ರಸ್ತೆ ಅಭಿವೃದ್ಧಿಗೆ ಅನುದಾನ ಇದೆ ಎಂದು ತಿಳಿದ ಮೇಲೆ ಕಾಂಗ್ರೆಸ್‍ನಿಂದ ರಾಜಕೀಯ ಪ್ರೇರಿತ ಪ್ರತಿಭಟನೆ

November 23, 2019
9:47 PM

ಸುಳ್ಯ: ಗಡಿ ಪ್ರದೇಶವಾದ ಆಲೆಟ್ಟಿ ಗ್ರಾಮದ ವಿವಿಧ ರಸ್ತೆಗಳ ಅಭಿವೃದ್ಧಿಗಾಗಿ 13.41 ಕೋಟಿ ರೂ ಅನುದಾನ ಮಂಜೂರಾಗಿದೆ. ರಸ್ತೆಗಳಿಗೆ ಅನುದಾನ ಇದೆ ಎಂದು ಗೊತ್ತಿದ್ದರೂ ಕಾಂಗ್ರೆಸ್ ರಾಜಕೀಯ ಪ್ರೇರಿತವಾಗಿ ಪ್ರತಿಭಟನೆ ನಡೆಸಿದ್ದಾರೆ ಎಂದು ಶಾಸಕ ಎಸ್.ಅಂಗಾರ ಹೇಳಿದ್ದಾರೆ.

Advertisement
Advertisement

ಸುಳ್ಯ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ರಸ್ತೆಗಳ ಅಭಿವೃದ್ಧಿಗೆ ಲೋಕೋಪಯೋಗಿ ಇಲಾಖೆಗೆ 12.16 ಕೋಟಿ ಮತ್ತು ಜಿಲ್ಲಾ ಪಂಚಾಯಿತಿ ಇಂಜಿನಿಯರಿಂಗ್ ವಿಭಾಗಕ್ಕೆ 1.25 ಕೋಟಿ ಅನುದಾನ ಮಂಜೂರಾಗಿದೆ ಎಂದು ವಿವರಿಸಿದರು. ಗಾಂಧೀನಗರದಿಂದ ನಾಗಪಟ್ಟಣ ಸೇತುವೆವರೆಗೆ ಕಾಂಕ್ರೀಟೀಕರಣಕ್ಕೆ 20 ಲಕ್ಷ, ನಾಗಪಟ್ಟಣ ಸೇತುವೆಯಿಂದ ನಾರ್ಕೋಡುವರೆಗೆ ರಸ್ತೆ ದುರಸ್ಥಿಗೆ 20 ಲಕ್ಷ ಹೀಗೆ ಒಟ್ಟು 40 ಲಕ್ಷ ರೂ ಮಳೆ ಹಾನಿಯಲ್ಲಿ ಮಂಜೂರಾಗಿದೆ. ಲೋಕೋಪಯೋಗಿ ಇಲಾಖೆಯ ವತಿಯಿಂದ ನಾರ್ಕೋಡು ಬಂದಡ್ಕ ರಸ್ತೆಯಲ್ಲಿ ನಾರ್ಕೋಡುವಿನಿಂದ ಒಂದೂವರೆ ಕಿ.ಮಿ ಬಜೆಟ್ ಅನುದಾನ 75 ಲಕ್ಷದಲ್ಲಿ ಅಭಿವೃದ್ಧಿಯಾಗಲಿದೆ. 1.5 ಕಿ.ಮಿ.ನಿಂದ ಕೇರಳ ಗಡಿ ಕನ್ನಾಡಿತೋಡುವರೆಗೆ 10.50 ಕೋಟಿ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯಡಿಯಲ್ಲಿ ರಸ್ತೆ ಅಭಿವೃದ್ಧಿ ನಡೆಯಲಿದೆ. ಅಲ್ಲದೆ ಬಾರ್ಪಣೆಯಲ್ಲಿ ಸೇತುವೆ ನಿರ್ಮಾಣಕ್ಕೆ 91 ಲಕ್ಷ ರೂ ನಬಾರ್ಡ್ ಯೋಜನೆಯಡಿಯಲ್ಲಿ ಅನುದಾನ ಬಿಡುಗಡೆಯಾಗಿದೆ.

Advertisement

ಸುಳ್ಯ-ಆಲೆಟ್ಟಿ-ಬಡ್ಡಡ್ಕ-ಕೂರ್ನಡ್ಕ ರಸ್ತೆಯನ್ನು ಅಭಿವೃದ್ಧಿಪಡಿಸಲು `ನಮ್ಮ ಗ್ರಾಮ ನಮ್ಮ ರಸ್ತೆ’ ಯೋಜನೆಯಲ್ಲಿ ಪ್ರಸ್ತಾವನೆ ಸಲ್ಲಿಸಲಾಗಿದೆ. ಅಲ್ಲದೆ ಆಲೆಟ್ಟಿ-ಬಡ್ಡಡ್ಕ-ಕೂರ್ನಡ್ಕ ರಸ್ತೆ ಸೇರಿ ತಾಲೂಕಿನ 16 ರಸ್ತೆಗಳನ್ನು ಜಿಲ್ಲಾ ಮುಖ್ಯ ರಸ್ತೆಗಳಾಗಿ ಮೇಲ್ದರ್ಜೆಗೇರಿಸಿ ಲೋಕೋಪಯೋಗಿ ಇಲಾಖೆಗೆ ಹಸ್ತಾಂತರಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಹೇಳಿದರು. ಈ ಹಿಂದೆ ಕಾಂಗ್ರೆಸ್ ಶಾಸಕರಿದ್ದ ಸಂದರ್ಭದಲ್ಲಿ ಆಲೆಟ್ಟಿ ಗ್ರಾಮದ ರಸ್ತೆಗಳ ಪರಿಸ್ಥಿತಿ ಹೇಗಿತ್ತು ಎಂಬುದು ಸಾರ್ವಜನಿಕರಿಗೆ ಗೊತ್ತಿದೆ. ಆಲೆಟ್ಟಿ ಗ್ರಾಮದ ಅಭಿವೃದ್ಧಿಗೆ ಇವರು ಎಷ್ಟು ಅನುದಾನ ತಂದಿದ್ದಾರೆ ಎಂಬುದನ್ನು ಕಾಂಗ್ರೆಸ್‍ನವರು ಸ್ಪಷ್ಟಪಡಿಸಲಿ ಎಂದು ಅವರು ಹೇಳಿದರು. ತಾಲೂಕಿಗೆ ಮಳೆ ಹಾನಿ ಯೋಜನೆಯಲ್ಲಿ 12 ಕೋಟಿ ರೂ ಅನುದಾನ ಬರಲಿದೆ. ಇದನ್ನು ತಾಲೂಕಿನ ವಿವಿಧ ರಸ್ತೆಗಳ ಅಭಿವೃದ್ಧಿಗೆ ಬಳಸಿಕೊಳ್ಳಲಾಗುವುದು ಎಂದು ಅವರು ಹೇಳಿದರು. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಸುಳ್ಯ ತಾಲೂಕಿಗೆ 25 ಕೋಟಿ ವಿಶೇಷ ಅನುದಾನ ಬಂದಿದೆ. ಲೋಕೋಪಯೋಗಿ ಇಲಾಖೆಯ ರಸ್ತೆಗೆ 16 ಕೋಟಿ, ಗ್ರಾಮೀಣ ಭಾಗದ ರಸ್ತೆಗಳಿಗೆ ಏಳು ಕೋಟಿ ಮತ್ತು ನಗರ ಪಂಚಾಯಿತಿಗೆ ಒಂದು ಕೋಟಿ ಅನುದಾನ ಬರಲಿದೆ ಎಂದು ಅವರು ವಿವರಿಸಿದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮಂಡಲ ಸಮಿತಿ ನಿಯೋಜಿತ ಅಧ್ಯಕ್ಷ ಹರೀಶ್ ಕಂಜಿಪಿಲಿ, ಬಿಜೆಪಿ ಮಂಡಲ ಸಮಿತಿ ಪ್ರಧಾನ ಕಾರ್ಯದರ್ಶಿ ಸುಬೋದ್ ಶೆಟ್ಟಿ ಮೇನಾಲ, ಆಲೆಟ್ಟಿ ಗ್ರಾ.ಪಂ.ಅಧ್ಯಕ್ಷ ಹರೀಶ್ ರಂಗತ್ತಮಲೆ, ತಾ.ಪಂ.ಮಾಜಿ ಅಧ್ಯಕ್ಷ ಜಯಪ್ರಕಾಶ್ ಕುಂಚಡ್ಕ, ಆಲೆಟ್ಟಿ ಗ್ರಾ,ಪಂ.ಮಾಜಿ ಅಧ್ಯಕ್ಷ ಧನಂಜಯ ಕುಂಚಡ್ಕ, ಬಿಜೆಪಿ ಗ್ರಾಮ ಸಮಿತಿ ಅಧ್ಯಕ್ಷ ಕರುಣಾಕರ ಹಾಸ್ಪಾರೆ, ಸುದರ್ಶನ ಪಾತಿಕಲ್ಲು ಉಪಸ್ಥಿತರಿದ್ದರು.

Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಏರಿದ ತಾಪಮಾನ : ರಾಜ್ಯದಲ್ಲಿ ಇಂದಿನಿಂದ 5 ದಿನ ಬೀಸಲಿದೆ ಬಿಸಿಗಾಳಿ ಎಚ್ಚರಿಕೆ..!
April 25, 2024
11:01 PM
by: The Rural Mirror ಸುದ್ದಿಜಾಲ
ನೆಲ್ಯಾಡಿ | ವಿಶ್ವವಿದ್ಯಾನಿಲಯ ಕಾಲೇಜು ಶಿಕ್ಷಕ-ರಕ್ಷಕ ಸಂಘದ ಮಹಾಸಭೆ | ನೂತನ ಪದಾಧಿಕಾರಿಗಳ ನೇಮಕ
April 25, 2024
10:12 PM
by: ದ ರೂರಲ್ ಮಿರರ್.ಕಾಂ
ಇತ್ತೀಚಿಗೆ ಮಕ್ಕಳ ಬೆಳವಣಿಗೆ ಕುಂಠಿತವಾಗುತ್ತಿದೆ | ಮಕ್ಕಳ ತೂಕ ಮತ್ತು ಎತ್ತರವನ್ನು ಹೆಚ್ಚಿಸುವ ಆಹಾರಗಳು |
April 25, 2024
3:13 PM
by: The Rural Mirror ಸುದ್ದಿಜಾಲ
ಕೊನೆಗೂ ಗಾಂಧಿ ಕುಡಿಗಳ ಕ್ಷೇತ್ರ ಫಿಕ್ಸ್‌ | ರಾಯ್ ಬರೇಲಿಯಿಂದ ಪ್ರಿಯಾಂಕಾ, ಅಮೇಥಿಯಿಂದ ರಾಹುಲ್ ಸ್ಪರ್ಧೆ ಬಹುತೇಕ ಖಚಿತ |
April 25, 2024
3:00 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror