ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಜು.1ರಂದು ದ.ಕ. ಜಿಲ್ಲಾ ಪತ್ರಕರ್ತರ ಸಮ್ಮೇಳನ ನಡೆಯಲಿದ್ದು, ಇದರ ಅಂಗವಾಗಿ ಪದವಿ ಹಾಗೂ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ‘ಯುವಶಕ್ತಿ’ (ದಿ ಪವರ್ ಆಫ್ ಯೂತ್) ವಿಷಯಾಧಾರಿತವಾಗಿ ಪ್ರಬಂಧ, ಕಿರುಚಿತ್ರ ಆಯೋಜಿಸಲಾಗಿದ್ದು, ಒಟ್ಟು 4 ಮಂದಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಪ್ರಬಂಧ ಸ್ಪರ್ಧೆಯಲ್ಲಿ ಮಂಗಳೂರಿನ ಸೈಂಟ್ ಆಗ್ನೇಸ್ ಕಾಲೇಜಿನ ಬಿಕಾಂ ವಿದ್ಯಾರ್ಥಿನಿ ಹೆವಿಕಾ ಮೆಲಾನಿ ಅಲ್ವಾರಿಸ್ ಪ್ರಥಮ ಸ್ಥಾನ, ನಗರದ ಸೈಂಟ್ ಅಲೋಶಿಯಸ್ ಕಾಲೇಜಿನ ಲಿಶೇಲ್ ಲೀಮಾ ಡಿಸೋಜ ದ್ವಿತೀಯ ಸ್ಥಾನ ಪಡೆದಿದ್ದಾರೆ. ಕಿರುಚಿತ್ರ ಸ್ಪರ್ಧೆಯಲ್ಲಿ ಮಡಿಕೇರಿ ಕೆ.ಎಂ. ಕಾರ್ಯಪ್ಪ ಕಾಲೇಜಿನ ತೃತೀಯ ವರ್ಷದ ಬಿಎ ವಿದ್ಯಾರ್ಥಿ ರಾಜೇಶ್ ಜಿ. ಮತ್ತು ನಿಶಾ ವಿ.ಆರ್. ಪ್ರಶಸ್ತಿ ಪಡೆದುಕೊಂಡಿದ್ದಾರೆ. ವಿಜೇತರಿಗೆ ನಗದು ಪ್ರಶಸ್ತಿ, ಅಭಿನಂದನಾ ಪತ್ರ ಹಾಗೂ ಸ್ಮರಣಿಕೆ ನೀಡಲಾಗುವುದು.
ಪ್ರಶಸ್ತಿ ವಿತರಣೆ: ಜುಲಾಯಿ 1ರಂದು ಸಂಜೆ 4ಗಂಟೆಗೆ ನಗರದ ಪುರಭವನದಲ್ಲಿ ನಡೆಯುವ ದ.ಕ. ಜಿಲ್ಲಾ ಪತ್ರಕರ್ತರ ಸಮ್ಮೇಳನ ಸಮಾರೋಪ ಸಮಾರಂಭದಲ್ಲಿ ವಿಜೇತರಿಗೆ ಬಹುಮಾನ ವಿತರಣೆ ನಡೆಯಲಿದೆ.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…