ಮಂಗಳೂರು: ಈ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ ಜಿಲ್ಲೆಯಲ್ಲಿ ಯಶಸ್ವಿಯಾಗಿ ಮುಕ್ತಾಯಗೊಂಡಿರುವುದಕ್ಕೆ ಜಿಲ್ಲಾಧಿಕಾರಿ ಸಿಂಧೂ. ಬಿ. ರೂಪೇಶ್ ಅಭಿನಂದನೆ ಸಲ್ಲಿಸಿದ್ದಾರೆ.
Advertisement
ಕೋವಿಡ್ ಆತಂಕದ ನಡುವೆಯೂ ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ಅಧ್ಯಯನ ಮಾಡಿ, ಉತ್ಸಾಹದಿಂದ ಆಗಮಿಸಿ ಪರೀಕ್ಷೆ ಬರೆದಿದ್ದಾರೆ. ಪಾಲಕರೂ ತಮ್ಮ ಮಕ್ಕಳಿಗೆ ಪರೀಕ್ಷೆ ಬರೆಯಲು ಧೈರ್ಯ ತುಂಬಿದ್ದಾರೆ. ಕೇರಳ ರಾಜ್ಯದ ವಿದ್ಯಾರ್ಥಿಗಳು ಜಿಲ್ಲಾಡಳಿತ ಒದಗಿಸಿದ ಸಾರಿಗೆ ಸೌಲಭ್ಯ ಬಳಸಿಕೊಂಡು, ಪರೀಕ್ಷೆಗೆ ಉತ್ಸಾಹದಿಂದ ಆಗಮಿಸಿದ್ದಾರೆ.
Advertisement
ಯಾವುದೇ ಗೊಂದಲಗಳಿಲ್ಲದೇ ಸಾಮಾಜಿಕ ಅಂತರದೊಂದಿಗೆ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಿ ಪರೀಕ್ಷೆಗೆ ಸಹಕರಿಸಿದ ವಿದ್ಯಾರ್ಥಿಗಳು, ಪಾಲಕರು, ಶಿಕ್ಷಕರು, ಶಿಕ್ಷಣ ಇಲಾಖೆ ಅಧಿಕಾರಿ ಸಿಬ್ಬಂದಿಗಳು, ಶಾಲಾ ಆಡಳಿತ ಮಂಡಳಿಗಳಿಗೆ, ವಾಹನ ಚಾಲಕರಿಗೆ ಜಿಲ್ಲಾಧಿಕಾರಿಗಳು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement