ಮಂಗಳೂರು :2019-20 ನೇ ಸಾಲಿನ ರಾಜ್ಯ ಮಟ್ಟದ ಯುವಜನ ಮೇಳವನ್ನು ಫೆ.14 ರಿಂದ 16 ವರೆಗೆ ಗದಗ ಜಿಲ್ಲೆಯ ಗಜೇಂದ್ರಗಡದಲ್ಲಿ ನಡೆಯಲಿದೆ.
ಮೈಸೂರು ವಿಭಾಗ ಮಟ್ಟದ ಯುವಜನ ಮೇಳದಲ್ಲಿ ಭಾಗವಹಿಸಿ ವೈಯಕ್ತಿಕ ಸ್ಪರ್ಧೆಯಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಹಾಗೂ ಗುಂಪು ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದವರು ಮಾತ್ರ ರಾಜ್ಯ ಮಟ್ಟದ ಯುವಜನ ಮೇಳದಲ್ಲಿ ಭಾಗವಹಿಸಲು ಅರ್ಹರಾಗಿರುತ್ತಾರೆ.
ವಿಜೇತ ಸ್ಪರ್ಧಾಳುಗಳು ಫೆ.14 ರಂದು ಬೆಳಿಗ್ಗೆ 11 ಗಂಟೆಯ ಒಳಗಾಗಿ ಗಜೇಂದ್ರಗಡದಲ್ಲಿ ಎ.ಪಿ.ಎಂ.ಸಿ. ಎದುರುಗಡೆ ನಿರ್ಮಾಣವಾದ ಮುಖ್ಯ ವೇದಿಕೆಯಲ್ಲಿ ನೋಂದಾಯಿಸಿಕೊಳ್ಳಬೇಕು.
ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದ.ಕ.ಜಿಲ್ಲೆ, ಮಂಗಳೂರು, ದೂರವಾಣಿ ಸಂಖ್ಯೆ 0824-2451264 ನ್ನು ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel