ಬೆಂಗಳೂರು: ಕೊರೊನಾ ವೈರಸ್ ತಡೆಯುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ರಾಜ್ಯದ ಸಹಕಾರಿ ಸಂಘ ಸಂಸ್ಥೆಗಳ ವತಿಯಿಂದ ಒಟ್ಟಾಗಿ 47.15 ಕೋಟಿ ರೂಪಾಯಿ ದೇಣಿಗೆಯನ್ನು ನೀಡಲಾಗಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ದೇಣಿಗೆಯನ್ನು ಸಹಕಾರಿ ಸಚಿವರ ಮೂಲಕ ನೀಡಲಾಯಿತು.
ಮಂಗಳವಾರ ದಕ್ಷಿಣ ಕನ್ನಡ ಜಿಲ್ಲಾಸಹಕಾರಿ ಹಾಲು ಉತ್ಪಾದಕರ ಸಹಕಾರಿ ಸಂಘಗಳ ಒಕ್ಕೂಟದಿಂದ 50 ಲಕ್ಷ , ಶಿರಸಿ ಎಪಿಎಂಸಿಯಿಂದ 50 ಲಕ್ಷ, ಕ್ಯಾಂಪ್ಕೋ ಸಂಸ್ಥೆಯಿಮದ 25 ಲಕ್ಷ , ಎಟಿ $ಎಸ್ ಇಂಡಿಯಾ ಪ್ರೈ ಲಿ ವತಿಯಿಂದ 20 ಲಕ್ಷ, ಶಿರಸಿಯ ತೋಟಗಾರ್ಸ್ ಸಂಸ್ಥೆಯಿಮದ 10 ಲಕ್ಷ ಸೇರಿದಂತೆ ವಿವಿಧ ಸಹಕಾರಿ ಸಂಘ ಸಂಸ್ಥೆಗಳು ದೇಣಿಗೆ ನೀಡಿದ್ದು ಪುತ್ತೂರಿನ ಕೋ ಆಪರೇಟಿವ್ ಟೌನ್ ಬ್ಯಾಂಕ್ ವತಿಯಿಂದ 75 ಸಾವಿರ ದೇಣಿಗೆ ನೀಡಲಾಗಿದೆ. ಹೀಗಾಗಿ ಮಂಗಳವಾರದಂದು ಒಟ್ಟಾಗಿ 2.15 ಕೊಟಿ ರೂಪಾಯಿ ದೇಣಿಗೆ ಸಹಕಾರಿ ಸಂಘಸಂಸ್ಥೆಗಳ ವತಿಯಿಂದ ನೀಡಲಾಗಿದೆ.
ಈ ಸಂದರ್ಭ ಸಹಕಾರಿ ಸಚಿವ ಎಸ್ ಟಿ ಸೋಮಶೇಖರ್, ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್, ಪುತ್ತೂರು ಶಾಸಕ ಸಂಜೀವ ಮಠಂದೂರು, ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ, ದಕ್ಷಿಣ ಕನ್ನಡ ಜಿಲ್ಲಾಸಹಕಾರಿ ಹಾಲು ಉತ್ಪಾದಕರ ಸಹಕಾರಿ ಸಂಘಗಳ ಒಕ್ಕೂಟದ ಅಧ್ಯಕ್ಷ ರವಿರಾಜ ಹೆಗ್ಡೆ ಉಪಸ್ಥಿತರಿದ್ದರು.
ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್…
ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…
ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಯಾವುದೇ ರೀತಿ ತೊಂದರೆಯಾಗದಂತೆ ಅಗತ್ಯ ಕ್ರಮ…
ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?. ಈ ಪ್ರಶ್ನೆಗೆ ಹಲವರದು ಹಲವು…
ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಶಾಲಾ ಮಕ್ಕಳಿಗೆ ಚೆಸ್ ಆಟವನ್ನು ಪರಿಚಯಿಸುವ “ಚೆಸ್…
ಅಡಿಕೆ ಬೆಳೆಗಾರ ಇಂದು ಕೇವಲ ಬೆಳೆಗಾರನಲ್ಲ. ಅವನು ಹವಾಮಾನ ಬದಲಾವಣೆ, ರೋಗದ ಸಮಸ್ಯೆ,…