ಬೆಂಗಳೂರು: ರಾಜ್ಯದಲ್ಲಿ ಸೋಮವಾರ 9 ಹೊಸ ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 512ಕ್ಕೆ ಏರಿಕೆ ಆಗಿದೆ. ಇದುವರೆಗೆ 193 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ. ಈ ನಡುವೆ ರಕ್ತದೊತ್ತಡ, ಕಿಡ್ನಿ ವೈಫಲ್ಯದ ಹಿನ್ನೆಲೆಯಲ್ಲಿ ಡಯಾಲಿಸಿಸ್ ಚಿಕಿತ್ಸೆ ಪಡೆಯುತ್ತಿದ್ದ 50 ವರ್ಷದ ಬೆಂಗಳೂರಿನ ವ್ಯಕ್ತಿಯೊಬ್ಬರು ಇಂದು ನಿಧನರಾಗಿದ್ದಾರೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ನಲ್ಲಿ ನೀಡಿರುವ ಮಾಹಿತಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2, ವಿಜಯಪುರ ಜಿಲ್ಲೆಯಲ್ಲಿ 2, ಮಂಡ್ಯ ಜಿಲ್ಲೆಯಲ್ಲಿ 2, ಬಾಗಲಕೋಟೆಯಲ್ಲಿ 2 ಹಾಗೂ ಬೆಂಗಳೂರು ನಗರ ಜಿಲ್ಲೆಯಲ್ಲಿ 1 ಪ್ರಕರಣ ಸೋಮವಾರ ಪತ್ತೆಯಾಗಿವೆ.
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.