ರಸ್ತೆ ದುರಸ್ತಿಗೆ ಕುಂಜಿಲ ಗ್ರಾಮಸ್ಥರ ಆಗ್ರಹ

July 10, 2019
12:00 PM

ಮಡಿಕೇರಿ:  ಕುಂಜಿಲ ಪೈನರೀ ಜುಮಾ ಮಸೀದಿಯ ರಸ್ತೆಯು ದುರಸ್ತಿಗೊಳ್ಳದೆ ಗ್ರಾಮಸ್ಥರು ಸಂಕಷ್ಟದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರಸ್ತೆ ದುರಸ್ತಿಗೆ ಜಿಲ್ಲಾಡಳಿತ ಶೀಘ್ರ ಕ್ರಮ ಕೈಗೊಳ್ಳಬೇಕೆಂದು ಕುಂಜಿಲ ಗ್ರಾಮದ ಪ್ರಮುಖ ಕಾರಂಗೋಡು ಹ್ಯಾರಿಸ್ ಹಾಗೂ ಸ್ಥಳೀಯರು ಒತ್ತಾಯಿಸಿದ್ದಾರೆ.
ಕಳೆದ ಒಂದು ವರ್ಷದಿಂದ ವಾಹನ ಸಂಚಾರ ಸಂಪೂರ್ಣವಾಗಿ ಹದಗೆಟ್ಟಿದ್ದು, ಗ್ರಾಮಸ್ಥರು ಕಕ್ಕಬೆ ರಸ್ತೆಯ ಮೂಲಕ ಸಾಗಿ ಜುಮಾ ಮಸೀದಿಯನ್ನು ತಲುಪಬೇಕಿದೆ.
ಈ ಮಾರ್ಗದ ಸೇತುವೆ ಕೂಡ ಬಿರುಕು ಬಿಟ್ಟಿರುವುದರಿಂದ ಸಂಪರ್ಕ ಕಡಿತಗೊಂಡಿದೆ. ಸಂಬಂಧಿಸಿದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಮಳೆ ಜೋರಾಗುವ ಮೊದಲು ರಸ್ತೆ ದುರಸ್ತಿ ಕಾರ್ಯವನ್ನು ಕೈಗೊಳ್ಳಬೇಕೆಂದು ಒತ್ತಾಯಿಸಿರುವ ಹ್ಯಾರಿಸ್, ಸಕಾಲದಲ್ಲಿ ಕಾಮಗಾರಿ ಕೈಗೊಳ್ಳದಿದ್ದಲ್ಲಿ ಗ್ರಾಮಸ್ಥರ ಸಹಕಾರದೊಂದಿಗೆ ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಮಾರುಕಟ್ಟೆಯಲ್ಲಿ ಬೆಲೆ ಇಳಿಕೆ | ಮಾರ್ಚ್‌ ತಿಂಗಳ ಇಳಿಕೆಗೆ ಹಲವು ಕಾರಣ…
March 10, 2026
1:25 PM
by: ದ ರೂರಲ್ ಮಿರರ್.ಕಾಂ
ಪೂರ್ವ ಮುಂಗಾರು ಸಿಡಿಲು, ಗಾಳಿ ಮಳೆಗೆ ಮುನ್ನೆಚ್ಚರಿಕೆ ವಹಿಸಿ : ವಿಜಯನಗರ ಜಿಲ್ಲಾಧಿಕಾರಿ ಸೂಚನೆ
March 10, 2026
6:48 AM
by: ಮಿರರ್‌ ಡೆಸ್ಕ್
ರಾಜ್ಯದಲ್ಲಿ ಟ್ರಾನ್ಸ್ಫಾರ್ಮರ್ ಕೊರತೆ: ಕೇರಳದಿಂದ ಖರೀದಿಗೆ ಸರ್ಕಾರ ನಿರ್ಧಾರ
March 10, 2026
6:43 AM
by: ದ ರೂರಲ್ ಮಿರರ್.ಕಾಂ
ಭತ್ತದ ಗದ್ದೆಯಿಂದ ಅಡಿಕೆ ತೋಟ | ಮಣ್ಣಿನ ಆರೋಗ್ಯದ ಮೇಲೆ ಪರಿಣಾಮ ಬಿಚ್ಚಿಟ್ಟ ಸಂಶೋಧನೆ
March 9, 2026
10:09 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror