ಬೆಂಗಳೂರು: ರಾಜ್ಯದಲ್ಲಿ ಭಾನುವಾರ ಬೆಳಗ್ಗೆಯವರೆಗೆ ಅಂದರೆ 24 ಗಂಟೆಯಲ್ಲಿ 53 ಮಂದಿಗೆ ಕೊರೊನಾ ಪಾಸಿಟಿವ್ ಕಂಡುಬಂದಿದೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 847ಕ್ಕೆ ಏರಿಕೆಯಾಗಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ರಾಜ್ಯದಲ್ಲಿ ಕೇವಲ ಅರ್ಧ ದಿನದಲ್ಲಿ 53 ಕೊರೋನಾ ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ಇದು ರಾಜ್ಯದಲ್ಲಿ ದಾಖಲಾಗಿರುವ ಅತಿ ಹೆಚ್ಚಿನ ಪ್ರಕರಣವಾಗಿದೆ. ಇಲ್ಲಿಯವರೆಗೆ 32 ಜನರು ಮೃತಪಟ್ಟಿದ್ದು, 405 ಮಂದಿ ಗುಣಮುಖರಾಗಿದ್ದಾರೆ.
ಹಸಿರು ವಲಯ ಶಿವಮೊಗ್ಗದಲ್ಲಿ 8 ಸೋಂಕಿತ ಪ್ರಕರಣಗಳು ದಾಖಲಾಗಿದೆ . ಅಹಮದಾಬಾದ್‌ಗೆ ಭೇಟಿ ನೀಡಿದ್ದ ಜನರಿಗೆ ಶಿವಮೊಗ್ಗದಲ್ಲಿ ಸೋಂಕು ಕಾಣಿಸಿಕೊಂಡಿದೆ.
53 ಪ್ರಕರಣಗಳ ಪೈಕಿ ಬೆಳಗಾವಿ 22, ಶಿವಮೊಗ್ಗ 8, ಬೆಂಗಳೂರು 3, ಉತ್ತರ ಕನ್ನಡದ ಭಟ್ಕಳದಲ್ಲಿ 7, ಕಲಬುರಗಿ 3, ಬಾಗಲಕೋಟೆ 8, ದಾವಣಗೆರೆ 1, ಚಿಕ್ಕಬಳ್ಳಾಪುರ 1 ಕೇಸ್ ದಾಖಲಾಗಿದೆ. ಬೆಳಗಾವಿಯಲ್ಲಿ ಇಂದು ಅತಿ ಹೆಚ್ಚು ಸೋಂಕು ವರದಿಯಾಗಿದ್ದು, ಇವರೆಲ್ಲರು ರಾಜಸ್ಥಾನದ ಅಜಮೀರ್‌ಗೆ ಪ್ರಯಾಣದ ಹಿನ್ನೆಲೆ ಹೊಂದಿದ್ದಾರೆ.
ದೇಶದಲ್ಲಿ ಸೋಂಕಿತರ ಸಂಖ್ಯೆ 62,939ಕ್ಕೆ ಏರಿಕೆಯಾಗಿದೆ. ವೈರಸ್’ಗೆ 2,109 ಮಂದಿ ಇದುವರೆಗೆ ಬಲಿಯಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 3,277 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, 128 ಮಂದಿ ಬಲಿಯಾಗಿದ್ದಾರೆ. ದೇಶದಲ್ಲೇ ಅತೀ ಹೆಚ್ಚು ಸೋಂಕಿತರು ಕಂಡು ಬಂದ ಮಹಾರಾಷ್ಟ್ರ, ತಮಿಳುನಾಡು, ಗುಜರಾತ್ ನಲ್ಲಿ ಶನಿವಾರವೂ ಹೆಚ್ಚಿನ ಪ್ರ್ಕರಣಗಳು ವರದಿಯಾಗಿದೆ.
ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…
ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್ ಫಾರ್ಕಾಸ್ಟ್ ಅಂದರೆ ಯಾವ…
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯ ಅನ್ವಯ, ಉತ್ತರ ಕನ್ನಡ…
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…