ಸುಳ್ಯ: ಮೈಸೂರಿನ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕ ಎಸ್. ರಾಮದಾಸ್ ಅವರ ಕಾರು ಜಾಲ್ಸೂರಿನಲ್ಲಿ ರಸ್ತೆ ಪಕ್ಕದ ಮೋರಿಗೆ ಢಿಕ್ಕಿ ಹೊಡೆದು, ಕಾರು ಚಾಲಕ ಹಾಗೂ ಶಾಸಕರು ಅಪಾಯದಿಂದ ಪಾರಾದ ಘಟನೆ ಆ.23ರಂದು ಮುಂಜಾನೆ ಸಂಭವಿಸಿದೆ.
ಶಾಸಕ ರಾಮದಾಸ್ ಅವರು ಮೈಸೂರಿನಿಂದ ಸುಳ್ಯ ಮಾರ್ಗವಾಗಿ ಮಂಗಳೂರಿಗೆ ತೆರಳುತ್ತಿದ್ದ ವೇಳೆ ಕಾರು ಜಾಲ್ಸೂರಿನ ಅರಣ್ಯ ತಪಾಸಣಾ ಚೆಕ್ ಪೋಸ್ಟ್ ಬಳಿಗೆ ತಲುಪಿದಾಗ ಕಾರು ಚಾಲಕನ ನಿಯಂತ್ರಣ ತಪ್ಪಿ ಗೇಟಿನ ಬಳಿಯಿರುವ ಮೋರಿಗೆ ಢಿಕ್ಕಿ ಹೊಡೆಯಿತು. ಪರಿಣಾಮ ಕಾರಿನ ಮುಂಭಾಗದ ಸೀಟಿನಲ್ಲಿ ಕುಳಿತಿದ್ದ ಶಾಸಕ ರಾಮದಾಸ್ ಅವರಿಗೆ ಅಲ್ಪ ಸ್ವಲ್ಪ ಗಾಯಗೊಂಡರು. ಈ ಸಂದರ್ಭದಲ್ಲಿ ಅಲ್ಲಿಯೇ ಸಮೀಪದ ಪೆಟ್ರೊಲ್ ಪಂಪ್ ನಲ್ಲಿದ್ದ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡರ ಸದಾನಂದ ಗೌಡರ ಸಹೋದರ ದಿ. ಭಾಸ್ಕರ ಗೌಡರ ಪುತ್ರ ಆಶಿಕ್ ಅವರು ಶಾಸಕ ರಾಮ್ ದಾಸ್ ಅವರನ್ನು ತಮ್ಮ ಕಾರಿನಲ್ಲಿ ಸುಳ್ಯದ ಆಸ್ಪತ್ರೆ ಕರೆತಂದರು ಎಂದು ತಿಳಿದುಬಂದಿದೆ. ಸುಳ್ಯ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
ರಾಜ್ಯದ ಕೆಲವು ಕಡೆ ಮಳೆ ಕಡಿಮೆ ಇದ್ದು, ಮುಂದಿನ 7 ದಿನಗಳ ಹವಾಮಾನ…
ಪ್ರೇಮ ಸಂಬಂಧವು ಭಾವನಾತ್ಮಕ ಸಾಮರಸ್ಯ, ಪರಸ್ಪರ ಗೌರವ ಮತ್ತು ವಿಶ್ವಾಸದ ಮೇಲೆ ನಿಂತಿದೆ.…
ದೇಶದ ಪ್ರತಿಷ್ಠಿತ ಮಹೇಂದ್ರ ಏಂಡ್ ಮಹೇಂದ್ರ ಕಂಪೆನಿಯು ನೂತನವಾಗಿ ತಯಾರಿಸಿದ ಹೊಸ ಮಾದರಿಯ…
ಶೇ.30-40 ರಷ್ಟು ಅಡಿಕೆ ಕೊಳೆರೋಗದಿಂದ ಹಾನಿಯಾಗಿರುವ ಹಾಗೂ ಶೇ.50 ಕ್ಕಿಂತ ಅಧಿಕ ಅಡಿಕೆ…
ಹಲಸಿನ ಬೇಳೆ ಸೂಪ್ ಗೆ ಬೇಕಾಗುವ ವಸ್ತುಗಳು : ಹಲಸಿನ ಬೇಳೆ, ಉಪ್ಪು…
ಮಗನಿಗೆ ತಂದೆ, ಮಗಳಿಗೆ ತಾಯಿ, ಸಿಬ್ಬಂದಿಗಳಿಗೆ ಸಂಸ್ಥೆಯು - ಕಾಮಧೇನು. ಕಾಮಿಸಿದ, ಇಚ್ಛಿಸಿದ…