ಪುತ್ತೂರು: ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯದಲ್ಲಿ ದ್ವಿತೀಯ ಸ್ಥಾನ ಪಡೆದ ವಿಟ್ಲ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾಥಿನಿ ಚಿನ್ಮಯಿ ಅವರನ್ನು ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿ ವತಿಯಿಂದ ಅಭಿನಂದಿಸಲಾಯಿತು.
ಕಾಲೇಜಿನ ಆಡಳಿತ ಮಂಡಳಿಯ ಸದಸ್ಯ ರವಿ ಮುಂಗ್ಲಿಮನೆ ಚಿನ್ಮಯಿ ಅವರನ್ನು ಅಭಿನಂದಿಸಿದರು. ಅಭಿನಂದನೆಯನ್ನು ಸ್ವೀಕರಿಸಿ ಮಾತನಾಡಿದ ಚಿನ್ಮಯಿ “ತಮ್ಮ ಪಿಯುಸಿ ಶಿಕ್ಷಣವನ್ನು ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಮುಂದುವರಿಸಿ ವಿಜ್ಞಾನ ಕ್ಷೇತ್ರದಲ್ಲಿ ಕಂಪ್ಯೂಟರ್ ಸೈಯನ್ಸ್ ವಿಷಯವನ್ನು ಆಯ್ಕೆಮಾಡಿ ಪಿಎಚ್‍ಡಿ ಮಾಡಬೇಕೆಂಬ ಗುರಿಯನ್ನು ಹೊಂದಿದ್ದೇನೆ. ಆ ಬಳಿಕ ಉಪನ್ಯಾಸಕ ವೃತ್ತಿಗೆ ಬರಬೇಕೆಂಬ ಕನಸನ್ನು ಹೊಂದಿದ್ದೇನೆ” ಎಂದು ಹೇಳಿದರು.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ| ಸಿ ಕೆ. ಮಂಜುನಾಥ್, ಚಿನ್ಮಯಿ ತಂದೆ ರಾಜ್ ನಾರಾಯಣ ಮತ್ತು ತಾಯಿ ಗೀತಾ ಸೇರಿದಂತೆ ಹಲವಾರು ಮಂದಿ ಉಪಸ್ಥಿತರಿದ್ದರು.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel