ಸುಳ್ಯ: ದ.ಕ. ಜಿಲ್ಲಾ ಲಗೋರಿ ಅಸೋಸಿಯೇಶನ್ ಮತ್ತು ಸಂಘಟನಾ ಸಮಿತಿಯ ವತಿಯಿಂದ ರಾಜ್ಯಮಟ್ಟದ ಹೊನಲು ಬೆಳಕಿನ ಲಗೋರಿ ಪಂದ್ಯಾಟ ಸುಳ್ಯದ ಸರ್ಕಾರಿ ಪ.ಪೂ. ಕಾಲೇಜಿನ ಕೆಳಗಿನ ಮೈದಾನದಲ್ಲಿ ಆರಂಭವಾಗಿದೆ.
ಶಾಸಕ ಎಸ್.ಅಂಗಾರ ಪಂದ್ಯಾಟವನ್ನು ಉದ್ಘಾಟಿಸಿದರು. ಸಂಘಟನಾ ಸಮಿತಿಯ ಗೌರವಾಧ್ಯಕ್ಷ ಸವಣೂರು ಸೀತಾರಾಮ ರೈ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮಂಗಳೂರು ವಿಶ್ವ ವಿದ್ಯಾನಿಲಯದ ದೈಹಿಕ ಶಿಕ್ಷಣ ನಿರ್ದೇಶಕ ಡಾ. ಕಿಶೋರ್ ಕುಮಾರ್, ಸುಳ್ಯ ತಾಲೂಕು ಕಬ್ಬಡ್ಡಿ ಅಸೋಸಿಯೇಶನ್ ಅಧ್ಯಕ್ಷ ಎನ್.ಎ.ರಾಮಚಂದ್ರ, ಸುಳ್ಯ ತಾಲೂಕು ವಾಲಿಬಾಲ್ ಅಸೋಸಿಯೇಶನ್‍ನ ಅಧ್ಯಕ್ಷ ಎಸ್. ಸಂಶುದ್ದೀನ್, ವಿದ್ಯಾರಶ್ಮಿ ವಿದ್ಯಾಲಯದ ಪ್ರಾಂಶುಪಾಲ ಪ್ರೋ. ಸೀತಾರಾಮ ಕೇವಳ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಮಾಜಿ ಅಧ್ಯಕ್ಷ ಕೇನ್ಯ ರವೀಂದ್ರನಾಥ ಶೆಟ್ಟಿ, ರಾಜ್ಯ ಅರೆಭಾಷೆ ಅಕಾಡೆಮಿಯ ಅಧ್ಯಕ್ಷ ಪಿ.ಸಿ.ಜಯರಾಮ, ಚೆನ್ನಕೇಶವ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಡಾ.ಹರಪ್ರಸಾದ್ ತುದಿಯಡ್ಕ, ದ.ಕ.ಜಿಲ್ಲಾ ಜೇನು ವ್ಯವಸಾಯಗಾರರ ಸಂಘದ ಅಧ್ಯಕ್ಷ ಚಂದ್ರ ಕೋಲ್ಚಾರ್, ಕೆ.ವಿ.ಜಿ ಇಂಜಿನಿಯರಿಂಗ್ ಕಾಲೇಜು ಪ್ರಾಂಶುಪಾಲ ಡಾ.ಎನ್.ಎ.ಜ್ಞಾನೇಶ್, ದ.ಕ. ಜಿಲ್ಲಾ ಲಗೋರಿ ಅಸೋಸಿಯೇಶನ್‍ನ ಪ್ರಧಾನ ಕಾರ್ಯದರ್ಶಿ ದೊಡ್ಡಣ್ಣ ಬರೆಮೇಲು, ಉಪಾಧ್ಯಕ್ಷ ಬಿ.ಕೆ.ಮಾಧವ, ಸಂಘಟನಾ ಸಮಿತಿಯ ಅಧ್ಯಕ್ಷ ದೀಪಕ್ ಕುತ್ತಮೊಟ್ಟೆ, ಪ್ರಧಾನ ಕಾರ್ಯದರ್ಶಿ ಪಿ.ಎಸ್.ಗಂಗಾಧರ, ಸಂಯೋಜಕ ದಿನೇಶ್ ಮಡಪ್ಪಾಡಿ, ಸಂತೋಷ್ ಮಡ್ತಿಲ, ಶಿವರಾಮ ಏನೆಕಲ್ಲು ಮತ್ತಿತರರು ಉಪಸ್ಥಿತರಿದ್ದರು.
ಉದ್ಘಾಟನೆಗೆ ಮುನ್ನ ಮೆರವಣಿಗೆ ನಡೆಯಿತು. ಎರಡು ದಿನಗಳ ಪಂದ್ಯಾಟಗಳಲ್ಲಿ ಒಟ್ಟು 16 ತಂಡಗಳು ಭಾಗವಹಿಸುತ್ತಿವೆ.
ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಬಾಧಿತ ಪ್ರದೇಶಗಳಿಗೆ ತೆರಳಿ ಪರಿಹಾರ…
ಪುಣೆ ಮೂಲದ ಭಾರತೀಯ ಉಷ್ಣ ವಲಯದ ಹವಾಮಾನ ಸಂಸ್ಥೆ ಅಭಿವೃದ್ಧಿ ಪಡಿಸಿದ ಭಾರತ್…
ಕೇಂದ್ರ ಸರ್ಕಾರದ ಕೃಷಿ ಮಂತ್ರಾಲಯದ ವತಿಯಿಂದ ದೇಶಾದ್ಯಂತ ನಾಳೆಯಿಂದ ವಿಕಸಿತ ಕೃಷಿ ಸಂಕಲ್ಪ…
ರೈತರು ಬೆಳೆದ ಬೆಳೆಗಳಿಗೆ ಉತ್ತಮ ಬೆಲೆ ದೊರಕಿಸುವ ನಿಟ್ಟಿನಲ್ಲಿ ಭತ್ತ, ಜೋಳ, ರಾಗಿ…
ಭ್ರಷ್ಟಾಚಾರ ಕ್ಯಾನ್ಸರ್ ಗಿಂತಲೂ ಮಹಾಮಾರಿ ಕಾಯಿಲೆ ಎಂದು ನ್ಯಾಯಮೂರ್ತಿ ಹಾಗೂ ಉಪಲೋಕಾಯುಕ್ತ ಬಿ.…
ಪಂಚಾಯತು ವಿಧಿಸುವ ವಿವಿಧ ಕರಗಳ ಬಗ್ಗೆ ನಿಮಗೆ ಅರಿವಿದೆಯೆ? ನಿಮ್ಮ ಪಂಚಾಯತುಗಳಿಗೆ ಸರಕಾರದಿಂದ…