ಪುತ್ತೂರು: ಮಾಜಿ ಸಚಿವ ಬಿ. ರಮಾನಾಥ ರೈ ಅವರು ಪುತ್ತೂರಿನ ಮೊಟ್ಟೆತ್ತಡ್ಕದಲ್ಲಿರುವ ರಾಷ್ಟ್ರೀಯ ಗೇರು ಸಂಶೋಧನಾ ಕೇಂದ್ರಕ್ಕೆ ಭೇಟಿ ನೀಡಿದರು.
ಗೇರು ತೋಟದ ಬೆಳೆಸುವಿಕೆ, ತಳಿ ಗುಣಧರ್ಮಗಳು, ಭೂಮಿ ತಯಾರಿ, ಗೊಬ್ಬರ ಮತ್ತು ಕೀಟ, ರೋಗ ನಿರ್ವಹಣೆ ಮತ್ತು ಮಾರುಕಟ್ಟೆಯ ಬಗ್ಗೆ ಮಾಹಿತಿ ಪಡೆದರು. ಹೊಸ ಹೈಬ್ರಿಡ್ ತಳಿಯಾದ ಹೆಚ್-130 ಬಗ್ಗೆ ಮಾಹಿತಿ ಪಡೆದು ಅದರ ಗುಣಧರ್ಮಗಳ ಮತ್ತು ನಿರ್ವಹಣೆ ಬಗ್ಗೆ ಬಹಳ ಆಸಕ್ತಿಯಿಂದ ಆಲಿಸಿದರು. ಜೊತೆಗೆ ಘನಸಾಂದ್ರ ಪದ್ಧತಿ ಕೃಷಿಯ ಬಗ್ಗೆ ವಿಚಾರಿಸಿ ಮೂರು ಎಕರೆ ಜಾಗದಲ್ಲಿ ಕೃಷಿ ಮಾಡುವ ಬಗ್ಗೆ ಮಾಹಿತಿ ಪಡೆದು ಗಿಡಗಳನ್ನು ತೆಗೆದುಕೊಳ್ಳುವ ಆಸಕ್ತಿ ವ್ಯಕ್ತಪಡಿಸಿದರು.ಬಳಿಕ ಕೊಯಿಲಿನ ನಂತರ ಸಂಸ್ಕರಣೆ ಹಾಗೂ ಗೇರು ಹಣ್ಣಿನ ಉಪಯೋಗದ ಬಗ್ಗೆ ಮಾಹಿತಿ ಪಡೆದರು. ಗೇರು ಹಣ್ಣಿನಿಂದ ತಯಾರಿಸಿದ ವಿವಿಧ ಉತ್ಪನ್ನಗಳು ಅಂದರೆ ಜ್ಯೂಸ್, ಜಾಮ್, ಜೆಲ್ಲಿ, ಕುರ್ಕುರೆ, ಮೌತ್ ಫ್ರೆಶ್ನೆರ್ ಮುಂತಾದ ತಯಾರಿಗಳನ್ನು ವೀಕ್ಷಿಸಿ ಮೆಚ್ಚುಗೆ ಸೂಚಿಸಿದರು. ಸಂಸ್ಥೆಯ ಬೆಳವಣಿಗೆ ಹಾಗೂ ಸಾಧನೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ನಿರ್ದೇಶಕರಾದ ಡಾ. ಎಂ.ಜಿ. ನಾಯಕ್, ವಿಜ್ಞಾನಿಗಳಾದ ಡಾ. ಶಂಸುದ್ದೀನ್, ಡಾ. ಪ್ರೀತಿಯವರು ಹಾಜರಿದ್ದು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಕಾವು ಹೇಮನಾಥ ಶೆಟ್ಟಿ, ಪ್ರಸಾದ್ ಕೌಶಲ್ ಶೆಟ್ಟಿ, ನೇಮಾಶ್ವ ಸುವರ್ಣ ಮತ್ತಿತರು ಉಪಸ್ಥಿತರಿದ್ದರು.
ನೂರಾರು ಕೋಟಿ ರೂಪಾಯಿ ಖರ್ಚು ಮಾಡಿ ಮಲೆನಾಡಿನ ಗ್ರಾಮೀಣ ಭಾಗಕ್ಕೂ ಶುದ್ಧವಾಗಿರುವ ಕುಡಿಯುವ…
ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ ಸುಮಾರು 250…
ರಾಜ್ಯದ ಕಾಡಂಚಿನ ಪ್ರದೇಶದಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಾಳೆ ಮಂಡಿಸಲಿರುವ ಕೇಂದ್ರ ಬಜೆಟ್ 2025…
ಬೆಂಗಳೂರಿನ ಯಲಹಂಕ ತಾಲ್ಲೂಕಿನ ಒಟ್ಟು 5678 ಎಕರೆ ಗುಂಟೆ ಪ್ರದೇಶವನ್ನು ಪರಿಸರ ಸಂರಕ್ಷಣೆ…
ಬೆಳೆಗಾರರಿಗೆ ತರಬೇತಿ ನೀಡಲು ತರಬೇತಿ ಕೇಂದ್ರ ಸ್ಥಾಪನೆ ಮಾಡಲಾಗುವುದು ಎಂದು ಕರ್ನಾಟಕ ಕೊಳಚೆ…