ಸುಬ್ರಹ್ಮಣ್ಯ: ದ.ಕ ಜಿಲ್ಲಾ ಮಲೆಕುಡಿಯರ ಸಂಘದ ಜಿಲ್ಲಾ ಮಟ್ಟದ ಸಮಾವೇಶವು ಮೇ.25 ರಂದು ಶನಿವಾರ ಕುಕ್ಕೆ ಸುಬ್ರಹ್ಮಣ್ಯ ಪದವಿಪೂರ್ವ ಕಾಲೇಜು ಬೆಳ್ಳಿಹಬ್ಬ ಸಭಾಂಗಣದಲ್ಲಿ ನಡೆಯಲಿದೆ ಎಂದು ಪಿ.ಮಲೆಕುಡಿಯರ ಸಂಘದ ತಾಲೂಕು ಅಧ್ಯಕ್ಷ ಪುರುಷೋತ್ತಮ ಗುಂಡ್ಯ ತಿಳಿಸಿದರು.
ಸಮಾವೇಶದಲ್ಲಿ ಮಲೆಕುಡಿಯ ಸಮುದಾಯದವರಿಗೆ ಕಿರಿಯ ಮತ್ತು ಹಿರಿಯ ವಿಭಾಗಕ್ಕೆ ಪ್ರತ್ಯೇಕವಾಗಿ ಆಟೋಟ ಸ್ಪರ್ಧೆಗಳು ನಡೆಯಲಿವೆ. ರಾತ್ರಿ ಸಭಾ ಕಾರ್ಯಕ್ರಮಗಳು ನಡೆಯಲಿದೆ ಎಂದು ತಿಳಿಸಿದ್ದಾರೆ. ರಾತ್ರಿ ನಡೆಯುವ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಲೆಕುಡಿಯ ಸಂಘದ ಜಿಲ್ಲಾಧ್ಯಕ್ಷ ಶ್ರೀನಿವಾಸ್ ಜಿ ಉಜಿರೆ ವಹಿಸಲಿರುವರು. ನಗರಾಭಿವೃದ್ಧಿ ಸಚಿವ ಯು.ಟಿ ಖಾದರ್ ಕಾರ್ಯಕ್ರಮ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಶಾಸಕ ಎಸ್ ಅಂಗಾರ, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ. ಕಾರ್ಯನಿರ್ವಾಹಣಾಧಿಕಾರಿ ರವೀಂದ್ರ ಎಚ್. ಎಂ,ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಮನ್ವಯಾಧಿಕಾರಿ ಹೇಮಲಾ, ಜಿ.ಪಂ ಸದಸ್ಯೆ ಆಶಾತಿಮ್ಮಪ್ಪ, ತಾ.ಪಂ ಸದಸ್ಯ ಅಶೋಕ ನೆಕ್ರಾಜೆ, ಗ್ರಾ.ಪಂ ಅಧ್ಯಕ್ಷೆ ಸುಶೀಲಾ ಪಿ, ಮಲೆಕುಡಿಯರ ಸಂಘದ ತಾಲೂಕು ಅಧ್ಯಕ್ಷ ಪುರುಷೋತ್ತಮ ಗುಂಡ್ಯ, ಮಲೆಕುಡಿಯ ಸಂಘದ ಸುಬ್ರಹ್ಮಣ್ಯ ಗುರಿಕಾರ ಐತಪ್ಪ ಅರ್ಗುಡಿ ಉಪ್ಥಿತರಿರುವರು ಎಂದವರು ತಿಳಿಸಿದ್ದಾರೆ.
ಎಂತ ಮಾರ್ರೇ.... ಈ ಮನುಷ್ಯರಿಗೆ ಒಂದು ಸೊಲ್ಪ ಹೊತ್ತು ಕರೆಂಟ್ ಹೊದ್ರೆ ಕೂಡ್ಲೆ…
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಸುಳ್ಯ, ಪುತ್ತೂರು,ಚೆಂಬು ಪ್ರದೇಶದ ಕೆಲವು ಕಡೆ 100…
ಬಿತ್ತನೆ ಬೀಜ ಮತ್ತು ರಸಗೊಬ್ಬರವನ್ನು ಕಾಳಸಂತೆಯಲ್ಲಿ ಮಾರಾಟಮಾಡುವವರು ಮತ್ತು ಕೃತಕ ಅಭಾವ ಸೃಷ್ಟಿಸುವವರ…
ರೈತರು ಉತ್ತಮ ಇಳುವರಿ ಪಡೆಯಲು ಡಿಎಪಿ ಗೊಬ್ಬರಕ್ಕೆ ಪರ್ಯಾಯವಾಗಿ ಸಂಯುಕ್ತ ರಸಗೊಬ್ಬರ ಬಳಸಲು…
‘ಏಕಲವ್ಯ’ – ಈ ಪದವು ಸಾಧನೆಯ ಐಕಾನ್. ಪರ್ಯಾಯ ಪದ. ಸಾಧನೆಗೆ ಜಾತಿ,…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490