ಪುತ್ತೂರು: ಯುವ ಕಾಂಗ್ರೆಸ್ ಮುಖಂಡರೊಬ್ಬರು ಕೊರೊನಾ ವೈರಸ್ ಹರಡುವುದು ತಡೆಯುವ ಕಠಿಣ ಸಂದರ್ಭದಲ್ಲೂ ರಾಜಕೀಯ ಮಾಡಲು ಮುಂದಾಗಿದ್ದಾರೆ. ಜಿಲ್ಲಾಡಳಿತ ಸೂಕ್ತವಾದ ಕ್ರಮಗಳನ್ನು ಕೈಗೊಂಡ ಕಾರಣದಿಂದಲೇ ಜಿಲ್ಲೆಯಲ್ಲಿ ಕೊರೊನಾ ವೈರಸ್ ಹರಡುವುದು ತಡೆಯಲು ಸಾಧ್ಯವಾಗಿದೆ. ಇಂತಹ ಕೀಳುಮಟ್ಟದ ರಾಜಕೀಯ ಇಂತಹ ಸಂದರ್ಭದಲ್ಲಿ ಮಾಡಬಾರದು ಎಂದು ಪುತ್ತೂರು ಶಾಸಕ ಸಂಜೀವ ಮಠಂದೂರು ಹೇಳಿದ್ದಾರೆ.
ಉಪ್ಪಿನಂಗಡಿಯಲ್ಲಿ ಕೊರೊನಾ ಪಾಸಿಟಿವ್ ಆದ ವ್ಯಕ್ತಿಯ ಬಗ್ಗೆ ಪುತ್ತೂರು ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷರೊಬ್ಬರು ಬೇಜವಾಬ್ದಾರಿ ಹೇಳಿಕೆ ನೀಡಿರುವುದು ಸರಿಯಲ್ಲ. ಮನುಷ್ಯನ ಜೀವನ ಜೊತೆ ಚೆಲ್ಲಾಟವಾಡುವ ಹೇಳಿಕೆಗಳನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದು ಸಂಜೀವ ಮಠಂದೂರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡುತ್ತಾ ಹೇಳಿದ್ದಾರೆ. ಇಂತಹ ನಾಯಕರು ಇನ್ನು ಮುಂದಾದರೂ, ಬೇಜವಾಬ್ದಾರಿ ಹೇಳಿಕೆ ನೀಡುವುದು ಬಿಟ್ಟು ಸಮಾಜಕ್ಕೆ ತಾವೇನು ಕೊಡುಗೆ ನೀಡುತ್ತಿದ್ದೇವೆ ಎಂದು ಮಾಡಿ ತೋರಿಸಲಿ ಎಂದು ಪ್ರತಿಕ್ರಿಯೆ ನೀಡಿದ್ದಾರೆ.
ಕೊರೊನಾ ವೈರಸ್ ವಿರುದ್ಧದ ಹೋರಾಟದಲ್ಲಿ ಎಲ್ಲರೂ ಕೈಜೋಡಿಸಬೇಕಿದೆ. ಇಲ್ಲಿ ರಾಜಕೀಯ ಮಾಡುವುದು , ಉದ್ದೇಶಪೂರ್ವಕವಾಗಿ ಟೀಕೆ ಮಾಡುವುದು ಸರಿಯಲ್ಲ.ಉಪ್ಪಿನಂಗಡಿ ಯುವಕನಿಗೆ ಕೊರೊನಾ ವೈರಸ್ ಪಾಸಿಟಿವ್ ಪ್ರಕರಣದಲ್ಲಿ ವಿಶ್ವ ಆರೋಗ್ಯ ಸಂಸ್ಥೆ ನಿರ್ದೇಶಿಸಿದ ರೀತಿಯಲ್ಲಿಯೇ ಕ್ವಾರಂಟೈನ್ ನಲ್ಲಿ ಇರಿಸಿದ್ದು ಸ್ಪಷ್ಟವಾಗಿ. ಜಿಲ್ಲಾಡಳಿತ ಸೂಕ್ತ ರೀತಿಯಲ್ಲಿ ಕ್ರಮ ಕೈಗೊಂಡಿದೆ. ಆದರೆ ಕಾಂಗ್ರೆಸ್ ನಾಯಕರುಗಳು ಇಂತಹ ಕಠಿಣ ಪರಿಸ್ಥಿತಿಯಲ್ಲಿ ರಾಜಕೀಯ ಮಾಡುವುದನ್ನು ನಿಲ್ಲಿಸಬೇಕು. ಇವರಿಗೆ ನಮ್ಮ ಜನರ ಆರೋಗ್ಯದ ಮೇಲೆ ಒಂದಿಷ್ಟು ಕಾಳಜಿ ಇದ್ದರೆ, ಇಂತಹ ಬೇಜವಾಬ್ದಾರಿ ಹೇಳಿಕೆ ಕೊಡುವುದು ಸರಿಯಲ್ಲ. ಆಯಾ ಪ್ರದೇಶಗಳಲ್ಲಿ ಜನರು ಲಾಕ್ಡೌನ್ ನಿಯಮ ಪಾಲಿಸುವಂತೆ ಜನಸಮುದಾಯವನ್ನು ಪ್ರೋತ್ಸಾಹಿಸಬೇಕು.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…
ಕ್ಯೂಆರ್ ಕೋಡ್ ಬಳಸಿಕೊಂಡು ಗೇರು ತಳಿಗಳ ಮಾಹಿತಿ ಪಡೆಯಲು ಪುತ್ತೂರಿನ ಗೇರು ಸಂಶೋಧನಾ…
ಅಡಿಕೆಗೆ ಹಳದಿ ಎಲೆರೋಗದಿಂದ ಅಡಿಕೆ ಮರಗಳು ನಾಶವಾಗುತ್ತಿವೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ…
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…
WHO ನಿಲುವನ್ನುಮರುಪರಿಶೀಲಿಸುವಂತೆ ಮಾಡಲು ICMR, ICAR, AIUMS, CSIR, CFTRI ಮೈಸೂರು ಅಥವಾ…