ಸುಬ್ರಹ್ಮಣ್ಯ: ಅನಾರೋಗ್ಯದಿಂದ ಬಳಲುತ್ತಿರುವ ಕುಕ್ಕೆ ಸುಬ್ರಹ್ಮಣ್ಯ ದೇಗುಲದ ಆನೆ ಯಶಸ್ವಿಗೆ ಗುರುವಾರ ತಜ್ಞ ವೈದ್ಯರಿಂದ ಚಿಕಿತ್ಸೆ ನೀಡಲಾಗಿದೆ. ಇದೀಗ ಚಿಕಿತ್ಸೆಗೆ ಸ್ಪಂದಿಸುತ್ತಿದೆ.
ನಾಗರಹೊಳೆ ಅಭಯಾರಣ್ಯದ ದುಬಾರೆ ವನ್ಯಸಂರಕ್ಷಣೆ ವಿಭಾಗದ ತಜ್ಞ ವೈದ್ಯ ಡಾ. ಶೆಟ್ಟಿಯಪ್ಪ ಆಗಮಿಸಿ ಶೆಡ್‍ನಲ್ಲಿರುವ ಆನೆಯ ಆರೋಗ್ಯ ಪರೀಕ್ಷೆ ನಡೆಸಿ ಚಿಕಿತ್ಸೆ ನೀಡಿದರು. ಗುತ್ತಿಗಾರು ಪಶುವೈದ್ಯ ಕೇಂದ್ರದ ವೈದ್ಯ ಡಾ.ವೆಂಕಟಾಚಲಪತಿ ಸಹಕಾರದಲ್ಲಿ ಆನೆಗೆ ಚಿಕಿತ್ಸೆ ನೀಡಲಾಯಿತು. ಆನೆಯು ಅಜೀರ್ಣದಿಂದ ಬಳಲುತ್ತಿದ್ದು ತಿಂದ ಆಹಾರ ಜೀರ್ಣವಾಗುತಿಲ್ಲ. ದೇಹ ಉಷ್ಣತೆಯೂ ಅಧಿಕವಾಗಿದ್ದು ಆಹಾರ ಜೀರ್ಣವಾಗುತಿಲ್ಲ. ತಿಂದ ಆಹಾರ ಹೊಟ್ಟೆಯಲ್ಲಿ ಕರಗದೆ ಸೊಪ್ಪುವಿನ ನಾರು ಲದ್ದಿ ಜತೆ ಸುತ್ತಿಕೊಂಡು ಲದ್ದಿ ಹಾಕಲು ಸಾಧ್ಯವಾಗುತ್ತಿಲ್ಲ ಎಂದು ಆನೆಯ ಆರೋಗ್ಯ ಪರೀಕ್ಷಿಸಿದ ವೈದ್ಯರು ತಿಳಿಸಿದರು. ಈಗ ಆಹಾರ ಜೀರ್ಣವಾಗಲು ಔಷಧಿ ನೀಡಲಾಗಿದೆ. ದೇಹದ ಉಷ್ಣಾಂಶ ಕಡಿಮೆಗೊಳಿಸಲು ಎಳನೀರು ಗುರುವಾರ ನೀಡಲಾಗಿದೆ. ದೇಹದಲ್ಲಿ ನೀರಿನಂಶ ಹೆಚ್ಚಿಸಲು ತುಸು ಬೆಚ್ಚಗಿನ ನೀರು ಕುಡಿಸಲಾಗುತ್ತಿದೆ. ಜತೆಗೆ ಮೃದು ಆಹಾರವನ್ನು ನೀಡಲಾಗುತ್ತಿದೆ. ಆನೆಯು ಸ್ವಲ್ಪವೇ ಚೇತರಿಸಿಕೊಳ್ಳುತ್ತಿರುವುದು ಕಂಡು ಬಂದಿದೆ. ಚಿಕಿತ್ಸೆ ಮುಂದುವರೆಸಲಾಗುತ್ತಿದೆ.
ಆನೆಯ ಆರೋಗ್ಯ ಸುಧಾರಣೆಗೆ ಸಾಕಷ್ಟು ಕಾಳಜಿ ವಹಿಸಿ ಶ್ರಮ ವಹಿಸಲಾಗುತ್ತಿದೆ ಎಂದು ಕಳೆದ ನಾಲ್ಕು ದಿನಗಳಿಂದ ಹಗಲು ರಾತ್ರಿ ಶೆಡ್‍ನಲ್ಲೆ ಇದ್ದು ಆನೆಗೆ ಚಿಕಿತ್ಸೆ ನೀಡುತ್ತಿರುವ ಪಶುವೈದ್ಯ ಡಾ.ವೆಂಕಟಾಚಲಪತಿ ತಿಳಿಸಿದ್ದಾರೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆ.1 ರಂದು ಕೇಂದ್ರ ಬಜೆಟ್ ಮಂಡಿಸಲಿದ್ದು,…
ಮಾನಸಿಕ ವಿಕಲಚೇತನರಾಗಿ ಉಡುಪಿಯಲ್ಲಿ ರಸ್ತೆ ಬದಿ ತಿರುಗಾಡುತ್ತಿದ್ದ ಬಿಹಾರದ ರಮಾದೇವಿ ಅವರು ವರ್ಷದ…
ಮಣ್ಣಿನಲ್ಲಿ ಬಿದ್ದ ಬೀಜವು ಜೀವಂತಿಕೆಯಿಂದ ತನ್ನ ಬೇರುಗಳನ್ನು ಸಿಕ್ಕಿದ ಬಿರುಕುಗಳಲ್ಲಿ ಹಬ್ಬಿಸುತ್ತ ತೆವಳುತ್ತ…
ಮುಂದಿನ ಆರ್ಥಿಕ ವರ್ಷದಿಂದ ರಾಜ್ಯದ ಸಾವಯವ ಉತ್ಪನ್ನಗಳ ಮಾರಾಟಕ್ಕೆ ಎಪಿಎಂಸಿಗಳಲ್ಲಿ ಮಾರುಕಟ್ಟೆ ವ್ಯವಸ್ಥೆ…
ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆಯ ಬಗ್ಗೆ ಅಧ್ಯಯನ ಮಾಡಲು ಶ್ರೀಲಂಕಾದಿಂದ 38 ಮಂದಿ “ಲಂಕಾ…
ಬದಲಾದ ಕಾಲದಲ್ಲಿ ನಾವು ಇಂತಹ ಪರಿಕರಕೊಳ್ಳುವ ಮೊದಲು ನಮಗೆಷ್ಟು ಇದು ಪ್ರಯೋಜನಕಾರಿ ಎಂದು…