ಬೆಂಗಳೂರು: ಕರ್ನಾಟಕದಲ್ಲಿ ಕೊರೋನ ಸೋಂಕಿತರ ಸಂಖ್ಯೆಯಲ್ಲಿ ವ್ಯಾಪಕ ಹೆಚ್ಚಳವಾಗುತ್ತಿದೆ. ಸೋಂಕಿತರು ಸಾವನ್ನಪ್ಪುತ್ತಿರುವ ಪ್ರಕರಣದಲ್ಲೂ ಏರಿಕೆಯಾಗುತ್ತಿದೆ. ಬುಧವಾರ ಸಂಜೆಯಿಂದ ಗುರುವಾರ ಸಂಜೆವರೆಗೆ ಮತ್ತೆ 1,502 ಮಂದಿಗೆ ಕೊರೋನ ವೈರಸ್ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಒಟ್ಟು ಸಂಖ್ಯೆ 18,016 ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಗಳಲ್ಲಿ 19 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ಸೋಂಕು ಖಚಿತಗೊಂಡ ಪ್ರಕರಣಗಳ ಪೈಕಿ ಬೆಂಗಳೂರು ನಗರ 889, ದಕ್ಷಿಣ ಕನ್ನಡ 90, ಮೈಸೂರು 68, ಬಳ್ಳಾರಿ 65, ಧಾರವಾಡ 47, ವಿಜಯಪುರ 39, ರಾಮನಗರ 39, ಕಲಬುರಗಿ 38, ಬೀದರ್ 32, ತುಮಕೂರು 26, ಶಿವಮೊಗ್ಗ 23, ಮಂಡ್ಯ 19, ಉತ್ತರ ಕನ್ನಡ 17, ಹಾಸನ 15, ಉಡುಪಿ 14, ಕೋಲಾರ 12, ರಾಯಚೂರು 11, ಬಾಗಲಕೋಟೆ 10, ದಾವಣಗೆರೆ 8, ಯಾದಗಿರಿ 7, ಬೆಳಗಾವಿ 7, ಕೊಡಗು 6, ಬೆಂಗಳೂರು ಗ್ರಾಮಾಂತರ 5, ಹಾವೇರಿ, ಕೊಪ್ಪಳದಲ್ಲಿ ತಲಾ 4, ಚಿತ್ರದುರ್ಗದಲ್ಲಿ 3, ಗದಗ 2, ಚಿಕ್ಕಮಗಳೂರು ಮತ್ತು ಚಿಕ್ಕಬಳ್ಳಾಪುರದಲ್ಲಿ ತಲಾ 1 ಪ್ರಕರಣ ಪಾಸಿಟಿವ್ ಬಂದಿದೆ.
ಒಟ್ಟಾರೆ ರಾಜ್ಯದಲ್ಲಿ 18,016 ಕೊರೋನ ಸೋಂಕಿತರ ಪೈಕಿ 8,334 ಮಂದಿ ಗುಣಮುಖರಾಗಿದ್ದಾರೆ. ಇದರಲ್ಲಿ ಇಂದು ಒಂದೇ ದಿನ 271 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಉಳಿದಂತೆ ಇದುವರೆಗೆ 272 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದು, 9,406 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
12.07.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…
ಜ್ಯೋತಿಷ್ಯ ಶಾಸ್ತ್ರದಲ್ಲಿ ಕೇತು ಒಂದು ನಿಗೂಢ ಗ್ರಹವಾಗಿದ್ದು, ಆಧ್ಯಾತ್ಮಿಕತೆ, ಕರ್ಮ, ಮತ್ತು ಜೀವನದಲ್ಲಿ…
ಕೋಲಾರ ಜಿಲ್ಲೆಯ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿ ಗ್ರಾಮ ಪಂಚಾಯತಿ ಸೇರಿದಂತೆ ಯಾವುದೇ…
ಹಾವೇರಿ ಜಿಲ್ಲೆಯಲ್ಲಿ ಹರಿಯುವ ವರದಾ ಹಾಗೂ ತುಂಗಭದ್ರಾ ನದಿಗಳಲ್ಲಿ ನೀರಿನ ಮಟ್ಟ ಕ್ರಮೇಣ…
ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗಾಗಿ ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸಿದ್ದು, 23 ಅಸಂಘಟಿತ ವರ್ಗಗಳ…
ಹಾವೇರಿ ಜಿಲ್ಲೆಯಲ್ಲಿ ಪೂರ್ವ ಮುಂಗಾರು ಹಾಗೂ ಮುಂಗಾರು ಮಳೆಯಿಂದಾಗಿ 148.57 ಹೆಕ್ಟೇರ್ ಪ್ರದೇಶದಲ್ಲಿದ್ದ…