ಬೆಂಗಳೂರು: ದೇಶದಾದ್ಯಂತ ಜಾರಿಯಲ್ಲಿದ್ದ ಲಾಕ್’ಡೌನ್ ಸಡಿಲಗೊಂಡ ಬೆನ್ನಲ್ಲೇ ದೇಶದಲ್ಲಿ ಕೊರೋನಾ ಸ್ಫೋಟ ಆರಂಭವಾಗಿದೆ. ಕರ್ನಾಟಕದಲ್ಲಿ ಇಂದು 63 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಒಟ್ಟೂ 1458 ಜನರಿಗೆ ಸೋಂಕು ತಗುಲಿದಂತಾಗಿದೆ.
ಇಂದು ಬೆಂಗಳೂರಿನಲ್ಲಿ 4, ಮಂಡ್ಯದಲ್ಲಿ 8, ಬೀದರ್ ನಲ್ಲಿ 10 , ಕಲಬುರಗಿಯಲ್ಲಿ 7, ಹಾಸನಗದಲ್ಲಿ 21, ಉತ್ತರ ಕನ್ನಡದಲ್ಲಿ 1, ದಕ್ಷಿಣ ಕನ್ನಡದಲ್ಲಿ 1, ತುಮಕೂರಿನಲ್ಲಿ 4, ಉಡುಪಿಯಲ್ಲಿ 6, ಯಾದಗಿರಿಯಲ್ಲಿ ಒಬ್ಬರಿಗೆ ಸೋಂಕು ಪತ್ತೆಯಾಗಿದೆ. ಇವತ್ತು ಬೆಳಕಿಗೆ ಬಂದಿರುವ 63 ಪ್ರಕರಣಗಳಲ್ಲಿ ಹೆಚ್ಚಿನ ಸಂಖ್ಯೆ ಹಾಸನದ್ದೇ ಇದೆ.
ರಾಜ್ಯದಲ್ಲಿ ಇಂದು 10 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟಾರೆ ಡಿಸ್ಚಾರ್ಜ್ ಆದವರ ಪ್ರಮಾಣ 553 ತಲುಪಿದೆ. ಇದರೊಂದಿಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 864 ಇದೆ.
ಇಂದು ಆರೋಗ್ಯ ಇಲಾಖೆ ಹೊಸ ರೀತಿಯಲ್ಲಿ ಹೆಲ್ತ್ ಬುಲಿಟಿನ್ ಬಿಡುಗಡೆ ಮಾಡಿದ್ದು, ಕೊರೆನಾ ಸೋಂಕು ತಗುಲಿದ್ದು ಹೇಗೆ ಎನ್ನುವುದನ್ನು ತಿಳಿಸಿಲ್ಲ.
ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ ಬರೋಬ್ಬರಿ 5,611 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,06,750ಕ್ಕೆ ಏರಿಕೆಯಾಗಿದೆ.
ಇದೇ ವೇಳೆ ಮಹಾಮಾರಿ ವೈರಸ್’ಗೆ ನಿನ್ನೆ ಒಂದೇ ದಿನ 140 ಮಂದಿ ಸಾವನ್ನಪ್ಪಿದ್ದು, ಮೃತಪಟ್ಟವರ ಸಂಖ್ಯೆ ಕೂಡ 3,303ಕ್ಕೆ ಏರಿಕೆಯಾಗಿದೆ. ದೇಶದಾದ್ಯಂತ 42,298 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…