ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರ ಸರಕಾರಿ ಶಾಲೆಯ ಮಕ್ಕಳಿಗೆ ಹೊಳೆ ದಾಟಲು ಸೇತುವೆ ಮಾಡಿಕೊಡಿ ಎಂಬ ಬೇಡಿಕೆ ಇನ್ನೂ ಈಡೇರಿಲ್ಲ. ದೊಡ್ಡ ಬಜೆಟ್ ಸೇತುವೆ ಮುಂದೆ ಯಾವಾಗಲಾದರೂ ಮಾಡಿ ಸದ್ಯಕ್ಕೆ ಮಳೆಗಾಲದಲ್ಲಿ ದಾಟಲು ಕಾಲು ಸಂಕ ಅಥವಾ ತೂಗುಸೇತುವೆ ಮಾಡಿಕೊಡಿ ಎಂಬ ಬೇಡಿಕೆಯನ್ನೂ ಜನನಾಯಕರು ಪರಿಗಣಿಸಲೇ ಇಲ್ಲ. ಇದೀಗ ಇನ್ನೊಂದು ಭರವಸೆ ಮೂಡಿದೆ. ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರ ಗಮನಕ್ಕೆ ಈ ಶಾಲೆಯ ಸ್ಥಿತಿ ಬೆಳಕಿಗೆ ಬಂದಿದೆ. ಈ ಬಗ್ಗೆ ಗಮನಹರಿಸುವುದಾಗಿ ಹೇಳಿದ್ದಾರೆ.
ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ರಾಜ್ಯದ ಶಾಲೆಯೊಂದರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದಿದ್ದರು. ಇದಕ್ಕೆ ಪ್ರತಿಕ್ರಿಯೆಯಾಗಿ ಕಮಿಲದ ಮಹೇಶ್ ಅವರು ಮೊಗ್ರ ಶಾಲಾ ಮಕ್ಕಳ ಸ್ಥಿತಿ ಹಾಗೂ ಸೇತುವೆ ಅಥವಾ ಕಾಲು ಸಂಕ ಆಗದೇ ಇರುವ ಬಗ್ಗೆ ಪ್ರತಿಕ್ರಿಯೆ ರೂಪದಲ್ಲಿ ಮಾಹಿತಿ ನೀಡಲಾಗಿತ್ತು. ತಕ್ಷಣವೇ ಈ ಬಗ್ಗೆ ಸಂಪರ್ಕ ಸಂಖ್ಯೆ ಪಡೆದುಕೊಂಡು ಕರೆ ಮಾಡಿ ಮಾಹಿತಿ ಪಡೆದುಕೊಂಡ ಸಚಿವ ಸುರೇಶ್ ಕುಮಾರ್ ಅವರು ಈ ಬಗ್ಗೆ ಗಮನಹರಿಸುವುದಾಗಿ ಭರವಸೆ ನೀಡಿದ್ದಾರೆ. ಶಾಲಾ ಮಕ್ಕಳಿಗೆ ಮಳೆಗಾಲ ಹೊಳೆದಾಟುವಂತೆ ಕನಿಷ್ಟ ಕಾಲುಸಂಕ ಮಾಡಿಸುವ ಕಡೆಗೆ ಗಮನಹರಿಸಲು ಜಿಲ್ಲಾಧಿಕಾರಿ ಹಾಗೂ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜೊತೆ ಮಾತುಕತೆ ನಡೆಸುವುದಲ್ಲದೆ ಸ್ಥಳಕ್ಕೆ ಭೇಟಿ ನೀಡುವುದಾಗಿ ಹೇಳಿದ್ದಾರೆ.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…