ಬೆಳ್ಳಾರೆ: ಯಕ್ಷಗಾನ ಕರಾವಳಿಯ ಗಂಡುಗಲೆಯಾಗಿದೆ. ದೇವದೈವರುಗಳ ಮಹಿಮೆಯ ಅರಿವನ್ನು ಜನರಿಗೆ ಯಕ್ಷಗಾನ ಕಲೆಯ ಮೂಲಕ ಮೂಡಿಸಬಹುದಾಗಿದೆ. ಯಕ್ಷಗಾನದ ಮೂಲಕ ಸಂಸ್ಕೃತಿ ಉಳಿವು ಸಾಧ್ಯವಾಗುತ್ತದೆ, ಈ ನಿಟ್ಟಿನಲ್ಲಿ ಯಕ್ಷಗಾನವನ್ನು ಯುವಜನಾಂಗದವರು ಉಳಿಸಿಕೊಳ್ಳಬೇಕು ಎಂದು ಐವರ್ನಾಡು ಪ್ರೌಢಶಾಲಾ ಶಿಕ್ಷಕ ಸೂಫಿ.ಸಿ.ಐ ಹೇಳಿದರು.
ಐವರ್ನಾಡು ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಯಕ್ಷಗಾನ ತರಬೇತಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ತರಬೇತಿಯನ್ನು ಸುಳ್ಯ ತಾಲೂಕು ಶಿಕ್ಷಕರ ಯಕ್ಷಗಾನ ಒಕ್ಕೂಟದ ಅಧ್ಯಕ್ಷ, ತಾಲೂಕು ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಲಿಂಗಪ್ಪ ಬೆಳ್ಳಾರೆ ನಡೆಸಿಕೊಡಲಿದ್ದಾರೆ. ವೇದಿಕೆಯಲ್ಲಿ ವಿಜ್ಞಾನ ಶಿಕ್ಷಕ ಚಿದಾನಂದ.ಕೆ ಉಪಸ್ಥಿತರಿದ್ದರು. ಶಿಕ್ಷಕ ನಾರಾಯಣ ಬಿ ಕಾರ್ಯಕ್ರಮ ನಿರೂಪಿಸಿದರು.
ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ಹಾಲಗುಂಡಿ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಲಕ್ಕುಂಡಿ ಪಾರಂಪರಿಕ…
ಬೆಂಗಳೂರಿನ ಬಸವನ ಗುಡಿಯಲ್ಲಿ ಐತಿಹಾಸಿಕ ಕಡಲೆಕಾಯಿ ಪರಿಷೆ ಸೊಬಗು ಕಳೆಗಟ್ಟಿದೆ. ಇಂದು ಕಡಲೆಕಾಯಿ…
ಚಿಕ್ಕಮಗಳೂರು ಜಿಲ್ಲೆಯಲ್ಲಿ ಆನೆಗಳ ಹಾವಳಿ ತಡೆಯಲು ಸರ್ಕಾರದ ಸಚಿವರು ಹಾಗೂ ಅರಣ್ಯ ಇಲಾಖೆ…
ಅಡಿಕೆ ಹಳದಿ ಎಲೆರೋಗ ಬಾಧಿಸಿದ ತೋಟದ ಕೃಷಿಕ ಶಂಕರಪ್ರಸಾದ್ ರೈ ಅವರು ಕೃಷಿ…
ಅಡಿಕೆ ಕೃಷಿಯ ಜೊತೆಗೆ ಮಿಶ್ರ ಕೃಷಿಯನ್ನು ಏಕೆ ಮಾಡಬೇಕು..? ಯಾವ ಕೃಷಿಯನ್ನು ಮಾಡಬಹುದು..?…
25.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…