ಉಜಿರೆ: ಮನದಲ್ಲಿ ಮೂಡಿದ ಯೋಚನೆಗಳಿಗೆ, ಯೋಜನೆಗಳಿಗೆ ಮೂರ್ತರೂಪ ನೀಡಿ ಪ್ರಾಯೋಗಿಕವಾಗಿ ಪರೀಕ್ಷೆಗೊಳಪಡಿಸಿ ತಜ್ಞರಿಂದ ಅರ್ಹತೆ ಮತ್ತು ಬಳಕೆ ಬಗ್ಗೆ ಅಧಿಕೃತ ಪ್ರಮಾಣಪತ್ರ ಪಡೆದಾಗ ಮಾತ್ರ ತಯಾರಿಸಿದ ಮಾದರಿಗಳು ಸಮಾಜಕ್ಕೆ ಉಪಯುಕ್ತವಾಗುತ್ತವೆ ಎಂದು ಬೆಂಗಳೂರಿನ ಭಾರತೀಯ ವಿಜ್ಞಾನ ಮಂದಿರದ ಪ್ರಾಧ್ಯಾಪಕ ಡಾ. ಎನ್. ಎಸ್. ದಿನೇಶ್ ಹೇಳಿದರು.
ಅವರು ಉಜಿರೆಯ ಎಸ್.ಡಿ.ಎಂ. ಎಂಜಿನಿಯರಿಂಗ್ ಕಾಲೇಜಿನಲ್ಲಿ “ಸಂಶೋಧನೆ ಮಾಡಿ, ಅನುಭವಿಸಿ” ಎಂಬ ಧ್ಯೇಯ ವಾಕ್ಯದೊಂದಿಗೆ ಆಯೋಜಿಸಿದ ರಾಜ್ಯಮಟ್ಟದ ವಿಜ್ಞಾನ ಮೇಳವನ್ನು ಶನಿವಾರ ಉದ್ಘಾಟಿಸಿ ಮಾತನಾಡಿದರು. ಯುವಜನತೆ ದೇಶದ ಅಮೂಲ್ಯ ಮಾನವ ಸಂಪನ್ಮೂಲವಾಗಿದ್ದು, ಹೊಸ ಚಿಂತನೆಗಳೊಂದಿಗೆ ಸಮಾಜಕ್ಕೆ ಹಾಗೂ ದೇಶಕ್ಕೆ ಉಪಯುಕ್ತವಾದ ಸಂಶೋಧನೆಗಳನ್ನು ನಡೆಸಬೇಕು. ಸಾಮಾನ್ಯವಾಗಿ ವಿಜ್ಞಾನ, ವೈದ್ಯಕೀಯ ಹಾಗೂ ತಂತ್ರಜ್ಞಾನ ಕ್ಷೇತ್ರದಲ್ಲಿ ನಮಗೆ ಬೇಕಾದ ಉಪಕರಣಗಳನ್ನು ನಾವು ವಿದೇಶಗಳಿಂದ ತರಿಸುತ್ತೇವೆ. ನಮ್ಮ ವಿಶಿಷ್ಟ ಯೋಚನೆ, ಯೋಜನೆಗಳಿಂದ ನಮಗೆ ಬೇಕಾದ ಎಲ್ಲಾ ಯಂತ್ರೋಪಕರಣಗಳನ್ನು ನಾವೇ ತಯಾರಿಸಿ ಸ್ವಾವಲಂಬಿಗಳಾಗಬೇಕು ಎಂದು ಅವರು ಸಲಹೆ ನೀಡಿದರು. ಮನದಲ್ಲಿ ಮೂಡಿದ ಕಲ್ಪನೆಗೆ ನಾವು ಮೂರ್ತರೂಪ ನೀಡಿ, ಸಂಶೋಧನೆ ಹಾಗೂ ವಿಶ್ಲೇಷಣೆ ನಡೆಸಿ, ಪ್ರಾಯೋಗಿಕವಾಗಿ ಅದರ ಬಳಕೆ ಮತ್ತು ಉಪಯುಕ್ತತೆ ಬಗ್ಗೆ ತಜ್ಞರಿಂದ ಅಧಿಕೃತ ಪ್ರಮಾಣ ಪತ್ರ ಪಡೆದು ನಂತರ ಅದರ ಉತ್ಪಾದನೆಗೆ ನಾವು ಸಜ್ಜಾಗಬೇಕು. ಈ ಹಂತದಲ್ಲಿ ನಾವು ಅನೇಕ ಸಮಸ್ಯೆಗಳನ್ನು, ಸವಾಲುಗಳನ್ನು ಎದುರಿಸಬೇಕಾಗುತ್ತದೆ. ನಮ್ಮ ಕಲ್ಪನೆಗೂ, ವಾಸ್ತವಕ್ಕೂ ಅಜಗಜಾಂತರ ವ್ಯತ್ಯಾಸವಿರುತ್ತದೆ. ಎಲ್ಲಾ ಕ್ಷೇತ್ರಗಳಲ್ಲಿ ನಮಗೆ ಬೇಕಾದ ಉಪಕರಣಗಳನ್ನು, ಉತ್ಪನ್ನಗಳನ್ನು ನಾವೇ ತಯಾರಿಸಿ ಸ್ವಾವಲಂಬನೆ ಸಾಧಿಸಬೇಕು. ಇದಕ್ಕಾಗಿ ವಿದೇಶಗಳ ಪರಾವಲಂಬನೆ ಸಲ್ಲದು ಎಂದು ಅವರು ಸಲಹೆ ನೀಡಿದರು. ಎಂಜಿನಿಯರಿಂಗ್ ಕಾಲೇಜುಗಳಲ್ಲಿ ವಿವಿಧ ವಿಭಾಗಗಳು ಸಮನ್ವಯತೆಯಿಂದ ಸಂಘಟಿತರಾಗಿ ಕಾರ್ಯನಿರ್ವಹಿಸಬೇಕು. ವಿವಿಧ ವಿಭಾಗಗಳ ಮಧ್ಯೆ ಬೇಧ, ಭಿನ್ನಾಭಿಪ್ರಾಯ ಸಲ್ಲದು ಎಂದು ಅವರು ಕಿವಿಮಾತು ಹೇಳಿದರು.
ಎಸ್.ಡಿ.ಎಂ. ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ.ಅಶೋಕ್‍ಕುಮಾರ್. ಟಿ ಸ್ವಾಗತಿಸಿದರು. ವಿಜ್ಞಾನ ಮೇಳದ ಸಂಯೋಜಕಡಾ. ಶಂಸುದ್ದೀನ್ ಉಪಸ್ಥಿತರಿದ್ದರು.
ಡಾ. ರಜತಾ.ಪಿ. ಧನ್ಯವಾದವಿತ್ತರು. ಕೇವಲ್ ಎಂ. ಜೈನ್ ಕಾರ್ಯಕ್ರಮ ನಿರ್ವಹಿಸಿದರು.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…