ಬೆಂಗಳೂರು: ರಾಜ್ಯದಲ್ಲಿ ಮತ್ತೆ 9 ಮಂದಿಯಲ್ಲಿ ಶನಿವಾರ ಹೊಸದಾಗಿ ಸೋಂಕು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 598ಕ್ಕೆ ತಲುಪಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ಈ ನಡುವೆ 3 ಮಂದಿ ಕೊರೊನಾಕ್ಕೆ ಬಲಿಯಾಗಿದ್ದು ಈ ಮೂಲಕ ಸಾವಿನ ಸಂಖ್ಯೆ 25ಕ್ಕೆ ಏರಿಕೆಯಾಗಿದೆ.
Advertisement
ಶನಿವಾರ ಮಧ್ಯಾಹ್ನದ ಹೆಲ್ತ್ ಬುಲೆಟಿನ್ ನಲ್ಲಿ ಮಾಹಿತಿ ನೀಡಿರುವ ಆರೋಗ್ಯ ಇಲಾಖೆ ದಾವಣಗೆರೆಯ 69 ವರ್ಷದ ವ್ಯಕ್ತಿ, ಬೀದರ್ ನ 82 ವರ್ಷದ ವ್ಯಕ್ತಿ ಹಾಗೂ ಬೆಂಗಳೂರು ಗ್ರಾಮಂತರಕ್ಕೆ ಸೇರಿದ 63 ವರ್ಷದ ವ್ಯಕ್ತಿ ಮಹಾಮಾರಿಗೆ ಬಲಿಯಾಗಿದ್ದಾರೆಂದು ತಿಳಿಸಿದೆ.
Advertisement
ದೇಶದಾದ್ಯಂತ 37,257 ಜನರಿಗೆ ಕೊರೊನಾ ಸೋಂಕು ತಗುಲಿದ್ದು, 1,223 ಜನರು ಸಾವನ್ನಪ್ಪಿದ್ದಾರೆ. ಸೋಂಕಿತರ ಪೈಕಿ 10,007 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಮಹಾರಾಷ್ಟ್ರ, ದೆಹಲಿ, ಪಶ್ಚಿಮ ಬಂಗಾಳ, ತಮಿಳುನಾಡು ಮುಂತಾದ ರಾಜ್ಯಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಏರುತ್ತಲೇ ಇದೆ.
ವಿಶ್ವದಲ್ಲಿ ಅತಿಹೆಚ್ಚು ಕೊರೋನಾ ಸಂಕಷ್ಟಕ್ಕೆ ಈಡಾಗಿರುವ ದೇಶವಾದ ಅಮೆರಿಕದಲ್ಲಿ ಸಾವಿನ ಸಂಖ್ಯೆ 65,776ಕ್ಕೆ ಏರಿಕೆಯಾಗಿದೆ. ಅಮೆರಿಕದಲ್ಲಿ 11.31 ಲಕ್ಷ ಜನರು ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ವಿಶ್ವಾದ್ಯಂತ 34.1 ಲಕ್ಷ ಜನರಿಗೆ ಕೊರೋನಾ ಸೋಂಕು ತಗುಲಿದ್ದು, 2.39 ಲಕ್ಷ ಜನರು ಸಾವನ್ನಪ್ಪಿದ್ದಾರೆ.
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement