ಬೆಂಗಳೂರು : ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿಯು ಐತಿಹಾಸಿಕ 24 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿ ಗೆಲುವಿನತ್ತ ದಾಪುಗಾಲಿಟ್ಟಿದೆ. ಈ ಗೆಲುವಿಗೆ ರಾಜ್ಯ ಬಿಜೆಪಿ ಅಧ್ಯಕ್ಷ ಯಡಿಯೂರಪ್ಪ ರಾಜ್ಯದ ಜನರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ರಾಷ್ಟ್ರ ರಾಜಕಾರಣದ ಭಾರಿ ನಾಯಕರೇ ಈ ಚುನಾವಣೆಯಲ್ಲಿ ಸೋತಿರುವುದು ರಾಜ್ಯದ ಜನರ ಮನದ ಇಂಗಿತವನ್ನು ಬಹಿರಂಗಗೊಳಿಸಿದೆ ಎಂದು ಹೇಳಿದ್ದಾರೆ. ಮಾಜಿ ಪ್ರಧಾನಿ ದೇವೇಗೌಡ, ಲೋಕಸಭೆ ವಿಪಕ್ಷ ಮುಖಂಡ ಮಲ್ಲಿಕಾರ್ಜುನ ಖರ್ಗೆ, ಮಾಜಿ ಸಿಎಂ ವೀರಪ್ಪ ಮೊಯ್ಲಿ, ಏಳು ಬಾರಿ ಸಂಸದ ಕೆ.ಎಚ್.ಮುನಿಯಪ್ಪ ಸೇರಿದಂತೆ ಪ್ರಮುಖರು ಸೋಲು ಕಂಡಿದ್ದಾರೆ. ಹೀಗಾಗಿ ನೈತಿಕ ಹೊಣೆಹೊತ್ತು ಮೈತ್ರಿ ಸರಕಾರ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel