ಸುಳ್ಯ: ಕುರುಂಜಿ ಗುಡ್ಡೆಯಲ್ಲಿ ಜನರ ಮೆಟ್ಟಿಲು ಏರುವ ಕಷ್ಟಕ್ಕೆ ಇನ್ನು ತೆರೆ ಬೀಳಲಿದೆ. ಇಲ್ಲಿ ರಸ್ತೆ ಕಾಮಗಾರಿ ನಿರ್ಮಾಣಕ್ಕೆ ಸೋಮವಾರ ಚಾಲನೆ ನೀಡಲಾಯಿತು.
ರಸ್ತೆ ಸಂಪರ್ಕ ಮಾಡಬೇಕೆಂಬುದು ಕುರುಂಜಿ ಗುಡ್ಡೆಯ ಬಹುಕಾಲದ ಬೇಡಿಕೆಯಾಗಿತ್ತು.
ಇಲ್ಲಿನ ಸುಮಾರು 12 ಕುಟುಂಬಗಳಿಗೆ ರಸ್ತೆ ಸಂಪರ್ಕ ಇಲ್ಲದ ಕಾರಣ ತಮ್ಮ ಮನೆ ಸೇರಲು ಮೆಟ್ಟಿಲುಗಳನ್ನೇ ಆಶ್ರಯಿಸಬೇಕಾಗಿತ್ತು. ಇಲ್ಲಿಗೆ ರಸ್ತೆ ಸಂಪರ್ಕ ಬೇಕೆಂಬುದು ಬಹುಕಾಲದ ಬೇಡಿಕೆಯಾಗಿತ್ತು. ಕಳೆದ ನಗರ ಪಂಚಾಯತ್ ಚುನಾವಣೆ ಸಂದರ್ಭದಲ್ಲಿ ಶಾಸಕರು ಈ ಭಾಗಕ್ಕೆ ಭೇಟಿ ನೀಡಿದಾದ ಸಮಸ್ಯೆಯನ್ನು ಬಗೆಹರಿಸುವ ಭರವಸೆ ನೀಡಿದ್ದರು. ಚುನಾವಣೆಯ ಬಳಿಕ ಸ್ಥಳೀಯ ನಗರ ಪಂಚಾಯತ್ ಸದಸ್ಯ ವಿನಯ್ ಕುಮಾರ್ ಕಂದಡ್ಕ ಅವರು ಶಾಸಕ ಎಸ್.ಅಂಗಾರ ಮತ್ತು ನಗರ ಪಂಚಾಯತ್ ಇಂಜಿನಿಯರ್ ಶಿವಕುಮಾರ್ ಅವರನ್ನು ಸ್ಥಳಕ್ಕೆ ಕರೆದುಕೊಂಡು ಹೋಗಿ ಸಮಸ್ಯೆಯನ್ನು ವಿವರಿಸಿದ್ದರು. ಈ ಹಿನ್ನಲೆಯಲ್ಲಿ ನ.ಪಂ ನ ಕಳೆದ ವರ್ಷದ ಬಾಕಿ ಅನುದಾನವನ್ನು ಬಳಸಿಕೊಂಡು ಇಲ್ಲಿ ಕಚ್ಚಾ ರಸ್ತೆಯ ನಿರ್ಮಾಣ ಮಾಡಲು ನಿರ್ಧರಿಸಲಾಯಿತು. ರಸ್ತೆಯ ನಿರ್ಮಾಣಕ್ಲೆ ಶಾಸಕ ಎಸ್.ಅಂಗಾರ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ನ ಪಂ ಸದಸ್ಯರಾದ ವಿನಯಕುಮಾರ್ ಕಂದಡ್ಕ, ಸುಧಾಕರ, ಪೂಜಿತಾ ಶಿವಪ್ರಸಾದ್, ಮಾಜಿ ಸದಸ್ಯರಾದ ಗೋಪಾಲ ನಡುಬೈಲು, ಮೋಹಿನಿ ನಾಗರಾಜ್, ಕಿರಣ್ ಕುರುಂಜಿ, ಪ್ರಮುಖರಾದ ಶೀನಪ್ಪ ಬಯಂಬು, ಶಿವರಾಮ ಕೇರ್ಪಳ ಮತ್ತಿತರರು ಉಪಸ್ಥಿತರಿದ್ದರು.
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…
ಬೀದರ್ ನ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಶ್ವವಿದ್ಯಾಲಯದ 20 ನೇ ಸಂಸ್ಥಾಪನಾ…