ ಉಂಡೆಗಳನ್ನು ಎಸೆಯಲಾಯಿತು.
ಮುಳಿಯ ಫೌಂಡೇಶನ್ ಆಶ್ರಯದಲ್ಲಿ ರೋಟರಿ ಕ್ಲಬ್ ಪುತ್ತೂರು, ರೋಟರಿ ಕ್ಲಬ್ ಪುತ್ತೂರು ಈಸ್ಟ್, ರೋಟರಿ ಕ್ಲಬ್ ಪುತ್ತೂರು ಸಿಟಿ, ಜೆಸಿಐ ಪುತ್ತೂರು, ಇನ್ನರ್ ವೀಲ್ ಕ್ಲಬ್ ಪುತ್ತೂರು, ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್, ರೋಟರಿ ಕ್ಲಬ್ ಪುತ್ತೂರು ಯುವ, ಲಯನ್ಸ್ ಕ್ಲಬ್ ಪುತ್ತೂರು, ಸುವಿಚಾರ ಬಳಗ ಮತ್ತು ರೋಟ್ರಾಕ್ಟ್ ಕ್ಲಬ್ ಪುತ್ತೂರು ಇವರ ಸಹಕಾರದೊಂದಿಗೆ ಅಭಿಯಾನ ನಡೆಯಲಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಕೊಯಿಲ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಹೇಮಾ ಶೆಟ್ಟಿ ದೀಪ ಬೆಳಗಿಸಿ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕೆನರಾ ಬ್ಯಾಂಕ್ ನ ಮುಖ್ಯ ಪ್ರಬಂಧಕರಾದ ಸಿ.ಕೆ.ಹೆಚ್ ಕಲ್ಕೂರ, ಕೊಯಿಲ ಜಾನುವಾರು ಸಂವರ್ಧನ ಮತ್ತು ತರಬೇತಿ ಕೇಂದ್ರದ ಉಪನಿರ್ದೇಶಕರಾದ ಡಾ.ಹರೀಶ್ ತಮಣ್ಕರ್, ರೋಟರಿ ಕ್ಲಬ್ ಪುತ್ತೂರು ಅಧ್ಯಕ್ಷರಾದ ಶ್ರೀ ಬುಜಂಗಾಚಾರ್ಯ ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ವಾಣಿ ಪದವಿ ಪೂರ್ವ ಕಾಲೇಜು ಬೆಳ್ತಂಗಡಿ, ಎಸ್.ಡಿ.ಎಮ್ ಕಾಲೇಜು ಉಜಿರೆ ಇಲ್ಲಿನ ಸುಮಾರು ನೂರಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಿ ಸಸಿ ಬೀಜದ ಉಂಡೆಗಳನ್ನು ಬಿತ್ತಿದರು.
ಶಾಸಕ ಸಂಜೀವ ಮಠಂದೂರು ಮಾತನಾಡಿ ಈಗಿನ ಪೀಳಿಗೆಯ ವಿದ್ಯಾರ್ಥಿಗಳು, ಸ್ವಚ್ಛತೆ, ಪರಿಸರ ಸಂರಕ್ಷಣೆಯಲ್ಲಿ ತಮ್ಮನ್ನು ತಾವು ತೊಡಗಿಸಿ, ಮುಂದಿನ ಪೀಳಿಗೆಗೆ ಮಾದರಿಯಾಗಬೇಕಿದೆ ಮತ್ತು ಗಿಡಗಳ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯವಾಗಿದೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ಹೇಮಾ ಶೆಟ್ಟಿಯವರು ಅಧ್ಯಕ್ಷೀಯ ಭಾಷಣ ಮಾಡಿದರು. ಮುಳಿಯ ಸಂಸ್ಥೆಯ ಚೇರ್ ಮ್ಯಾನ್ ಮತ್ತು ಮ್ಯಾನೇಜಿಂಗ್ ಡೈರೆಕ್ಟರಾದ ಕೇಶವ ಪ್ರಸಾದ್ ಮುಳಿಯ ಮುಳಿಯ ಸೀಡ್ ಬಾಲ್ ಯೋಜನೆಯ ಮಹತ್ವ ಮತ್ತು ಕಾರ್ಯಕ್ರಮದ ರೂಪುರೇಶೆಯನ್ನು ಹೇಳಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ ಸಿ.ಕೆ.ಹೆಚ್ ಕಲ್ಕುರ ಮಾತನಾಡಿ ಇದೊಂದು ಅರ್ಥಪೂರ್ಣ ಕಾರ್ಯಕ್ರಮವಾಗಿದ್ದು, ಮುಳಿಯ ಸಂಸ್ಥೆಯು ಸಾಮಾಜಿಕ ಕಳಕಳಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಮುಳಿಯ ಫೌಂಡೇಶನ್ ಸಂಸ್ಥೆಯು ಈ ವರ್ಷ ಸುಮಾರು 1 ಲಕ್ಷಕ್ಕೂ ಅಧಿಕ ಸಸಿ ಬೀಜದ ಉಂಡೆಗಳನ್ನು ವಿಶೇಷವಾಗಿ ಶಾಲಾ ಮಕ್ಕಳ ಮೂಲಕ ತಯಾರಿಸಿ ಬಿತ್ತನೆ ಮಾಡಿ ಮಕ್ಕಳಿಗೆ ಪರಿಸರದ ಬಗ್ಗೆ ಕಾಳಜಿಯನ್ನು ವಹಿಸುವ ಅಭಿಯಾನ ಆರಂಭಿಸಿದ್ದು, ಇದನ್ನು ಪುತ್ತೂರು, ಬೆಳ್ತಂಗಡಿ, ಮಡಿಕೇರಿ, ಗೋಣಿಕೊಪ್ಪಲು ವ್ಯಾಪ್ತಿಯಲ್ಲಿ ಆಯೋಜಿಸಲಾಗಿದೆ. ಹೊನ್ನೆ, ಕಾಡು ಜೋಳ, ಸಿರಿ ಹೊಣ್ಣೆ, ಕಾಡು ಗೇರು, ಕಾಡು ಬಾದಾಮಿ ಮುಂತಾದ ಮರಗಳ ಬೀಜಗಳನ್ನು ಸಾವಯವ ಗೊಬ್ಬರ ಮಿಶ್ರಿತ ಮಣ್ಣಿನಲ್ಲಿ ಹುದುಗಿಸಿ ಬೀಜದ ಉಂಡೆಗಳನ್ನು ತಯಾರಿಸಲಾಗಿದೆ.
ಕಾರ್ಯಕ್ರಮದಲ್ಲಿ ಮುಳಿಯ ಸಂಸ್ಥೆಯ ಆಡಳಿತ ನಿರ್ದೇಶಕರಾದ ಕೃಷ್ಣ ನಾರಾಯಣ ಮುಳಿಯ, ಬೆಳ್ತಂಗಡಿ ಶಾಖಾ ಪ್ರಬಂಧಕ ಪ್ರವೀಣ್, ಫ್ಲೋರ್ ಮ್ಯಾನೇಜರ್ ಯತೀಶ್, ಸಿಬ್ಬಂದಿಗಳಾದ ಪ್ರಶಾಂತ್, ರಮೇಶ್ ಗೌಡ ಉಪಸ್ಥಿತರಿದ್ದರು.
ಡಾ.ಹರೀಶ್ ತಮಣ್ಕರ್ ಸ್ವಾಗತಿಸಿದರು. ಸಿಬ್ಬಂದಿ ಡಾ.ಕೃಷ್ಣ ಧನ್ಯವಾದ ಹೇಳಿದರು. ಮುಳಿಯ ಸಂಸ್ಥೆಯ ಅಸಿಸ್ಟೆಂಟ್ ಮಾರ್ಕೆಟಿಂಗ್ ಮ್ಯಾನೇಜರಾದ ಸಂಜೀವ ಕಾರ್ಯಕ್ರಮ ನಿರೂಪಿಸಿದರು.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…