ಮೇ.6 : ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ

May 5, 2019
9:15 AM
ಬೆಂಗಳೂರು: ರಾಜ್ಯದಲ್ಲಿ ಸಮ್ಮಿಶ್ರ ಸರಕಾರವು ದ್ವೇಷದ ರಾಜಕಾರಣ ಮಾಡುತ್ತಿರುವುದನ್ನು ಖಂಡಿಸಿ  ಮೇ 6ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿ  ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
 ಕಾಂಗ್ರೆಸ್ – ಜೆಡಿಎಸ್ ಸಮ್ಮಿಶ್ರ ಸರಕಾರ ರಾಜ್ಯದ ಅಭಿವೃದ್ಧಿಗಾಗಿ ಕೆಲಸ ಮಾಡುತ್ತಿಲ್ಲ. ಈಗ ದೋಸ್ತಿ ಪಕ್ಷಗಳ ನಡುವಿನ ಆಂತರಿಕ ಕಚ್ಚಾಟ ಮಿತಿ ಮೀರಿದೆ. ರಾಜ್ಯ ಸರಕಾರದಲ್ಲಿ ಮಂತ್ರಿಗಳು ಅಧಿಕಾರ ದುರುಪಯೋಗ ಪಡಿಸಿಕೊಂಡು ವಿರೋಧ ಪಕ್ಷಗಳನ್ನು ಹತ್ತಿಕ್ಕುವ ದ್ವೇಷ ರಾಜಕಾರಣದಲ್ಲಿ ನಿರತರಾಗಿದ್ದಾರೆ ಎಂದು ಹೇಳಿಕೆಯಲ್ಲಿ  ತಿಳಿಸಿದ್ದಾರೆ. ಈಗ ದ್ವೇಷದ ರಾಜಕಾರಣ ಹೆಚ್ಚಾಗಿದ್ದು  ಬಿಜೆಪಿ ಕಾರ್ಯಕರ್ತರು ಮಾತ್ರವಲ್ಲ  ಮಾಧ್ಯಮದ ವಿರುದ್ಧವೂ ಪ್ರತೀಕಾರಕ್ಕೆ ಸರಕಾರ ಮುಂದಾಗಿದೆ. ಸಚಿವ ಎಂ.ಬಿ. ಪಾಟೀಲ್ ದ್ವೇಷ ರಾಜಕಾರಣದ ಮುಂಚೂಣಿಯಲ್ಲಿ ನಿಂತಿರುವುದು ಖಂಡನೀಯ. ಹೀಗಾಗಿ  ವಿರೋಧ ಪಕ್ಷಗಳನ್ನು , ಮಾಧ್ಯಮಗಳನ್ನು  ಬಾಯಿಮುಚ್ಚಿಸಲು ಹೊರಟಿರುವ ಮೈತ್ರಿ ಸರ್ಕಾರದ ವಿರುದ್ಧ, ರಾಜ್ಯದ ಗೃಹ ಸಚಿವರ ದ್ವೇಷ ರಾಜಕಾರಣ ಖಂಡಿಸಿ ಮೇ.6 ರಂದು ರಾಜ್ಯಾದ್ಯಂತ ಎಲ್ಲಾ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ನಗರೀಕರಣದ ನಡುವೆ ಪ್ರಕೃತಿ, ವನ್ಯಜೀವಿಗಳ ಸಮತೋಲನ ಕಾಪಾಡುವುದು ಆದ್ಯತೆಯಾಗಲಿ
October 10, 2026
2:55 PM
by: ದ ರೂರಲ್ ಮಿರರ್.ಕಾಂ
ಕೊರಿಯರ್ ಮೂಲಕ ಮಾದಕ ದ್ರವ್ಯ ಸಾಗಾಟ..! ಮಂಗಳೂರಿನಲ್ಲಿ 1.58 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ
October 10, 2026
2:51 PM
by: ದ ರೂರಲ್ ಮಿರರ್.ಕಾಂ
ಜಾನುವಾರುಗಳ ಮೇವಿಗಾಗಿ ₹25 ಕೋಟಿ ಬಿಡುಗಡೆ
October 8, 2026
7:28 AM
by: ದ ರೂರಲ್ ಮಿರರ್.ಕಾಂ
ಬೆಂಗಳೂರಿನ ಐಐಎಂನಲ್ಲಿ ‘ಗುಜರಾತ್‌ನಿಂದ ಭಾರತಕ್ಕೆ ಜಗತ್ತಿಗೆ ನೀರಿನ ಪಾಠಗಳು’ ಅಧ್ಯಯನ ವರದಿ ಬಿಡುಗಡೆ
October 8, 2026
7:21 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror