ಬೆಂಗಳೂರು: ಕರ್ನಾಟಕದಲ್ಲಿ ಕೊರೋನ ಸೋಂಕಿತರ ಸಂಖ್ಯೆಯಲ್ಲಿ ವ್ಯಾಪಕ ಹೆಚ್ಚಳವಾಗುತ್ತಿದೆ. ಮಂಗಳವಾರ ಸಂಜೆಯಿಂದ ಬುಧವಾರ ಸಂಜೆವರೆಗೆ 1,272 ಮಂದಿಗೆ ಕೊರೋನ ವೈರಸ್ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಒಟ್ಟು ಸಂಖ್ಯೆ 16,514ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿಂದು 7 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ 253ಕ್ಕೆ ಏರಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಸೋಂಕು ಖಚಿತಗೊಂಡ ಪ್ರಕರಣಗಳ ಪೈಕಿ ಬೆಂಗಳೂರು ನಗರ 735, ಬಳ್ಳಾರಿ 85, ದಕ್ಷಿಣ ಕನ್ನಡ 84, ಧಾರವಾಡ 35, ಬೆಂಗಳೂರು ಗ್ರಾಮಾಂತರ 29, ವಿಜಯಪುರ, ಹಾಸನದಲ್ಲಿ ತಲಾ 28, ಉತ್ತರ ಕನ್ನಡ 23, ಉಡುಪಿ 22, ಚಾಮರಾಜನಗರ 21, ಬಾಗಲಕೋಟೆ 20, ತುಮಕೂರು 19, ದಾವಣಗೆರೆ 16, ಚಿಕ್ಕಬಳ್ಳಾಪುರ 15, ರಾಮನಗರ, ಕಲಬುರಗಿಯಲ್ಲಿ ತಲಾ 14, ಕೊಪ್ಪಳ 13, ರಾಯಚೂರು, ಚಿತ್ರದುರ್ಗದಲ್ಲಿ ತಲಾ 12, ಯಾದಗಿರಿ, ಬೀದರ್, ಬೆಳಗಾವಿಯಲ್ಲಿ ತಲಾ 8, ಕೊಡಗು 7, ಮಂಡ್ಯ, ಕೋಲಾರದಲ್ಲಿ ತಲಾ 5, ಶಿವಮೊಗ್ಗ 3, ಗದಗ 2, ಚಿಕ್ಕಮಗಳೂರಿನಲ್ಲಿ ಒಂದು ಪ್ರಕರಣ ಪಾಸಿಟಿವ್ ಬಂದಿದೆ.
ಒಟ್ಟಾರೆ ರಾಜ್ಯದಲ್ಲಿ 16,514 ಕೊರೋನ ಸೋಂಕಿತರ ಪೈಕಿ 8063 ಮಂದಿ ಸಂಪೂರ್ಣ ಗುಣಮುಖರಾಗಿದ್ದಾರೆ. ಇದರಲ್ಲಿ ಇಂದು 145 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಉಳಿದಂತೆ ಇದುವರೆಗೆ 253 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದು, 8194 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಕಳೆದ ಒಂಬತ್ತು ತಿಂಗಳಿಗೂ ಹೆಚ್ಚು ಕಾಲ ಸಿಲುಕಿಕೊಂಡಿದ್ದ ಭಾರತೀಯ…
ಆಸ್ತಿಯನ್ನು ತಮ್ಮ ಹೆಸರಿಗೆ ಬರೆಯಿಸಿಕೊಂಡ ನಂತರ, ಪೋಷಕರನ್ನು ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಯಲ್ಲಿ ಬಿಟ್ಟು…
ದೇಶದಲ್ಲಿ 90 ಸಾವಿರ ಸರ್ಕಾರಿ ಶಾಲೆಗಳು ಬಂದ್ ಆಗಿವೆ. ಬಿಹಾರ ಮತ್ತು ಉತ್ತರ…
ಕಲ್ಯಾಣ ಕರ್ನಾಟಕ ಭಾಗದಲ್ಲಿ 1800 ಶಿಕ್ಷಕರು ಸೇರಿದಂತೆ ಒಟ್ಟಾರೆ ರಾಜ್ಯದಲ್ಲಿ 5 ಸಾವಿರ…
ರೈತರು ಸ್ಥಾಪಿಸಿರುವ ರೈತ ಉತ್ಪಾದಕ ಸಂಸ್ಥೆಗಳ ಅಭಿವೃದ್ಧಿಗೆ ರಾಜ್ಯ ಸರಕಾರದಿಂದ ಸಕಲ ಸಹಕಾರ…
21ನೇ ಜಾನುವಾರು ಗಣತಿ ಪೂರ್ಣಗೊಂಡಿದ್ದು, ರಾಜ್ಯದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಪ್ರಥಮ ಸ್ಥಾನ…