ಪುತ್ತೂರು:ಭಾರತವು ಒಂದು ಬದಲಾವಣೆಯ ಕಾಲಘಟ್ಟದಲ್ಲಿ ಬಂದು ನಿಂತಿದೆ. ನವ ಭಾರತದ ನಿರ್ಮಾಣಕಾರ್ಯವನ್ನು ಪ್ರಧಾನಿ ನರೇಂದ್ರ ಮೋದಿ ಮಾಡುತ್ತಿದ್ದಾರೆ. ಅದರಲ್ಲಿ ಇಂದಿನ ಯುವಜನತೆ ನವಭಾರತದ ನಿರ್ಮಾಣಕಾರ್ಯದಲ್ಲಿ ತೊಡಗಿಕೊಳ್ಳಬೇಕು ಎಂದು ಯುವ ಸಂಸದ ತೇಜಸ್ವಿ ಸೂರ್ಯ ಹೇಳಿದರು.
ಅವರು ವಿವೇಕಾನಂದ ವಿದ್ಯಾವರ್ಧಕ ಸಂಘ ಮತ್ತು ವಿವೇಕಾನಂದ ಕಾನೂನು ಕಾಲೇಜಿನ ಸಹಯೋಗದಲ್ಲಿ ಕೇಶವ ಸಂಕಲ್ಪ ಸಭಾಭವನದಲ್ಲಿ ನಡೆದ ‘ಯೂತ್-ವಿಷನ್-ನೇಶನ್’ ಎಂಬ ವಿಷಯದ ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು. ದೇಶದಲ್ಲಿ ಅನೇಕ ಒಳ್ಳೆಯ ಬದಲಾವಣೆಗಳು ಆಗುತ್ತಿವೆ. ಸ್ವಚ್ಛ ಭಾರತದಂತಹ ಪರಿಕಲ್ಪನೆಗಳು ದೇಶದಲ್ಲಿ ಕ್ರಾಂತಿಯನ್ನು ಉಂಟುಮಾಡುತ್ತಿವೆ. ನರೇಂದ್ರ ಮೋದಿಯವರ ಇಂತಹ ಅನೇಕ ಯೋಜನೆಗಳು ದೇಶದಲ್ಲಿ ಬದಲಾವಣೆಯನ್ನು ತರುತ್ತಿದೆ.ಆದ್ದರಿಂದ ಯುವಜನತೆ ಈ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು.ಆಗ ಮಾತ್ರದೇಶ ಸದೃಢವಾಗಲು ಸಾಧ್ಯಎಂದರು. ಕಾಶ್ಮೀರದಲ್ಲಿ ಜಾರಿಯಲ್ಲಿ ಇದ್ದ ಸಾಂವಿಧಾನಿಕ 370ನೇ ವಿಧಿಯನ್ನು ರದ್ದು ಮಾಡುವ ಮೂಲಕ ಮತ್ತೊಂದು ಬದಲಾವಣೆಯನ್ನು ಕೇಂದ್ರ ಸರಕಾರ ಮಾಡಿದೆ.ಇದರಿಂದ ಕಾಶ್ಮೀರದಲ್ಲಿ ಅಬಿವೃದ್ದಿಯ ಪಥ ಶುರುವಾಗಿದೆ.ಇತಿಹಾಸದ ಅನೇಕ ತಪ್ಪುಗಳಿಂದಾಗಿ 370ನೇ ವಿಧಿ ಶುರುವಾಯಿತು. ಅದರಅಂತ್ಯವಾಗಿದೆ. ಎಂದು ಹೇಳಿ 370ನೇ ವಿಧಿಯಕುರಿತು ಸವಿವರವಾಗಿ ಮಾಹಿತಿ ನೀಡಿದರು.
ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿಗಳಾದ ಡಾ.ಕೆ.ಎಂ.ಕೃಷ್ಣ ಭಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವಿವೇಕಾನಂದ ಕಾನೂನು ಕಾಲೇಜಿನ ಅಧ್ಯಕ್ಷರಾದ ಗಣೇಶ್‍ಜೋಷಿ, ಸಂಚಾಲಕರಾದ ವಿಜಯನಾರಾಯಣ ಕೆ.ಎಂ, ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾನೂನು ಕಾಲೇಜಿನ ಆಡಳಿತ ಮಂಡಳಿಯ ಖಜಾಂಜಿ ಅರವಿಂದ್ ವಳಕಟ್ಟೆ ಸ್ವಾಗತಿಸಿ, ಕಾನೂನು ಅಧ್ಯಯನ ವಿಭಾಗದ ನಿರ್ದೇಶಕರಾದ ಡಾ. ಬಿ. ಕೆ.ರವೀಂದ್ರ ವಂದಿಸಿದರು. ಕಾನೂನು ಕಾಲೇಜಿನ ಉಪನ್ಯಾಸಕರಾದ ಕುಮಾರ್‍ಎಸ್. ಕಾರ್ಯಕ್ರಮ ನಿರೂಪಿಸಿದರು.
ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…
https://youtu.be/PgODhBnoUso?si=CtTWIV_6u7GnfVGw
ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…
ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…
ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…