ಸುಳ್ಯ: ಸಂಗೀತ ಕಲಿಯುವುದು ಮತ್ತು ಕಲಿಸುವುದು ಜನ್ಮಾಂತರದ ಪುಣ್ಯ ಎಂದು ಸಂಗೀತ ಗುರು ಕಾಂಚನ ಈಶ್ವರ ಭಟ್ ಹೇಳಿದ್ದಾರೆ.
ವಳಲಂಬೆ ಶಂಖಪಾಲ ಸುಬ್ರಹ್ಮಣ್ಯ ಸ್ವಾಮಿ ಸಭಾಭವನದ ಕದ್ರಿ ಗೋಪಾಲನಾಥ್ ಕಲಾವೇದಿಕೆಯಲ್ಲಿ ನಡೆದ ಎಲಿಮಲೆಯ ರಂಜನಿ ಸಂಗೀತ ಸಭಾದ ದಶಮಾನೋತ್ಸವ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ಸಂಗೀತದ ಉದ್ದೇಶವೇ ಅರ್ಪಣೆ. ಸಂಗೀತದ ಮೂಲಕ ಬದುಕನ್ನು ಸ್ವಾಮಿಗೆ ಅರ್ಪಿಸುವ ಮೂಲಕ ಜೀವನದಲ್ಲಿ ಸಾರ್ಥಕತೆಯನ್ನು ಪಡೆಯಬಹುದು ಎಂದು ಅವರು ಅಭಿಪ್ರಾಯಪಟ್ಟರು.
ಸುನಾದ ಸಂಗೀತ ಶಾಲೆಯ ಸಂಚಾಲಕ, ಸಂಗೀತ ಗುರು ವಿದ್ವಾನ್ ಕಾಂಚನ ಎ.ಈಶ್ವರ ಭಟ್, ವೈದಿಕ ವಿದ್ವಾಂಸ ವೇದ ಮೂರ್ತಿ ಕರುವಜೆ ಕೇಶವ ಜೋಯಿಸ, ಸಂಗೀತ ಕಲಾವಿದ ಯಜ್ಞೇಶ್ ಆಚಾರ್ ಸುಬ್ರಹ್ಮಣ್ಯ ಅವರನ್ನು ಸುಳ್ಯದ ಆಯಶಿಲ್ಪದ ನಿರ್ದೇಶಕ, ಪದ್ಮಶ್ರೀ ಪುರಸ್ಕೃತ ಡಾ.ಗಿರೀಶ್ ಭಾರದ್ವಾಜ್ ಸನ್ಮಾನಿಸಿದರು. ಶಿಕ್ಷಕ ಪದ್ಯಾಣ ನಾರಾಯಣ ಭಟ್ ಅಧ್ಯಕ್ಷತೆಯಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ ವಳಲಂಬೆ ಶಂಖಪಾಲ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನಿಕಟಪೂರ್ವ ಅಧ್ಯಕ್ಷ ಕೇಶವ ಹೊಸೊಳಿಕೆ, ಕಾಸರಗೋಡು ಗೋಪಾಲಕೃಷ್ಣ ಸಂಗೀತ ವಿದ್ಯಾಲಯದ ನಿರ್ದೇಶಕ ಬಿ.ಜಿ.ಈಶ್ವರ ಭಟ್ ಮುಖ್ಯ ಅತಿಥಿಗಳಾಗಿದ್ದರು.
ರಂಜನಿ ಸಂಗೀತ ಸಭಾದ ನಿರ್ದೇಶಕಿ ಹಾಗು ಸಂಗೀತ ಶಿಕ್ಷಕಿ ರೇಖಾ ರೇವತಿ ಹೊನ್ನಡಿ, ನಿರ್ದೇಶಕ ಸತ್ಯನಾರಾಯಣ ಹೊನ್ನಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಲಕ್ಷ್ಮೀಶ ಗಬ್ಬಲಡ್ಕ ಕಾರ್ಯಕ್ರಮ ನಿರೂಪಿಸಿದರು.
ಗಾಯತ್ರಿ ವೆಂಕಟರಾಘವನ್ ಸಂಗೀತ ಕಛೇರಿ: ಸಭಾ ಕಾರ್ಯಕ್ರಮದ ಬಳಿಕ ವಿದುಷಿ ಗಾಯತ್ರಿ ವೆಂಕಟರಾಘವನ್ ಚೆನ್ನೈ ಅವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿ ನಡೆಯಿತು. ವಯಲಿನ್ ನಲ್ಲಿ ವಿದ್ವಾನ್ ಮೈಸೂರು ವಿ.ಶ್ರೀಕಾಂತ್ ಚೆನ್ನೈ, ಮೃದಂಗದಲ್ಲಿ ವಿದ್ವಾನ್ ಕಾಂಚನ ಈಶ್ವರ ಭಟ್ ಪುತ್ತೂರು, ಘಟಂನಲ್ಲಿ ವಿದ್ವಾನ್ ಉಡುಪಿ ಶ್ರೀಧರ್ ತಿರುವನಂತಪುರ ಸಹಕರಿಸಿದರು. ಕಾರ್ಯಕ್ರಮದ ಅಂಗವಾಗಿ ದಿನಪೂರ್ತಿ ಸಂಗೀತ ಕಾರ್ಯಕ್ರಮ ನಡೆಯಿತು.
ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…
ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…
ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್…
ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…
ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಯಾವುದೇ ರೀತಿ ತೊಂದರೆಯಾಗದಂತೆ ಅಗತ್ಯ ಕ್ರಮ…
ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?. ಈ ಪ್ರಶ್ನೆಗೆ ಹಲವರದು ಹಲವು…