ಸುಳ್ಯ: ಸುಳ್ಯ ತಾಲೂಕು ಸವಿತಾ ಸಮಾಜದ ವತಿಯಿಂದ ಸಮಾಜದ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ ಹಾಗೂ 2019-2022 ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಮೇ.28 ರಂದು ಸುಳ್ಯ ಚನ್ನಕೇಶವ ದೇವಸ್ಥಾನದ ಸಭಾಭವನದಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ತಾಲೂಕು ಸವಿತಾ ಸಮಾಜದ ಅಧ್ಯಕ್ಷ ವಸಂತ ಮೂರಾಜೆ ವಹಿಸಲಿದ್ದು ಜಿಲ್ಲಾ ಸವಿತಾ ಸಮಾಜದ ಅಧ್ಯಕ್ಷ ಆನಂದ ಗುಂಡದಡೆ ಹಾಗೂ ತಹಶೀಲ್ದಾರ್ ಕುಂಞ ಅಹಮ್ಮದ್ ಪದಗ್ರಹಣ ಕಾರ್ಯಕ್ರಮ ನೆರವೇರಿಸಲಿದದಾರೆ. ಅತಿಥಿಗಳಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಪಿ ಮಹದೇವ, ಲಯನ್ಸ್ ಮಾಜಿ ಜಿಲ್ಲಾ ಗವರ್ನರ್ ಎಂ.ಬಿ.ಸದಾಶಿವ, ಸವಿತಾ ಸೌಹಾರ್ದ ಸಹಕಾರಿ ಅಧ್ಯಕ್ಷ ವಿಶ್ವನಾಥ ಸಾಲ್ಯಾನ್, ಜಿಲ್ಲಾ ಸವಿತಾ ಸಮಾಜದ ಗೌರವಾಧ್ಯಕ್ಷ ದಿನೇಶ್ ಬಂಗೇರ , ಸವಿತಾ ಸಮಾಜದ ರಾಜ್ಯಪ್ರತಿನಿಧಿ ವಸಂತ ಬೆಳ್ಳೂರು, ಜಿಲ್ಲಾ ಸವಿತಾ ಸಮಾಜದ ಖಜಾಂಜಿ ಭುಜಂಗ ಸಾಲ್ಯಾನ್, ಸುಳ್ಯ ಬಾರ್ಬರ್ ಎಸೋಸಿಯೇಶನ್ ಅಧ್ಯಕ್ಷ ಪದ್ಮನಾಭ ಎಸ್ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.
ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…
ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…
ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ರೈತರು ತಮ್ಮ ಬೆಳೆಗಳಲ್ಲಿ ಹೆಚ್ಚಿನ ರಾಸಾಯನಿಕಗಳು…
ಕಾರವಾರದ ರವೀಂದ್ರನಾಥ್ ಟಾಗೋರ್ ಕಡಲ ತೀರದ ಮಯೂರ ವರ್ಮ ವೇದಿಕೆಯಲ್ಲಿ ಏಪ್ರಿಲ್ 18…
ಕೋಲಾರ ಜಿಲ್ಲೆಯಲ್ಲಿ ಒತ್ತುವರಿಯಾಗಿರುವ ಕೆರೆಗಳನ್ನು ಆದ್ಯತೆ ಮೇರೆಗೆ ತೆರವುಗಳಿಸಲು ಕ್ರಮ ಕೈಗೊಳ್ಳಬೇಕು ಎಂದು…
ತೆಂಗು ಬೆಳೆ ಉತ್ಪಾದನೆ ಹೆಚ್ಚಿಸಲು ಕೇಂದ್ರ ಸರ್ಕಾರ ಹಲವು ಯೋಜನೆಗಳನ್ನು ಕೈಗೊಂಡಿದ್ದು, ವಿಶ್ವದಲ್ಲೇ…