ಮಡಿಕೇರಿ : ನಗರದ ನೂತನ ಖಾಸಗಿ ಬಸ್ ನಿಲ್ದಾಣದಿಂದ ಫೀ.ಮಾ.ಕೆ.ಎಂ. ಕಾರ್ಯಪ್ಪ ಕಾಲೇಜಿಗೆ ತೆರಳುವ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ನಡೆದಾಡಲು ತೊಂದರೆಯಾಗಿದೆ. ಆದ್ದರಿಂದ ಕೂಡಲೇ ರಸ್ತೆಯನ್ನು ದುರಸ್ತಿಗೊಳಿಸುವಂತೆ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಹಳೆ ವಿದ್ಯಾರ್ಥಿಗಳ ಸಂಘ ಆಗ್ರಹಿಸಿದೆ.
ರಸ್ತೆ ತೀರಾ ಗುಂಡಿ ಬಿದ್ದಿರುವುದರಿಂದಾಗಿ ಈ ಭಾಗದಲ್ಲಿ ನಡೆದಾಡುವ ವಿದ್ಯಾರ್ಥಿಗಳ ಸಮವಸ್ತ್ರ ಕೆಸರುಮಯವಾಗುತ್ತಿದೆ. ಪ್ರದಿ ದಿನ ಸಾವಿರಾರು ವಿದ್ಯಾರ್ಥಿಗಳು ಇಲ್ಲಿ ನಡೆದಾಡುತ್ತಾರೆ. ವಾಹನ ಸಂಚಾರರಿಗೂ ತೊಂದರೆಯಾಗಿದೆ. ಆದ್ದರಿಂದ ಕೂಡಲೇ ರಸ್ತೆ ದುರಸ್ತಿಗೊಳಿಸುವಂತೆ ಹಳೆ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷೆ ಡಾ ಪಾರ್ವತಿ ಅಪ್ಪಯ್ಯ ಹಾಗೂ ಪದಾಧಿಕಾರಿಗಳು ಒತ್ತಾಯಿಸಿದ್ದಾರೆ.
ಸೋಮವಾರ ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಸಿ.ವಿ.ಸ್ನೇಹ ಅವರಿಗೆ ಮನವಿ ಸಲ್ಲಿಸುವ ಸಂದರ್ಭ ಹಳೆ ವಿದ್ಯಾರ್ಥಿಗಳ ಸಂಘದ ಪ್ರಧಾನ ಕಾರ್ಯದರ್ಶಿ ಬೊಳ್ಳಜಿರ ಬಿ ಅಯ್ಯಪ್ಪ, ನಿರ್ದೇಶಕ ವಿಘ್ನೇಶ್ ಎಂ. ಭೂತನಕಾಡು ಹಾಜರಿದ್ದರು. ರಸ್ತೆ ದುರಸ್ತಿ ಮಾಡುವಂತೆ ಮಡಿಕೇರಿ ನಗರಸಭೆ ಪೌರಾಯುಕ್ತರಿಗೆ ಸೂಚನೆ ನೀಡಲಾಗುವುದು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಸ್ನೇಹ ಈ ಸಂದರ್ಭ ತಿಳಿಸಿದರು.
https://youtu.be/PgODhBnoUso?si=CtTWIV_6u7GnfVGw
ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…
ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…
ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…
ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…