ನಿಂತಿಕಲ್ಲು : ನಿಂತಿಕಲ್ಲು ಶ್ರೀ ವನದುರ್ಗಾ ದೇವಿ ಸಾನಿಧ್ಯದಲ್ಲಿ ಮೇ.26 ಬೆಳಗ್ಗೆ ಗಂಟೆ 9ರ ಕರ್ಕಾಟಕ ಲಗ್ನ ಸುಮೂಹೂರ್ತದಲ್ಲಿ ಪ್ರತಿಷ್ಠಾ ಬ್ರಹ್ಮಕಲಶಾಭಿಷೇಕ ನಡೆಯಲಿದೆ.
ಬಳಿಕ ಮಹಾಪೂಜೆ, ನಿತ್ಯ ನೈಮಿತ್ಯಾದಿಗಳ ನಿರ್ಣಯ, ಪ್ರಸಾದ ವಿತರಣೆ ಮತ್ತು ಅನ್ನಸಂತರ್ಪಣೆ ನಡೆಯಲಿದೆ.ಸಂಜೆ ಹರಿಕಥೆ ಮತ್ತು ಭಜನಾ ಕಾರ್ಯಕ್ರಮ ನೆರವೇರಲಿದೆ. ರಾತ್ರಿ 7 ರಿಂದ ನಡೆಯುವ ಧಾರ್ಮಿಕ ಸಭೆಯಲ್ಲಿ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ.ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿ ವಿಶೇಷ ಉಪನ್ಯಾಸ ನೀಡಲಿದ್ದಾರೆ.ರಾಷ್ಟ್ರೀಯ ಸ್ವಯಂಸೇವಕ ಸಂಘದ ಮಂಗಳೂರು ವಿಭಾಗ ಕಾರ್ಯವಾಹ ನ.ಸೀತಾರಾಮ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ.
ಎಣ್ಮೂರು ಕೋಟಿ ಚೆನ್ನಯ ಆದಿ ಬೈದರ್ಕಳ ಗರಡಿಯ ಅನುವಂಶಿಕ ಮೊಕ್ತೇಸರ ರಾಮಕೃಷ್ಣ ಶೆಟ್ಟಿ ಕಟ್ಟಬೀಡು, ಯಶೋಧಾ ರಾಮಚಂದ್ರ, ಕೆ.ಎಸ್.ಗೌಡ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಅಶೋಕ್ ಕುಮಾರ್ ಕೆ.ಎಸ್, ಬೆಳ್ಳಾರೆ ರೋಟರಿ ಅಧ್ಯಕ್ಷ ಎ.ಕೆ.ಮಣಿಯಾಣಿ, ಜನಜಾಗೃತಿ ವೇದಿಕೆ ಪಂಜ ವಲಯದ ಅಧ್ಯಕ್ಷ ಕೆ.ಎನ್.ರಘುನಾಥ ರೈ, ಕೇರ್ಪಡ ಮಹಿಷಮರ್ದಿನಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಅಕ್ಷಯ ಆಳ್ವ, ಕಾಂಚೋಡು ಮಂಜುನಾಥ ದೇವಸ್ಥಾನದ ಅಧ್ಯಕ್ಷ ಪರಮೇಶ್ವರ ಹೆಗ್ಡೆ ಕಾಂಚೋಡು, ನಿಡ್ವಾಳ ಮಹಾವಿಷ್ಣು ದೇವಸ್ಥಾನದ ಅಧ್ಯಕ್ಷ ರಾಮಕೃಷ್ಣ ಗೌಡ ಪುರಿಯ, ಮುರುಳ್ಯ-ಎಣ್ಮೂರು ಸಹಕಾರಿ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಚಿದಾನಂದ ರೈ ನೆಲ್ಯಾಜೆ ಮುಖ್ಯಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಬಳಿಕ ಎಡಮಂಗಲ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಮಂಡಳಿಯವರಿಂದ ಉಳ್ಳಾಳ್ತಿ ಕಾರ್ಣಿಕ ಯಕ್ಷಗಾನ ಬಯಲಾಟ ಪ್ರದರ್ಶಿತವಾಗಲಿದೆ
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…