ಸುಬ್ರಹ್ಮಣ್ಯ:ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದಲ್ಲಿ ಇಂದು ರಾಜ್ಯ ಮಟ್ಟದ ಕಬಡ್ಡಿ ತೀರ್ಪುಗಾರರ ಪರೀಕ್ಷೆ ನಡೆಯಿತು.
ಅನುಗ್ರಹ ಎಜುಕೇಶನ್ ಟ್ರಸ್ಟ್ ನ ಅಧ್ಯಕ್ಷ ಗಣೇಶ್ ಪ್ರಸಾದ್ ಉದ್ಘಾಟಿಸಿದರು. ಸುಳ್ಯ ತಾಲೂಕು ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಅಧ್ಯಕ್ಷ ಮಾಧವ ಬಿ.ಕೆ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ರಾಜ್ಯ ಕಬಡ್ಡಿ ತೀರ್ಪುಗಾರರ ಮಂಡಳಿ ಅಧ್ಯಕ್ಷ ಷಣ್ಮುಗಂ, ಜಿಲ್ಲಾ ಕಬಡ್ಡಿ ಅಸೋಸಿಯೇಷನ್ ನ ಕಾರ್ಯಾಧ್ಯಕ್ಷ ರತನ್ ಕುಮಾರ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಪುಷೋತ್ತಮ ಪೂಜಾರಿ, ಜಿಲ್ಲಾ ಕಬಡ್ಡಿ ತೀರ್ಪುಗಾರರ ಮಂಡಳಿ ಅಧ್ಯಕ್ಷ ಕೃಷ್ಣಾನಂದ, ಜಿಲ್ಲಾ ಕಬಡ್ಡಿ ಅಸೋಸಿಯೇಷನ್ ಉಪಾಧ್ಯಕ್ಷ ಸುಧಾಕರ ರೈ, ಕುಮಾರಸ್ವಾಮಿ ವಿದ್ಯಾಲಯದ ಮುಖ್ಯೋಪಾಧ್ಯಾಯಿನಿ ವಿದ್ಯಾರತ್ನ, ಸುಳ್ಯ ತಾಲೂಕು ಕಬಡ್ಡಿ ತೀರ್ಪುಗಾರರ ಮಂಡಳಿ ಅಧ್ಯಕ್ಷ ಮಾಯಿಲಪ್ಪ ಕೆ, ಸುಳ್ಯ ತಾಲೂಕು ಕಬಡ್ಡಿ ಅಸೋಸಿಯೇಷನ್ ಕಾರ್ಯದರ್ಶಿ ಕೆ.ಟಿ ವಿಶ್ವನಾಥ ಉಪಸ್ಥಿತರಿದ್ದರು. ಶಿವರಾಮ ಏನೆಕಲ್ಲು ಸ್ವಾಗತಿಸಿ, ಕೆ.ಟಿ ವಿಶ್ವನಾಥ ವಂದಿಸಿದರು. ದೊಡ್ಡಣ್ಣ ಬರೆಮೇಲು ಕಾರ್ಯಕ್ರಮ ನಿರೂಪಿಸಿದರು. 150 ಜನ ತೀರ್ಪುಗಾರರ ಪರೀಕ್ಷೆಗೆ ಹಾಜರಾಗಿದ್ದಾರೆ.