ಬೆಂಗಳೂರು: ರಾಜ್ಯದಲ್ಲಿ ಶುಕ್ರವಾರ ಮತ್ತೆ 18 ಮಂದಿಯಲ್ಲಿ ಹೊಸದಾಗಿ ಕೊರೊನಾ ವೈರಸ್ ಪತ್ತೆಯಾಗಿದೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 463ಕ್ಕೆ ಏರಿಕೆಯಾಗಿದೆ. 18 ಜನರು ಸೋಂಕಿನಿಂದ ಮೃತಪಟ್ಟಿದ್ದು, 150 ಜನರು ಗುಣಮುಖರಾಗಿದ್ದಾರೆ.
ಇಂದು ಬೆಂಗಳೂರು ನಗರದ 11 ಮಂದಿಗೆ ಕೊರೊನಾ ವೈರಸ್ ಪತ್ತೆಯಾಗಿದೆ. ಇದರಲ್ಲಿ ಬೆಂಗಳೂರಿನ ಪಾದರಾಯನಪುರದಲ್ಲಿ ಇತ್ತೀಚಿಗೆ ಗಲಭೆ ನಡೆಸಿದ್ದ 5 ಜನರಲ್ಲಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಜೊತೆಗೆ, ಹೊಂಗಸಂದ್ರದ ಬಿಹಾರ ಮೂಲದ ಕಾರ್ಮಿಕನ ಸಂಪರ್ಕದಲ್ಲಿದ್ದ 5 ಜನರಲ್ಲಿ ಸೋಂಕು ಪತ್ತೆಯಾಗಿದೆ. ಅವರಿಗೆ ಬೆಂಗಳೂರಿನ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಬೆಳಗಾವಿ ರಾಯಭಾಗದ 10 ವರ್ಷದ ಬಾಲಕಿ ಹಾಗೂ 15 ವರ್ಷದ ಬಾಲಕ , ಚಿಕ್ಕಬಳ್ಳಾಪುರದ 39 ವರ್ಷದ ವ್ಯಕ್ತಿ, ಬಾಗಲಕೋಟೆ ಮುಧೋಳದ 28 ಹಾಗೂ ಜಮಖಂಡಿಯ 46 ವರ್ಷದ ಗಂಡು, ವಿಜಯಪುರದ 17 ವರ್ಷದ ಯುವಕನಲ್ಲಿ ಸೋಂಕು ಕಾಣಿಸಿಕೊಂಡಿದೆ ಎಂದು ಆರೋಗ್ಯ ಇಲಾಖೆಯ ಪ್ರಕಟಣೆ ತಿಳಿಸಿದೆ.
ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಹಾಗೂ ಸಿಬಂದಿ ವರ್ಗದವರ ಜಂಟಿ…
ನವೆಂಬರ್ 9 ಅಥವಾ 10 ರಿಂದ ದಕ್ಷಿಣ ಕರ್ನಾಟಕದಲ್ಲಿ ಹಿಂಗಾರು ಮಳೆ ಮತ್ತೆ…
ಸಮಸ್ತ ಕನ್ನಡಿಗರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು.
ಗ್ರಾಮೀಣ ಮಹಿಳೆಯರು ಸರ್ಕಾರದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಅರಣ್ಯ, ಪರಿಸರ ಸಚಿವ ಈಶ್ವರ ಬಿ.ಖಂಡ್ರೆ…
ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ 2024025 ನೇ ಸಾಲಿನಲ್ಲಿ ಎಫ್ಎಕ್ಯೂ ಗುಣಮಟ್ಟದ…
ದೀಪಾವಳಿ ಅಂಗವಾಗಿ ಚಿಕ್ಕಮಗಳೂರು ಜಿಲ್ಲೆಯ ಬಿಂಡಿಗ ದೇವಿರಮ್ಮ ಬೆಟ್ಟಕ್ಕೆ ಸಾವಿರಾರು ಭಕ್ತರು ಆಗಮಿಸಿ,…