ಮಂಗಳೂರು: ಭಾನುವಾರ ಸಂಜೆ 5.40 ರ ಸುಮಾರಿಗೆ ದುಬೈನಿಂದ ಆಗಮಿಸಿದ ಏರ್ ಇಂಡಿಯಾ ವಿಮಾನ ಮಂಗಳೂರು ವಿಮಾನ ನಿಲ್ದಾಣದಲ್ಲಿ ಇಳಿದ ಬಳಿಕ ಟ್ಯಾಕ್ಸಿ ವೇ ಯಿಂದ ಜಾರಿದ ಘಟನೆ ನಡೆದಿದ್ದು, ಎಲ್ಲಾ ಪ್ರಯಾಣಿಕರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಲಭ್ಯ ಮಾಹಿತಿ ಪ್ರಕಾರ ಕೂದಲೆಳೆಯ ಅಂತರದಿಂದ ಪ್ರಯಾಣಿಕರು ಪಾರಾಗಿದ್ದು ಪೈಲಟ್ ತಕ್ಷಣ ಕ್ರಮದಿಂದ ದೊಡ್ಡ ಅವಘಡವೊಂದು ತಪ್ಪಿದೆ. ವಿಮಾನವು 183 ಪ್ರಯಾಣಿಕರಿದ್ದರು. ಬಳಿಕ ವಿಮಾನವನ್ನು ಸುರಕ್ಷಿತ ಸ್ಥಾನಕ್ಕೆ ತರಲಾಯಿತು. ವಿಮಾನ ನಿಲ್ದಾಣದಲ್ಲಿ ಮುಂದಿನ ಸೂಚನೆ ಬರುವವರೆಗೂ ಎಲ್ಲಾ ವಿಮಾನ ಸಂಚಾರವನ್ನು ನಿಷೇಧಿಸಲಾಗಿದೆ.
ಎಲ್ಲಾ ಪ್ರಯಾಣಿಕರು ಸುರಕ್ಷಿತರಾಗಿದ್ದಾರೆ ಮತ್ತು ವಿಮಾನವನ್ನು ಏರ್ ಇಂಡಿಯಾ ಎಕ್ಸ್‌ಪ್ರೆಸ್ ಎಂಜಿನಿಯರ್‌ಗಳು ಪರಿಶೀಲಿಸುತ್ತಿದ್ದಾರೆ. ಆಂತರಿಕ ತನಿಖೆಗೆ ಆದೇಶಿಸಲಾಗಿದೆ ಎಂದು ವಿಮಾನ ನಿಲ್ದಾಣ ಅಧಿಕಾರಿಗಳು ಪ್ರತಿಕ್ರಿಯೆ ನೀಡಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel