ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಆಯುಷ್ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಆಯುಷ್ ವೆಲ್‍ನೆಸ್ ಸೆಂಟರುಗಳಾದ ಸರ್ಕಾರಿ ಆಯುರ್ವೇದ ಚಿಕಿತ್ಸಾಲಯ ಬಳ್ಕುಂಜೆ, ಸರ್ಕಾರಿ ಆಯುರ್ವೇದ ಚಿಕಿತ್ಸಾಲಯ ಸಜಿಪಮೂಡ, ಸರ್ಕಾರಿ ಆಯುರ್ವೇದ ಚಿಕಿತ್ಸಾಲಯ ಕಣಿಯೂರಿಗೆ ಗುತ್ತಿಗೆ ಆಧಾರದಲ್ಲಿ ತಾತ್ಕಾಲಿಕವಾಗಿ ಯೋಗ ತರಬೇತುದಾರರು (ಪಾರ್ಟ್ ಟೈಂ) ಹುದ್ದೆಗೆ ನೇಮಕ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.
ವಿದ್ಯಾರ್ಹತೆ: ಕನಿಷ್ಟ 10+2 ಉತ್ತೀರ್ಣರಾಗಿರಬೇಕು ಮತ್ತು ಯೋಗ ವೆಲ್‍ನೆಸ್ ಇನ್‍ಸ್ಟ್ರಕ್ಟರ್ ಕೋರ್ಸ್ ಪ್ರಮಾಣ ಪತ್ರವನ್ನು ಯೋಗ ಸರ್ಟಿಫಿಕೇಷನ್ ಬೋರ್ಡ್‍ನಿಂದ ಪಡೆದಿರಬೇಕು ಅಥವಾ ಕನಿಷ್ಟ 10+2 ಉತ್ತೀರ್ಣರಾಗಿರಬೇಕು ಮತ್ತು ಪ್ರತಿಷ್ಟಿತ ಸಂಸ್ಥೆಯಲ್ಲಿ ಯೋಗ ತರಬೇತುದಾರರಾಗಿ ಕರ್ತವ್ಯ ನಿರ್ವಹಿಸಿದ ಅನುಭವವನ್ನು ಹೊಂದಿರಬೇಕು. ವಯೋಮಿತಿ 60 ವರ್ಷ ಮೀರಬಾರದು, ಸ್ಥಳೀಯರಿಗೆ ಪ್ರಾಶಸ್ತ್ಯವನ್ನು ನೀಡಲಾಗುವುದು. ಅರ್ಜಿ ಸಲ್ಲಿಸಲು ಆಗಸ್ಟ್ 5 ಕೊನೆಯ ದಿನ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆಯುಷ್ ಕಚೇರಿ ದೂರವಾಣಿ ಸಂಖ್ಯೆ: 0824-2453063 ಸಂಪರ್ಕಿಸವಂತೆ ದ.ಕ ಆಯುಷ್ ಇಲಾಖಾ ಪ್ರಕಟಣೆ ತಿಳಿಸಿದೆ.
ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಮತ್ತು ಇತರ ಮೂವರು ಸಿಬ್ಬಂದಿಯನ್ನು…
ಸಾಮಾಜಿಕ ವ್ಯವಸ್ಥೆಯಲ್ಲಿ ‘ಸೇವೆ’ಗೆ ಮೌಲ್ಯ ನಿರ್ಧರಿಸಲು ಕಷ್ಟಸಾಧ್ಯ. ಆತ್ಮಾರ್ಥ ಸೇವೆಗಳು ಸದ್ದಾಗುವುದಿಲ್ಲ. ಫಕ್ಕನೆ…
15.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಧಾತ್ರಿ ಕೆ ರಾವ್ , 7ನೇ ತರಗತಿ ಶ್ರೀ ಅನ್ನಪೂರ್ಣೇಶ್ವರಿ ವಿದ್ಯಾಮಂದಿರ, ನಿಲುವಾಗಿಲು,…
ಭವಿಷ್ಯ ಕೆ ಪಿ, 8 ನೇ ತರಗತಿ, ಸೈಂಟ್ ಆನ್ಸ್ ಇಂಗ್ಲಿಷ್ ಮೀಡಿಯಂ…
ರಾಜ್ಯದ ವಿವಿದೆಡೆ ಸದ್ಯ ಸಾಧಾರಣ ಮಳೆಯಾಗುತ್ತಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಕೂಡಾ…