ಮಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಸಂಜೆಯ ವೇಳೆಗೆ 3 ಕ್ಕೆ ತಲಪಿದೆ. ಕಳೆದ ಹಲವು ದಿನಗಳ ಬಳಿಕ ಕಡಿಮೆ ಪ್ರಮಾಣದಲ್ಲಿ ಕೊರೊನಾ ಪಾಸಿಟಿವ್ ಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 1 ಹಾಗೂ ಕಲಬುರಗಿಯಲ್ಲಿ ಎರಡು ಪ್ರಕರಣ ವರದಿಯಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 503ಕ್ಕೆ ಏರಿಕೆಯಾಗಿದೆ.
ಈ ನಡುವೆ ಬೆಂಗಳೂರು ನಗರದಲ್ಲಿ ಭಾನುವಾರ 45 ವರ್ಷದ ಗರ್ಭಿಣಿ ಮಹಿಳೆಯೊಬ್ಬರು ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸಾವಿನ ಸಂಖ್ಯೆ 19ಕ್ಕೆ ಏರಿಕೆಯಾಗಿದೆ.
ಉಡುಪಿಯಲ್ಲಿ ಭಾನುವಾರವೂ ಕೊರೊನಾ ವೈರಸ್ ನೆಗೆಟಿವ್ ವರದಿ ಬಂದಿದೆ. ಕಳೆದ ಹಲವು ದಿನಗಳಿಂದ ಉಡುಪಿಯಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳು ಕಂಡುಬಂದಿಲ್ಲ.
ಕಾಸರಗೋಡು ಜಿಲ್ಲೆಯಲ್ಲಿ ಭಾನುವಾರವೂ ಕೂಡಾ ಯಾವುದೇ ಕೊರೊನಾ ಪಾಸಿಟಿವ್ ಪ್ರಕರಣಗಳು ಕಂಡುಬಂದಿಲ್ಲ. ಓರ್ವ ಸೋಂಕಿತ ವ್ಯಕ್ತಿ ಗುಣಮುಖರಾಗಿದ್ದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಕೇರಳದಲ್ಲಿ 11 ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ.
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.