ಸುಳ್ಯ: ಗಡಿ ಪ್ರದೇಶವಾದ ಆಲೆಟ್ಟಿ ಗ್ರಾಮದ ವಿವಿಧ ರಸ್ತೆಗಳ ಅಭಿವೃದ್ಧಿಗಾಗಿ 13.41 ಕೋಟಿ ರೂ ಅನುದಾನ ಮಂಜೂರಾಗಿದೆ. ರಸ್ತೆಗಳಿಗೆ ಅನುದಾನ ಇದೆ ಎಂದು ಗೊತ್ತಿದ್ದರೂ ಕಾಂಗ್ರೆಸ್ ರಾಜಕೀಯ ಪ್ರೇರಿತವಾಗಿ ಪ್ರತಿಭಟನೆ ನಡೆಸಿದ್ದಾರೆ ಎಂದು ಶಾಸಕ ಎಸ್.ಅಂಗಾರ ಹೇಳಿದ್ದಾರೆ.
ಸುಳ್ಯ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ರಸ್ತೆಗಳ ಅಭಿವೃದ್ಧಿಗೆ ಲೋಕೋಪಯೋಗಿ ಇಲಾಖೆಗೆ 12.16 ಕೋಟಿ ಮತ್ತು ಜಿಲ್ಲಾ ಪಂಚಾಯಿತಿ ಇಂಜಿನಿಯರಿಂಗ್ ವಿಭಾಗಕ್ಕೆ 1.25 ಕೋಟಿ ಅನುದಾನ ಮಂಜೂರಾಗಿದೆ ಎಂದು ವಿವರಿಸಿದರು. ಗಾಂಧೀನಗರದಿಂದ ನಾಗಪಟ್ಟಣ ಸೇತುವೆವರೆಗೆ ಕಾಂಕ್ರೀಟೀಕರಣಕ್ಕೆ 20 ಲಕ್ಷ, ನಾಗಪಟ್ಟಣ ಸೇತುವೆಯಿಂದ ನಾರ್ಕೋಡುವರೆಗೆ ರಸ್ತೆ ದುರಸ್ಥಿಗೆ 20 ಲಕ್ಷ ಹೀಗೆ ಒಟ್ಟು 40 ಲಕ್ಷ ರೂ ಮಳೆ ಹಾನಿಯಲ್ಲಿ ಮಂಜೂರಾಗಿದೆ. ಲೋಕೋಪಯೋಗಿ ಇಲಾಖೆಯ ವತಿಯಿಂದ ನಾರ್ಕೋಡು ಬಂದಡ್ಕ ರಸ್ತೆಯಲ್ಲಿ ನಾರ್ಕೋಡುವಿನಿಂದ ಒಂದೂವರೆ ಕಿ.ಮಿ ಬಜೆಟ್ ಅನುದಾನ 75 ಲಕ್ಷದಲ್ಲಿ ಅಭಿವೃದ್ಧಿಯಾಗಲಿದೆ. 1.5 ಕಿ.ಮಿ.ನಿಂದ ಕೇರಳ ಗಡಿ ಕನ್ನಾಡಿತೋಡುವರೆಗೆ 10.50 ಕೋಟಿ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯಡಿಯಲ್ಲಿ ರಸ್ತೆ ಅಭಿವೃದ್ಧಿ ನಡೆಯಲಿದೆ. ಅಲ್ಲದೆ ಬಾರ್ಪಣೆಯಲ್ಲಿ ಸೇತುವೆ ನಿರ್ಮಾಣಕ್ಕೆ 91 ಲಕ್ಷ ರೂ ನಬಾರ್ಡ್ ಯೋಜನೆಯಡಿಯಲ್ಲಿ ಅನುದಾನ ಬಿಡುಗಡೆಯಾಗಿದೆ.
ಸುಳ್ಯ-ಆಲೆಟ್ಟಿ-ಬಡ್ಡಡ್ಕ-ಕೂರ್ನಡ್ಕ ರಸ್ತೆಯನ್ನು ಅಭಿವೃದ್ಧಿಪಡಿಸಲು `ನಮ್ಮ ಗ್ರಾಮ ನಮ್ಮ ರಸ್ತೆ’ ಯೋಜನೆಯಲ್ಲಿ ಪ್ರಸ್ತಾವನೆ ಸಲ್ಲಿಸಲಾಗಿದೆ. ಅಲ್ಲದೆ ಆಲೆಟ್ಟಿ-ಬಡ್ಡಡ್ಕ-ಕೂರ್ನಡ್ಕ ರಸ್ತೆ ಸೇರಿ ತಾಲೂಕಿನ 16 ರಸ್ತೆಗಳನ್ನು ಜಿಲ್ಲಾ ಮುಖ್ಯ ರಸ್ತೆಗಳಾಗಿ ಮೇಲ್ದರ್ಜೆಗೇರಿಸಿ ಲೋಕೋಪಯೋಗಿ ಇಲಾಖೆಗೆ ಹಸ್ತಾಂತರಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಹೇಳಿದರು. ಈ ಹಿಂದೆ ಕಾಂಗ್ರೆಸ್ ಶಾಸಕರಿದ್ದ ಸಂದರ್ಭದಲ್ಲಿ ಆಲೆಟ್ಟಿ ಗ್ರಾಮದ ರಸ್ತೆಗಳ ಪರಿಸ್ಥಿತಿ ಹೇಗಿತ್ತು ಎಂಬುದು ಸಾರ್ವಜನಿಕರಿಗೆ ಗೊತ್ತಿದೆ. ಆಲೆಟ್ಟಿ ಗ್ರಾಮದ ಅಭಿವೃದ್ಧಿಗೆ ಇವರು ಎಷ್ಟು ಅನುದಾನ ತಂದಿದ್ದಾರೆ ಎಂಬುದನ್ನು ಕಾಂಗ್ರೆಸ್‍ನವರು ಸ್ಪಷ್ಟಪಡಿಸಲಿ ಎಂದು ಅವರು ಹೇಳಿದರು. ತಾಲೂಕಿಗೆ ಮಳೆ ಹಾನಿ ಯೋಜನೆಯಲ್ಲಿ 12 ಕೋಟಿ ರೂ ಅನುದಾನ ಬರಲಿದೆ. ಇದನ್ನು ತಾಲೂಕಿನ ವಿವಿಧ ರಸ್ತೆಗಳ ಅಭಿವೃದ್ಧಿಗೆ ಬಳಸಿಕೊಳ್ಳಲಾಗುವುದು ಎಂದು ಅವರು ಹೇಳಿದರು. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಸುಳ್ಯ ತಾಲೂಕಿಗೆ 25 ಕೋಟಿ ವಿಶೇಷ ಅನುದಾನ ಬಂದಿದೆ. ಲೋಕೋಪಯೋಗಿ ಇಲಾಖೆಯ ರಸ್ತೆಗೆ 16 ಕೋಟಿ, ಗ್ರಾಮೀಣ ಭಾಗದ ರಸ್ತೆಗಳಿಗೆ ಏಳು ಕೋಟಿ ಮತ್ತು ನಗರ ಪಂಚಾಯಿತಿಗೆ ಒಂದು ಕೋಟಿ ಅನುದಾನ ಬರಲಿದೆ ಎಂದು ಅವರು ವಿವರಿಸಿದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮಂಡಲ ಸಮಿತಿ ನಿಯೋಜಿತ ಅಧ್ಯಕ್ಷ ಹರೀಶ್ ಕಂಜಿಪಿಲಿ, ಬಿಜೆಪಿ ಮಂಡಲ ಸಮಿತಿ ಪ್ರಧಾನ ಕಾರ್ಯದರ್ಶಿ ಸುಬೋದ್ ಶೆಟ್ಟಿ ಮೇನಾಲ, ಆಲೆಟ್ಟಿ ಗ್ರಾ.ಪಂ.ಅಧ್ಯಕ್ಷ ಹರೀಶ್ ರಂಗತ್ತಮಲೆ, ತಾ.ಪಂ.ಮಾಜಿ ಅಧ್ಯಕ್ಷ ಜಯಪ್ರಕಾಶ್ ಕುಂಚಡ್ಕ, ಆಲೆಟ್ಟಿ ಗ್ರಾ,ಪಂ.ಮಾಜಿ ಅಧ್ಯಕ್ಷ ಧನಂಜಯ ಕುಂಚಡ್ಕ, ಬಿಜೆಪಿ ಗ್ರಾಮ ಸಮಿತಿ ಅಧ್ಯಕ್ಷ ಕರುಣಾಕರ ಹಾಸ್ಪಾರೆ, ಸುದರ್ಶನ ಪಾತಿಕಲ್ಲು ಉಪಸ್ಥಿತರಿದ್ದರು.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…