ಮಂಗಳೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಸಂಯುಕ್ತಾಶ್ರಯದಲ್ಲಿ 2019-20ನೇ ಸಾಲಿನ ರಾಜ್ಯ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು ಫೆಬ್ರವರಿ 28 ರಿಂದ ಮಾರ್ಚ್ 1 ರವರೆಗೆ ಧಾರವಾಡ ಜಿಲ್ಲೆಯಲ್ಲಿ ನಡೆಯಲಿದೆ.
ಕ್ರೀಡಾಕೂಟದಲ್ಲಿ ಭಾಗವಹಿಸಲು ಫೆಬ್ರವರಿ 28 ರಂದು ಬೆಳಿಗ್ಗೆ 8 ಗಂಟೆಯೊಳಗೆ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕೀಡಾ ಇಲಾಖೆ, ಧಾರವಾಡ ಜಿಲ್ಲಾ ಕ್ರೀಡಾಂಗಣ ಇಲ್ಲಿ ವರದಿ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ.
ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಭಾಗವಹಿಸುವ ಕ್ರೀಡಾಪಟುಗಳು ಸರ್ಕಾರಿ ಆದೇಶದನ್ವಯ ವಿಶೇಷ ಸಾಂದರ್ಭಿಕ ರಜೆ ಪಡೆಯಲು ಅರ್ಹರಿರುತ್ತಾರೆ. ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಭಾಗವಹಿಸಲು ನಿಯಮನುಸಾರ ಸಂಬಂಧಿಸಿದ ಮಾತೃ ಇಲಾಖೆಯಿಂದ ಭತ್ಯೆ ಪಡೆಯಲು ಅರ್ಹರಿರುತ್ತಾರೆ. ರಾಜ್ಯ ನೌಕರರ ಕ್ರೀಡಾ ಕೂಟದ ನಿಯಮ ಮತ್ತು ಷರತ್ತುಗಳನ್ನು ಪರಿಪಾಲಿಸಲು ತಿಳಿಸಲಾಗಿದೆ.
ಫೆಬ್ರವರಿ 1 ಮತ್ತು 10 ರಂದು ಮಂಗಳಾ ಕ್ರೀಡಾಂಗಣ ಹಾಗೂ ಸರ್ಕಾರಿ ನೌಕರರ ಭವನದಲ್ಲಿ ನಡೆಸಲಾದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಭಾಗವಹಿಸಿ ವೈಯಕ್ತಿಕ ಸ್ಪರ್ಧೆಯಲ್ಲ್ಲಿ ಪ್ರಥಮ, ದ್ವಿತೀಯ, ಹಾಗೂ ಗುಂಪು ಸ್ಪರ್ಧೆಯಲ್ಲಿ (ರಿಲೇ ಸಹಿತ) ಪ್ರಥಮ ಸ್ಥಾನ ಪಡೆದವರು ಮಾತ್ರ ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಭಾಗವಹಿಸಲು ಆಯ್ಕೆಯಾಗಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳಾ ಕ್ರೀಡಾಂಗಣ, ಮಂಗಳೂರು ದೂರವಾಣಿ ಸಂಖ್ಯೆ: 0824-2451264 ಸಂಪರ್ಕಿಸಬಹುದು ಎಂದು ಉಪನಿರ್ದೇಶಕರು, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.
ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಹಾಗೂ ಸಿಬಂದಿ ವರ್ಗದವರ ಜಂಟಿ…
ನವೆಂಬರ್ 9 ಅಥವಾ 10 ರಿಂದ ದಕ್ಷಿಣ ಕರ್ನಾಟಕದಲ್ಲಿ ಹಿಂಗಾರು ಮಳೆ ಮತ್ತೆ…
ಸಮಸ್ತ ಕನ್ನಡಿಗರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು.
ಗ್ರಾಮೀಣ ಮಹಿಳೆಯರು ಸರ್ಕಾರದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಅರಣ್ಯ, ಪರಿಸರ ಸಚಿವ ಈಶ್ವರ ಬಿ.ಖಂಡ್ರೆ…
ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ 2024025 ನೇ ಸಾಲಿನಲ್ಲಿ ಎಫ್‌ಎಕ್ಯೂ ಗುಣಮಟ್ಟದ…
ದೀಪಾವಳಿ ಅಂಗವಾಗಿ ಚಿಕ್ಕಮಗಳೂರು ಜಿಲ್ಲೆಯ ಬಿಂಡಿಗ ದೇವಿರಮ್ಮ ಬೆಟ್ಟಕ್ಕೆ ಸಾವಿರಾರು ಭಕ್ತರು ಆಗಮಿಸಿ,…