ಕಾಣಿಯೂರು: ಕಾಣಿಯೂರು ಸಮೀಪದ ಮೂವಪ್ಪೆ ಕಿರಿಯ ಪ್ರಾಥಮಿಕ ಶಾಲೆಗೆ ಜಿಲ್ಲಾ ಪಂಚಾಯತ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಗ್ರಾಮ ಪಂಚಾಯತ್ ಕೊಡಿಯಾಲ ಇದರ ಅನುದಾನದಲ್ಲಿ ನಿರ್ಮಾಣಗೊಂಡ ಶಾಲಾ ನೂತನ ಕೊಠಡಿಯನ್ನು ಬೆಳ್ಳಾರೆ ಕ್ಷೇತ್ರದ ಜಿ.ಪಂ.ಸದಸ್ಯ ಮನ್ಮಥ ಎಸ್.ಎನ್.ಉದ್ಘಾಟಿಸಿದರು. ಬಳಿಕ ನಡೆದ ಮಕ್ಕಳ ದಿನಾಚರಣೆ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಳ್ಯ ಯೋಜನಾಧಿಕಾರಿ ಸಂತೋಷ್ ಮಾತನಾಡಿ ಮಕ್ಕಳಲ್ಲಿ ನಾವು ಸಂಸ್ಕಾರವನ್ನು ಬೆಳೆಸಬೇಕಾಗಿದೆ. ಜನರಲ್ಲಿ ಜಾಗೃತಿಯಾದಾಗ ಸುಂದರ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದು ಹೇಳಿದರು.
ಸಭಾಧ್ಯಕ್ಷತೆಯನ್ನು ಶಾಲಾ ಎಸ್ ಡಿಎಂಸಿ ಅಧ್ಯಕ್ಷ ವಿಠಲ ಗೌಡ ಪೋಳಾಜೆ ವಹಿಸಿದ್ದರು. ವೇದಿಕೆಯಲ್ಲಿ ಶಿಕ್ಷಣ ಸಂಯೋಜಕ ವಸಂತ ಏನೆಕಲ್, ಬೆಳ್ಳಾರೆ ಸಮೂಹ ಸಂಪನ್ಮೂಲ ವ್ಯಕ್ತಿ ಸವಿತ ಕುಮಾರಿ, ಕೊಡಿಯಾಲ ಗ್ರಾ.ಪಂ.ಅಧ್ಯಕ್ಷ ಮೋಹನ್ ಸಾಲಿಯಾನ್, ಶ್ರೀ ಉಳ್ಳಾಕುಲು ದೈವಸ್ಥಾನ ಕಲ್ಪಡ ಇದರ ಮೊಕ್ತೇಸರ ಶಿವರಾಮ ಉಪಾಧ್ಯಾಯ, ಕೊಡಿಯಾಲ ಗ್ರಾ.ಪಂ.ಸದಸ್ಯರಾದ ರಮಾ ಪಿ. ರೈ, ಗಣೇಶ್ ಪೆರ್ಲೋಡಿ, ಸ್ನೇಹಿತರ ಬಳಗ ಕಲ್ಪಡ ಇದರ ಅಧ್ಯಕ್ಷರಾದ ಗಣೇಶ್ ಕಲ್ಪಡ, ಶಾಲಾ ಎಸ್ ಡಿಎಂಸಿ ಉಪಾಧ್ಯಕ್ಷೆ ಚಂದ್ರಾವತಿ, ಶಾಲಾ ವಿದ್ಯಾರ್ಥಿ ನಾಯಕ ದಿಶಾಂತ್ ಉಪಸ್ಥಿತರಿದ್ದರು.
ಶಾಲಾ ಮುಖ್ಯಶಿಕ್ಷಕಿ ನಿರ್ಮಲ ಕೆ.ಎಸ್. ಸ್ವಾಗತಿಸಿ ಶಾಲಾ ವಾರ್ಷಿಕ ವರದಿ ವಾಚಿಸಿದರು. ವಿದ್ಯಾರ್ಥಿಗಳಾದ ದೀಕ್ಷಾ, ಕೃಪಾಶ್ರೀ, ಕೀರ್ತನಾ, ಚಾಂದಿನಿ, ನೀಕ್ಷಾ, ಜನನಿ ಪ್ರಾರ್ಥಿಸಿದರು. ಸಹ ಶಿಕ್ಷಕಿ ಕುಮಾರಿ ಪುಷ್ಪ ಇವರು ಕಾರ್ಯಕ್ರಮವನ್ನು ನಿರೂಪಿಸಿ, ವಂದಿಸಿದರು. ಬಳಿಕ ಮಕ್ಕಳಿಂದ ಹಾಗೂ ಊರವರ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…
WHO ನಿಲುವನ್ನುಮರುಪರಿಶೀಲಿಸುವಂತೆ ಮಾಡಲು ICMR, ICAR, AIUMS, CSIR, CFTRI ಮೈಸೂರು ಅಥವಾ…
ಸುಳ್ಯ ತಾಲೂಕಿನ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶತಮಾನೋತ್ಸವ ಕಾರ್ಯಕ್ರಮ…
ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ…
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು…