ಸುಳ್ಯ: ಸುಳ್ಯದ ಶ್ರೀಕೇಶವ ಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದ ವತಿಯಿಂದ ನಡೆಯುತ್ತಿರುವ ವೇದ ಯೋಗ ಕಲಾ ಶಿಬಿರ ಮೇ.21ರಂದು ಸಮಾಪಗೊಳ್ಳಲಿದೆ ಎಂದು ಶಿಬಿರದ ಸಂಚಾಲಕ ಎಂ.ಎಸ್.ನಾಗರಾಜ ರಾವ್ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸುಬ್ರಹ್ಮಣ್ಯ ಮಠಾಧೀಶ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಸಮಾರೋಪ ಸಮಾರಂಭದಲ್ಲಿ ಆಶೀರ್ವಚನ ನೀಡಲಿದ್ದಾರೆ. ರಾಜಗೋಪಾಲ ಭಟ್ ಉಂಡೆಮನೆ ಸಭಾಧ್ಯಕ್ಷತೆ ವಹಿಸಲಿದ್ದು, ಪುತ್ತೂರಿನ ಸ್ವರ್ಣೋದ್ಯಮಿ ಬಲರಾಮ ಆಚಾರ್ಯ ಶ್ರೀ ಕೇಶವಸ್ಮೃ ತಿ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ. ಶಿಬಿರದ ಸಂಚಾಲಕ ಎಂ.ಎಸ್. ನಾಗರಾಜ ರಾವ್ ಅಭಿನಂದನಾ ಭಾಷಣ ಮಾಡಲಿದ್ದಾರೆ. ವೇದಿಕೆಯಲ್ಲಿ ಪ್ರತಿಷ್ಠಾನದ ಗೌರವಾಧ್ಯಕ್ಷ ಗೋಪಾಲಕೃಷ್ಣ ಭಟ್ ವಗೆನಾಡು ಉಪಸ್ಥಿತರಿರುವರು.
ಪ್ರತಿವರ್ಷ ಪ್ರತಿಷ್ಠಾನದ ವತಿಯಿಂದ ವೇದ, ಯೋಗ ಮತ್ತು ಕಲಾ ಕ್ಷೇತ್ರದಿಂದ ಆರಿಸಿದ ಮೂವರು ಸಾಧಕರಿಗೆ ಶ್ರೀ ಕೇಶವ ಸ್ಮೃತಿ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುತ್ತಿದ್ದು ಈ ಬಾರಿ ವೈದಿಕ ಕ್ಷೇತ್ರದಿಂದ ಪುರುಷೋತ್ತಮ ಭಟ್ ದೇರ್ಕಜೆ, ಯೋಗ ಕ್ಷೇತ್ರದಿಂದ ಪ್ರಕಾಶ್ ಮೂಡಿತ್ತಾಯ, ಕಲಾ ಕ್ಷೇತ್ರದಿಂದ ಸ್ಯಾಕ್ಸೋಫೋನ್ ವಾದಕ ಬಾಲಚಂದ್ರ ಪೆರಾಜೆ ಇವರನ್ನು ಶ್ರೀಕೇಶವ ಸ್ಮೃತಿ ಪ್ರಶಸ್ತಿಗಾಗಿ ಆಯ್ಕೆ ಮಾಡಲಾಗಿದೆ ಎಂದು ಅವರು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಪ್ರತಿಷ್ಠಾನದ ಅಧ್ಯಕ್ಷ ಪುರೋಹಿತ ನಾಗರಾಜ ಭಟ್, ಸುದರ್ಶನ ಭಟ್, ಅಭಿರಾಮ ಶರ್ಮಾ ಉಪಸ್ಥಿತರಿದ್ದರು.